Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರದ...

ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರದ ಹೈಡ್ರಾಮ: ಎಚ್.ವಿಶ್ವನಾಥ್

8 March 2023 11:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರದ ಹೈಡ್ರಾಮ: ಎಚ್.ವಿಶ್ವನಾಥ್

ಬೆಂಗಳೂರು, ಮಾ. 8: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣದಲ್ಲಿ ಸರಕಾರ ಹೈಡ್ರಾಮಾ ಮಾಡುತ್ತಿದೆ. ಆರೋಪಿ ವಿರೂಪಾಕ್ಷಪ್ಪ ಮಾಡಾಳ್‍ನಲ್ಲಿರುವುದು ಪೊಲೀಸರಿಗೆ ಗೊತ್ತಿದ್ದರೂ ಬಂಧಿಸದೇ ಬೆಂಗಳೂರಿನಲ್ಲಿ ಹುಡುಕುವ ನಾಟಕವಾಡಿದ್ದಾರೆ. ಈಗ ತುರ್ತಾಗಿ ಜಾಮೀನು ಸಹ ಕೊಡಿಸಲಾಗಿದೆ ಇದೆಲ್ಲ ಬಿಜೆಪಿ ಸರಕಾರದ ಹೈಡ್ರಾಮಾ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ದೂರಿದ್ದಾರೆ.

ಬುಧವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣದಲ್ಲಿ ಯಾವುದೇ ಸರಕಾರದ ವಕೀಲರ ನೇಮಕವಾಗಿಲ್ಲ. ತನಿಖಾ ತಂಡದಲ್ಲಿದ್ದ ಇಬ್ಬರು ಲೋಕಾಯುಕ್ತ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೈಕೋರ್ಟ್ ನೀಡಿರುವ ಜಾಮೀನು ವಿಚಾರವಾಗಿ ವಕೀಲರ ಸಂಘ ಸುಪ್ರೀಂ ಕೋರ್ಟ್‍ಗೆ ಪತ್ರ ಬರೆದಿರುವುದನ್ನು ಗಮನಿಸಬೇಕು. ಐವತ್ತು ವರ್ಷಗಳ ನನ್ನ ರಾಜಕಾರಣದಲ್ಲಿ ಒಬ್ಬ ಶಾಸಕನ ಮನೆಯಲ್ಲಿ ಇಷ್ಟೊಂದು ಹಣ ಸಿಗುತ್ತದೆ ಎಂದರೆ ಯಾವ ಮಟ್ಟಿನ ಅವ್ಯವಹಾರ, ಲೂಟಿ ನಡೆಯುತ್ತಿದೆ ಎಂಬುದನ್ನೂ ಊಹಿಸಲು ಅಸಾಧ್ಯ. ನಮ್ಮ ರಾಜ್ಯ ರಾಜಕಾರಣ ಎತ್ತ ಕಡೆ ಸಾಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ವಿರೂಪಾಕ್ಷಪ್ಪನ ಮನೆಯಲ್ಲಿ ಕೋಟಿ ಕೋಟಿ ರೂಪಾಯಿ ಸಿಕ್ಕಿಬಿದ್ದರೂ ರಾಜ್ಯ ಸರಕಾರ ಕಣ್ಮುಚ್ಚಿ ಕುಳಿತಿದೆ. ಮಾಡಾಳ್ ವಿರೂಪಾಕ್ಷಪ್ಪ ಶರಣಾಗತಿ ಆಗದೆ ಬಿಜೆಪಿ ಪಕ್ಷ ಮತ್ತು ಸರಕಾರವನ್ನು ಹರಾಕು ಹಾಕುತ್ತಿದ್ದಾರೆ. ನೈತಿಕತೆ ಇದ್ದಿದ್ದರೆ ಅವರು ಶಾಸಕ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು. ಈ ಬೆಳವಣಿಗೆಯಿಂದ ಜನರು ಇಡೀ ವ್ಯವಸ್ಥೆಯನ್ನು ಅನುಮಾನ ದೃಷ್ಟಿಯಿಂದ ನೋಡುವಂತಾಗಿದೆ. ಬಿಜೆಪಿ ಪಕ್ಷಕ್ಕೆ ಒಂದು ಘನತೆ ಇದೆ. ನಿಮ್ಮ ಈ ಕ್ರಿಮಿನಲ್ ಚಟುವಟಿಕೆಗಳಿಂದ ಪಕ್ಷವನ್ನು ಹರಾಜು ಹಾಕಬೇಡಿ ಎಂದು ಹೇಳಿದರು.

ಲಂಚ ಪ್ರಕರಣದಲ್ಲಿ ಮೊದಲ ಆರೋಪಿ ವಿರೂಪಾಕ್ಷಪ್ಪ ತಲೆಮರೆಸಿಕೊಂಡು ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಬೆಂಬಲಿಗರು ಮೆರವಣಿಗೆ ಮಾಡುತ್ತಾರೆ ಎಂದರೆ ಸರಕಾರ ಎಲ್ಲಿದೆ ಎನ್ನುವ ಪ್ರಶ್ನೆ ಮೂಡುತ್ತದೆ. ಮೆರವಣಿಗೆ ಮಾಡುವ ಅವಕಾಶ ಕೊಟ್ಟವರು ಯಾರು. ಪೊಲೀಸರ ಎದುರಿನಲ್ಲೇ ಆರೋಪಿಯ ಮೆರವಣಿಗೆ ನಡೆಯುತ್ತದೆ ಎಂದಾದರೆ ಬಿಜೆಪಿ ಸರಕಾರ ಭ್ರ‍ಷ್ಟಾಚಾರವನ್ನು ವೈಭವೀಕರಿಸುವ ಸ್ಥಿತಿಗೆ ಬಂದಿದೆಯೇ, ಮುಂದೆ ಒಬ್ಬ ಕ್ರಿಮಿನಲ್ ಕೂಡ ಇದೇ ರೀತಿ ನನಗೂ ಮೆರವಣಿಗೆಗೆ ಅವಕಾಶ ಮಾಡಿಕೊಡಿ ಎಂದು ಕೇಳಿದರೆ ಆಗಲೂ ಅವಕಾಶ ಕೊಡುವಿರಾ ಎಂದು ಎಚ್.ವಿಶ್ವನಾಥ್ ಪ್ರಶ್ನಿಸಿದರು.

ಭ್ರ‍ಷ್ಟಾಚಾರದ ರಾಜಕಾರಣ ನಡೆಸುತ್ತಿರುವವರು ಪ್ರಧಾನಿ ಮೋದಿ ಅವರ ವಿರೋಧಿಗಳು. ನರೇಂದ್ರ ಮೋದಿ ಭ್ರ‍ಷ್ಟಾಚಾರ ರಹಿತ ಆಡಳಿತ ನಡೆಸಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯ ಕೆಲವರು ಪ್ರಧಾನಿ ಮೋದಿ ಅವರ ವಿರೋಧಿಗಳಾಗಿದ್ದಾರೆ. ಫೋನ್ ಪೇ ಹೋಗಿ ಅಡಿಕೆ ಮರ ಪೇ ಆಗಿದೆ. ಬಿಜೆಪಿ ಸರಕಾರದಲ್ಲಿ ಶಾಸಕ ವಿರೂಪಾಕ್ಷಪ್ಪ ಮಾಡಾಳ ಅವರಂತಹ ತಳಿ ಬೇಕಾ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ಲೂಟಿಮಯ:

‘ಸರಕಾರದ ಬಹುತೇಕ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿದೆ. ಶಾಸಕಾಂಗ ಭ್ರಷ್ಟಾಚಾರದ ಸಮುದ್ರವಾದರೆ ಕಾರ್ಯಾಂಗ ನದಿಯಾಗುತ್ತಿದೆ. ಘಜ್ನಿ, ಖಿಲ್ಜಿಗಿಂತ ಹೆಚ್ಚಾಗಿ ಐಎಎಸ್, ಐಪಿಎಸ್‍ಗಳು 35 ವರ್ಷಗಳವರೆಗೆ ಲೂಟಿ ಹೊಡೆಯುತ್ತಾರೆ. ಎಸ್ಕಾಂ, ನೀರಾವರಿ, ಅಂಬೇಡ್ಕರ್ ನಿಗಮ, ಬೋಡ್ರ್ಸ್ ಅಂಡ್ ಕಾರ್ಪೊರೇಷನ್, ವಸತಿ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಸರಕಾರ ಲೂಟಿಮಯವಾಗುತ್ತಿದೆ. ಇನ್ನೂ ಈ ಸರಕಾರ ಜೀವಂತವಾಗಿದೆಯಾ ಎಂದು ಜನರು ಪ್ರಶ್ನಿಸುವಂತಾಗಿದೆ. ನ್ಯಾಯಾಲಯ, ಅಧಿಕಾರಶಾಹಿಗಳ ಮೇಲೆ ಜನರ ನಿರೀಕ್ಷೆಗಳು ಹುಸಿಯಾಗಿವೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತಕ್ಕೆ ಬಹಳ ಜವಾಬ್ದಾರಿ ಇದೆ. ಲೋಕಾಯುಕ್ತ ಎಲ್ಲವನ್ನೂ ಕೈಗೆತ್ತಿಕೊಂಡು ತನಿಖೆ ನಡೆಸಬೇಕು’ ಎಂದು ಎಚ್.ವಿಶ್ವನಾಥ್ ಮನವಿ ಮಾಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X