ಬಸ್ರೂರು ಶಾಲೆಯ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ
ಕುಂದಾಪುರ, ಮಾ.8: ಪುಸ್ತಕಗಳನ್ನು ಓದುವುದರಿಂದ ಆತ್ಮವಿಶ್ವಾಸ, ಏಕಾಗ್ರತೆ, ಶಿಸ್ತು, ಸೃಜನಶೀಲತೆ ಹೆಚ್ಚುತ್ತದೆ. ಪುಸ್ತುಕಗಳು ಜ್ಞಾನ ಭಂಡಾರವಿದ್ದಂತೆ. ಪುಸ್ತಕಗಳ ಅಧ್ಯಯನದಿಂದ ಜ್ಞಾನವೃದ್ಧಿಯಾಗುವ ಮೂಲಕ ಮಾನವೀಯ ಮೌಲ್ಯಗಳು ಹೆಚ್ಚುತ್ತವೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಮುತ್ತಯ್ಯ ಶೆಟ್ಟಿ ಹೇಳಿದ್ದಾರೆ.
ಸಾಹಿತಿ ಪಾರ್ವತಿ ಜಿ.ಐತಾಳ್ ಬಸ್ರೂರು ಶ್ರೀಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಪುಸ್ತಕಗಳನ್ನು ಶಾಲಾ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಅವರು ಮಾತನಾಡು ತಿದ್ದರು.
ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಸಂತೋಷ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಆಶಾ ಸಂತೋಷ್ ಶೆಟ್ಟಿ, ಅಂಪಾರು ಗ್ರಾಪಂ ಮಾಜಿ ಸದಸ್ಯೆ ರೋಷಣಿ, ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್‌ನ ಟ್ರಸ್ಟಿಗಳಾದ ಅಶೋಕ್ ಎನ್, ಸುಧೀರ್ ಕುಮಾರ್, ರಮೇಶ್ ಪೂಜಾರಿ, ಗಣೇಶ್ ಎಸ್.ಬೀಜಾಡಿ, ಕೆಆರ್ ಎಸ್‌ಎಂಇ ಟ್ರಸ್ಟ್‌ನ ಅಬ್ದುಲ್ ಜುನೈದ್, ಶಾಲಾ ಪ್ರಾಂಶುಪಾಲೆ ಅನಿತಾ ಆಲಿಸ್ ಡಿಸೋಜ ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ಸಂಜಿತ್ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.