ಮಾ.9ರ ಬಂದ್ ಕರೆ ವಾಪಾಸ್: ಕಾಂಗ್ರೆಸ್

ಉಡುಪಿ, ಮಾ.8: ಬಿಜೆಪಿ ಸರಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9 ರಂದು ಬೆಳಗ್ಗೆ 9 ಗಂಟೆಯಿಂದ 11ರವರೆಗೆ ಎರಡು ಗಂಟೆಗಳ ಕಾಲ ಮಾಡಲುದ್ದೇಶಿಸಿದ್ದ ಸಾಂಕೇತಿಕ ಬಂದ್ ಕರೆಯನ್ನು ಕಾಂಗ್ರೆಸ್ ಹಿಂಪಡೆದಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಸೇರಿದಂತೆ ವಿವಿಧ ಪರೀಕ್ಷೆಗಳು ಇರುವ ಕಾರಣ ಬಂದ್‌ನಿಂದ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಿಳಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ನಾಯಕರು ಕೈಗೊಂಡಿದ್ದಾರೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





