Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶದಲ್ಲಿ ಗುಣ ಮಟ್ಟದ ಶೈಕ್ಷಣಿಕ...

ದೇಶದಲ್ಲಿ ಗುಣ ಮಟ್ಟದ ಶೈಕ್ಷಣಿಕ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಬೆನ್ನೆಲುಬು: ಸಚಿವ ಡಾ. ಅಶ್ವತ್ಥ ನಾರಾಯಣ್

8 March 2023 8:37 PM IST
share
ದೇಶದಲ್ಲಿ ಗುಣ ಮಟ್ಟದ ಶೈಕ್ಷಣಿಕ ಸುಧಾರಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಬೆನ್ನೆಲುಬು: ಸಚಿವ ಡಾ. ಅಶ್ವತ್ಥ ನಾರಾಯಣ್

ಸುಳ್ಯ: ಇಪ್ಪತ್ತೊಂದನೇ ಶತಮಾನವು ಜ್ಞಾನಾಧಾರಿತ ಶತಮಾನ. ಜ್ಞಾನಾಭಿವೃದ್ಧಿಗೆ ಒತ್ತು ನೀಡುವ ಕಾರ್ಯವನ್ನು ಕೇಂದ್ರ ಸರಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ಉತ್ಕೃಷ್ಠವಾದ ಸುಧಾರಣೆಗಳನ್ನು ಮತ್ತು ಅಭಿವೃದ್ಧಿಯನ್ನು ಜ್ಞಾನಕ್ಷೇತ್ರಕ್ಕೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ಹೇಳಿದರು. 

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಾಜ್ಯದ ಪ್ರತಿ ತಾಲೂಕಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗಿದೆ. ಗುಣಮಟ್ಟದ ಶಿಕ್ಷಣ ನೀಡಲು ಆದ್ಯತೆ ಕೊಡಲಾಗಿದೆ. ಈಗಾಗಲೇ ಕೆಲವೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಹೊಸದಾಗಿ ಕಾಲೇಜು ಆರಂಭಿಸಲಾಗಿದೆ. ಹೊಸದಾಗಿ ಆರಂಭಗೊಂಡ ಕಡಬ ತಾಲೂಕಿನ ಕೇಂದ್ರದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಚಿಂತನೆ ನಡೆಸಲಾಗುವುದು. ಗುಣಮಟ್ಟದ ಶಿಕ್ಷಣವೇ ಆಧುನಿಕ ಯುಗದ ಪ್ರಧಾನ ಆಧ್ಯತೆಯಾಗಿದೆ. ಆದುದರಿಂದ ಈಗಾಗಲೇ ಇರುವ ಪದವಿ ಕಾಲೇಜುಗಳಲ್ಲಿ ಗುಣ ಮಟ್ಟದ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ. ರಾಜ್ಯದಲ್ಲಿ ಸುಮಾರು 440 ಕಾಲೇಜುಗಳಿವೆ. ಇದರಲ್ಲಿ 360 ಕಾಲೇಜುಗಳು ಗುಣಮಟ್ಟದ ಗ್ರೇಡ್ ಅನ್ನು ನ್ಯಾಕ್ ನಿಂದ ಪಡೆದಿದೆ. ಎ, ಎ ಪ್ಲಸ್, ಬಿ, ಬಿ ಪ್ಲಸ್ ಶ್ರೇಣಿಯನ್ನು ಹೆಚ್ಚಿನ ಕಾಲೇಜುಗಳು ಪಡೆದಿವೆ. ಸುಮಾರು 10 ಕಾಲೇಜುಗಳು ಸಿ ಶ್ರೇಯಾಂಕ ಗಳಿಸಿವೆ. ಇದು ರಾಜ್ಯದ ಪದವಿ ಕಾಲೇಜುಗಳಲ್ಲಿ ಉತ್ಕೃಷ್ಠವಾದ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎನ್ನುವುದಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಗುಣ ಮಟ್ಟದ ಶಿಕ್ಷಣ ದೊರಕುವ ಕಾರಣ ಇಲ್ಲಿನ ಕಾಲೇಜುಗಳಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಪ್ರಧಾನಮಂತ್ರಿಗಳು ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟಿಸಲಿದ್ದಾರೆ. ರೋಡ್ ಫಾರ್ ಡೆವಲಪ್‍ಮೆಂಟ್ ಧ್ಯೇಯ ವ್ಯಾಖ್ಯೆಯ ಮೂಲಕ ರಸ್ತೆಗಳು ಗಣನೀಯವಾಗಿ ನಮ್ಮ ಕಾಲದಲ್ಲಿ ಅಭಿವೃದ್ಧಿಯಾಗಿದೆ. ದಶಪಥ ರಸ್ತೆಯು ಬೆಂಗಳೂರು-ಮೈಸೂರು-ಮಡಿಕೇರಿ ಮೂಲಕ ಬಂಟ್ವಾಳ ತನಕ ವಿಸ್ತೃತವಾಗಲಿದೆ. ಮುಂದೆ ಮೈಸೂರಿನಿಂದ ಮಡಿಕೇರಿ ತನಕ, ಮಡಿಕೇರಿಯಿಂದ ಬಂಟ್ವಾಳ ತನಕ ರಸ್ತೆ ಕಾಮಗಾರಿ ಆರಂಭವಾಗಲಿದೆ. ಈ ಮೂಲಕ ಬೆಂಗಳೂರಿನಿಂದ-ಮೈಸೂರು – ಮಡಿಕೇರಿ ಮೂಲಕ ಬಂಟ್ವಾಳ ತನಕ ದಶಪಥ ಹೆದ್ದಾರಿ ರಚಿತವಾಗಲಿದೆ. ಬಹುದಿನಗಳ ಬೇಡಿಕೆಯಾದ ಇದು ಜನತೆಗೆ ಹೆಚ್ಚು ಅನುಕೂಲತೆ ಒದಗಿಸಲಿದೆ. ಇದು ಅಭಿವೃದ್ಧಿಗೆ ಪೂರಕವಾದ ರಸ್ತೆಯಾಗಿದೆ. ಇದರೊಂದಿಗೆ ಬ್ರಾಡ್‍ಗೇಜ್ ರೈಲು ವ್ಯವಸ್ಥೆ, ವಂದೇ ಭಾರತ್ ರೈಲು ವ್ಯವಸ್ಥೆ ಈಗಾಗಲೇ ಚಾಲನೆಗೊಂಡು ಜನತೆಯ ಉಪಯೋಗಕ್ಕೆ ಸಮರ್ಪಿತವಾಗಿದೆ. ಮುಂದೆ ಅತ್ಯಾಧುನಿಕ ರೈಲುಗಳು ದೇಶಾದ್ಯಂತ ಓಡಾಟ ನಡೆಸಲಿದೆ. ಇವುಗಳು ಐಷಾರಾಮಿ ಕಾರುಗಳಿಗೆ ಕಡಿಮೆ ಇಲ್ಲದಂತಹ ವ್ಯವಸ್ಥೆಗಳನ್ನು ಹೊಂದಿರಲಿದೆ. ಈ ಬಾರಿ ರಾಜ್ಯದಲ್ಲಿ 150ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿಯು ಜಯಭೇರಿ ಬಾರಿಸಿ ಮತ್ತೆ ಸರಕಾರ ನಡೆಸಲಿದೆ ಎಂದು ಅವರು ತಿಳಿಸಿದರು.

ಸ್ಕಿಲ್ ಕಲೆಕ್ಟ್ ಅನ್ನುವ ಪ್ಲಾಟ್‍ಫಾರಂ ಅನ್ನು ವಿನೂತನವಾಗಿ ಜಾರಿಗೆ ತರಲಾಗಿದೆ. ಇದರಿಂದ ರಾಜ್ಯದ ಎಲ್ಲರೂ ಎಲ್ಲಿ ಓದಬೇಕು, ಏನು ಓದಬೇಕು, ರಾಜ್ಯ, ರಾಷ್ಟ್ರದಲ್ಲಿನ ಉದ್ಯೋಗವಕಾಶ, ವಿದೇಶದಲ್ಲಿನ ಉದ್ಯೋಗವಕಾಶದ ಬಗ್ಗೆ ಇದು ತಿಳಿಸುತ್ತದೆ. ಅಲ್ಲದೆ ವಿದೇಶಕ್ಕೆ ಉದ್ಯೋಗಕ್ಕೆ ತೆರಳುವವರಿಗೆ ತರಬೇತಿ, ಜ್ಞಾನ, ಕೌನ್ಸಿಲಿಂಗ್, ಪಾಸ್‍ ಪೋರ್ಟ್, ಮೈಗ್ರೇಷನ್ ಸರ್ಟಿಫಿಕೇಟ್, ಪ್ಲೇಸ್ ಮೆಂಟ್ ಇತ್ಯಾದಿಗಳನ್ನು ಸರಕಾರದಿಂದ ಮಾಡಿಕೊಡಲಾಗುತ್ತದೆ. ಸದೃಡ ಪ್ರಜೆಯ ನಿರ್ಮಾಣಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ರಾಜ್ಯ ಸರಕಾರ ಮಾಡಿದೆ. ಈ ಮೂಲಕ ಜನತೆ ಉದ್ಯೋಗ ಪಡೆಯಲು ಸರಕಾರ ಸಂಪೂರ್ಣ ಸಹಕಾರವನ್ನು ನೀಡಿದೆ ಎಂದು ನುಡಿದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಮನೋಜ್ ಸುಬ್ರಹ್ಮಣ್ಯ, ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಗ್ರಾ.ಪಂ.ಸದಸ್ಯೆ ಭಾರತಿ ದಿನೇಶ್ ಉಪಸ್ಥಿತರಿದ್ದರು.

share
Next Story
X