Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಉದ್ಯಾನವನ ನಿರ್ಮಾಣಕ್ಕೆ...

ಉಪ್ಪಿನಂಗಡಿ: ಉದ್ಯಾನವನ ನಿರ್ಮಾಣಕ್ಕೆ ವಿರೋಧ

8 March 2023 10:05 PM IST
share
ಉಪ್ಪಿನಂಗಡಿ: ಉದ್ಯಾನವನ ನಿರ್ಮಾಣಕ್ಕೆ ವಿರೋಧ

ಉಪ್ಪಿನಂಗಡಿ: ರಾಜ್ಯ ಹೆದ್ದಾರಿಗೆ ಸೇರಿದ ಜಾಗದಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ  ಗ್ರಾ.ಪಂ. ನಿರ್ಮಾಣ ಮಾಡಲುದ್ದೇಶಿಸಿದ ಪಾರ್ಕ್‍ನ ಕಾಮಗಾರಿಯನ್ನು ತಡೆದು, ಕೆಲಸಗಾರರನ್ನು ವಾಪಸ್ ಕಳಿಸಿದ ಘಟನೆ ಬುಧವಾರ ಉಪ್ಪಿನಂಗಡಿಯಲ್ಲಿ ನಡೆದಿದೆ.

ಇಲ್ಲಿನ ಗಾಂಧಿಪಾರ್ಕ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಲವು ವರ್ಷಗಳಿಂದ ಉದ್ಯಾನವನವೊಂದಿದ್ದು, ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗೆ ಈ ಪಾರ್ಕ್ ಬಲಿಯಾಗಿತ್ತು. ಬಳಿಕ ಉದ್ಯಾನವನ ನಿರ್ಮಿಸಲು ಗ್ರಾ.ಪಂ.ಗೆ ಸೂಕ್ತ ಜಾಗದ ವ್ಯವಸ್ಥೆಯಾಗಿರಲಿಲ್ಲ. ಕೆಲವು ತಿಂಗಳ ಹಿಂದೆ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಎದುರಿನಲ್ಲಿ ಲಭ್ಯವಿದ್ದ ಸ್ವಲ್ಪ ಜಾಗದಲ್ಲಿ  ಉದ್ಯಾನವನ ನಿರ್ಮಿಸುವ ಯೋಜನೆ ಗ್ರಾ.ಪಂ. ಹಾಕಿಕೊಂಡಿತ್ತು. ಇದರ ನಿರ್ಮಾಣಕ್ಕೆ ಗ್ರಾ.ಪಂ. ಅಧ್ಯಕ್ಷೆ ಉಷಾ ಮುಳಿಯ ಐದು ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿ, ಅದರ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಬುಧವಾರ ಇದರ ಕಾಮಗಾರಿಗೆ ಗುತ್ತಿಗೆದಾರರು ಮುಂದಾಗಿದ್ದು, ಹಿಟಾಚಿ ಸಹಿತ ಕೆಲಸಕ್ಕೆ ಜನ ಕಳುಹಿಸಿದ್ದರು. ಇದನ್ನು ಅರಿತ ಗ್ರಾ.ಪಂ. ಸದಸ್ಯೆ ವಿದ್ಯಾಲಕ್ಷ್ಮೀ ಪ್ರಭು ಹಾಗೂ ಗ್ರಾಮಸ್ಥ ಸಿದ್ದೀಕ್ ಕೆಂಪಿ ಸ್ಥಳಕ್ಕೆ ತೆರಳಿ, ಇದು ಪುತ್ತೂರು- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಜಾಗ. ಮುಂದೊಂದು ದಿನ ಹೆದ್ದಾರಿಯ ಅಗಲೀಕರಣ ನಡೆದರೆ, ಈ ಪಾರ್ಕ್ ಕೂಡಾ ಅದಕ್ಕೆ ಬಲಿಯಾಗಬೇಕಿದೆ. ಅಲ್ಲದೇ, ಇದು ನದಿಗೆ ಇಳಿಯುವ ಕಾಲು ದಾರಿಯಾಗಿದೆ. ಇಲ್ಲಿ ಉದ್ಯಾನವನ ನಿರ್ಮಿಸಿದರೆ ಕಾಲು ದಾರಿ ಬಂದ್ ಆಗಲಿದೆ. ಉಪ್ಪಿನಂಗಡಿಯಲ್ಲಿ ಈಗಲೇ ಪಾರ್ಕಿಂಗ್‍ಗೆ ಸ್ಥಳವಿಲ್ಲ. ಹೆಚ್ಚಿನ ದ್ವಿಚಕ್ರ ವಾಹನ ಸವಾರರು ಇಲ್ಲೇ ತಮ್ಮ ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಾರೆ. ಆದ್ದರಿಂದ ಇಲ್ಲಿ ಉದ್ಯಾನವನ ನಿರ್ಮಾಣವಾದರೆ ಉಪ್ಪಿನಂಗಡಿಯ ಪಾರ್ಕಿಂಗ್ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ ಎಂದು ತಿಳಿಸಿದರಲ್ಲದೆ, ಇಲ್ಲಿ ಉದ್ಯಾನವನ್ನು ನಿರ್ಮಿಸಲು ವಿರೋಧಿಸಿದರು. ಬಳಿಕ ಗುತ್ತಿಗೆದಾರರು ಕಾಮಗಾರಿಯನ್ನು ಕೈಬಿಟ್ಟು ಸ್ಥಳದಿಂದ ತೆರಳಿದರು.
ಈ ಸಂದರ್ಭ ಸ್ಥಳೀಯರಾದ ನಾಗೇಶ ಉಪಸ್ಥಿತರಿದ್ದರು.

share
Next Story
X