Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂದಿನಿಂದ PUC ವಾರ್ಷಿಕ ಪರೀಕ್ಷೆ:...

ಇಂದಿನಿಂದ PUC ವಾರ್ಷಿಕ ಪರೀಕ್ಷೆ: ಎಲ್ಲೆಡೆ ಬಿಗಿ ಭದ್ರತೆ

8 March 2023 6:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಂದಿನಿಂದ PUC ವಾರ್ಷಿಕ ಪರೀಕ್ಷೆ: ಎಲ್ಲೆಡೆ ಬಿಗಿ ಭದ್ರತೆ

ಬೆಂಗಳೂರು, ಮಾ. 8: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ(ಮಾ.9) ಆರಂಭವಾಗುತ್ತಿದ್ದು, ಈ ಬಾರಿ 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಮತ್ತೊಂದೆಡೆ ಪರೀಕ್ಷಾ ಪ್ರಕ್ರಿಯೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

ಬುಧವಾರ ವಿಧಾನಸೌಧದಲ್ಲಿ ಪರೀಕ್ಷೆ ಸಂಬಂಧ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್, 1,109 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 10.15ರಿಂದ 1.30ರವರೆಗೆ ಪರೀಕ್ಷೆ ನಡೆಯಲಿದೆ. 7,26,195 ವಿದ್ಯಾರ್ಥಿಗಳಲ್ಲಿ 3,63,698 ಬಾಲಕರು ಮತ್ತು 3,62,497 ಬಾಲಕಿಯರು ಸೇರಿದ್ದಾರೆ. ಒಟ್ಟು 5,716 ಕಾಲೇಜುಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಎಚ್ಚರವಹಿಸಲು 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲೂಕು ಜಾಗೃತ ದಳ ಮತ್ತು 2373 ವಿಶೇಷ ಜಾಗೃತ ದಳದವರನ್ನು ನೇಮಿಸಲಾಗಿದೆ ಎಂದು ಹೇಳಿದರು. 

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈ ವರ್ಷ ಕರ್ನಾಟಕ ಸೆಕ್ಯೂರ್ ಎಕ್ಸಾಂ ಸಿಸ್ಟಂ ಅನ್ನು ಮುಂದುವರಿಸಿದ್ದು, ಇದರ ನಿರ್ವಹಣೆಗೆ ಮಂಡಳಿಯಲ್ಲೇ ಸಿಸಿಟಿವಿ ನಿಗಾ ಕೇಂದ್ರ ರೂಪಿಸಿದೆ. ಇಲ್ಲಿ 24/7 ಕಣ್ಗಾವಲಿನಲ್ಲಿರಲಿದೆ. ಎಂದಿನಂತೆ ಟ್ಯೂಷನ್ ಸೆಂಟರ್, ತರಬೇತಿ ಕೇಂದ್ರಗಳು, ಜೆರಾಕ್ಸ್ ಅಂಗಡಿಗಳು, ಸೈಬರ್ ಕೇಂದ್ರಗಳು, ಕಂಪ್ಯೂಟರ್ ಕೇಂದ್ರ ಮತ್ತು ಗೇಮ್ ಸೆಂಟರ್‍ಗಳನ್ನು ಬಂದ್ ಮಾಡಿಸಿ ನಿಗಾವಹಿಸಲು ಕ್ರಮ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದರು.

ಇನ್ನೂ ಕೃಪಾಂಕ ವಿಚಾರ ಕಳೆದ ಬಾರಿಯ ನಿಯಮವೇ ಈ ವರ್ಷ ಕೂಡ ಅನ್ವಯವಾಗಲಿದೆ. ವಿದ್ಯಾರ್ಥಿಗಳು ಮೊದಲು ಪರೀಕ್ಷೆ ಕಡೆ ಗಮನ ನೀಡಿ ಚೆನ್ನಾಗಿ ಬರೆಯಿರಿ. ಪರೀಕ್ಷೆ ವೇಳೆ ಕೃಪಾಂಕದ ಬಗ್ಗೆ ಆಲೋಚನೆ ಬೇಡ ಎಂದ ಅವರು, ಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ರವಾನಿಸುವವರ ಮೇಲೆ ಕ್ರಮ ಜರುಗಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭದ್ರತಾ ಕೇಂದ್ರಗಳ ಬಳಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ವರ್ಗದವರ ಗಸ್ತು ನಿರ್ವಹಣೆ ಮಾಡಲಿದ್ದು, ಅನುಮಾನಸ್ಪದವಾಗಿ ನಡೆದುಕೊಳ್ಳುವವರನ್ನು ಬಂಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತ ಡಾ.ಆರ್.ವಿಶಾಲ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಆರ್.ರಾಮಚಂದ್ರನ್, ಗೋಪಾಲಕೃಷ್ಣ ಸೇರಿದಂತೆ ಪ್ರಮುಖರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X