Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಲಿಗೆ ಕ್ಯಾಮೆರಾ ಕಟ್ಟಿದ್ದ ಗೂಢಚಾರಿ...

ಕಾಲಿಗೆ ಕ್ಯಾಮೆರಾ ಕಟ್ಟಿದ್ದ ಗೂಢಚಾರಿ ಪಾರಿವಾಳ ಒಡಿಶಾ ಕರಾವಳಿಯಲ್ಲಿ ಪತ್ತೆ!

9 March 2023 2:08 PM IST
share
ಕಾಲಿಗೆ ಕ್ಯಾಮೆರಾ ಕಟ್ಟಿದ್ದ ಗೂಢಚಾರಿ ಪಾರಿವಾಳ ಒಡಿಶಾ ಕರಾವಳಿಯಲ್ಲಿ ಪತ್ತೆ!

ಪರಾದೀಪ್: ಕ್ಯಾಮೆರಾ ಮತ್ತು ಮೈಕ್ರೊಚಿಪ್‌ನಂತಿರುವ ಸಾಧನಗಳನ್ನು ಕಾಲಿಗೆ ಕಟ್ಟಿದ್ದ ಪಾರಿವಾಳವೊಂದನ್ನು ಜಗತ್‌ಸಿಂಗ್‌ಪುರ ಜಿಲ್ಲೆಯ ಪರಾದೀಪ್ ಕರಾವಳಿ ಪ್ರದೇಶದ ಆಚೆ ಮೀನುಗಾರಿಕೆ ದೋಣಿಯೊಂದು ಹಿಡಿದಿದೆ. ಈ ಪಾರಿವಾಳವನ್ನು ಗೂಢಚಾರಿಕೆಗೆ ಬಳಸಲಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕೆಲವು ಮೀನುಗಾರರು ಆ ಪಾರಿವಾಳವು ತಮ್ಮ ದೋಣಿಯ ಮೇಲೆ ಕುಳಿತಿರುವುದನ್ನು ಕೆಲವು ದಿನಗಳ ಹಿಂದೆ ಗಮನಿಸಿದ್ದರು. ಆ ಪಾರಿವಾಳವನ್ನು ಸೆರೆ ಹಿಡಿದಿದ್ದ ಮೀನುಗಾರರು, ನಂತರ ಅದನ್ನು ಬುಧವಾರ ಪರಾದೀಪ್‌ನ ಕರಾವಳಿ ಪೊಲೀಸರಿಗೆ ಹಸ್ತಾಂತರಿಸಿದ್ದರು.

ಈ ಕುರಿತು PTI ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಜಗತ್‌ಸಿಂಗ್‌ಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಆರ್.ಆರ್., "ಪಾರಿವಾಳವನ್ನು ನಮ್ಮ ಪಶು ತಜ್ಞರು ಪರೀಕ್ಷಿಸುತ್ತಿದ್ದಾರೆ. ಅದರ ಕಾಲಿಗೆ ಕಟ್ಟಿರುವ ಸಾಧನಗಳನ್ನು ಪರೀಕ್ಷಿಸಲು ನಾವು ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದ ನೆರವು ಪಡೆಯಲಿದ್ದೇವೆ. ಆ ಸಾಧನಗಳು ಕ್ಯಾಮೆರಾ ಹಾಗೂ ಮೈಕ್ರೊಚಿಪ್‌ನಂತೆ ಕಾಣುತ್ತಿವೆ" ಎಂದು ಹೇಳಿದ್ದಾರೆ.

ಇದಲ್ಲದೆ ಸ್ಥಳೀಯ ಪೋಲೀಸರಿಗೆ ಅರ್ಥವಾಗದ ಭಾಷೆಯಲ್ಲಿ ಪಾರಿವಾಳದ ರೆಕ್ಕೆಗಳ ಮೇಲೆ ಏನೋ ಬರೆದಿರುವಂತೆ ಕಾಣಿಸುತ್ತಿದೆ. "ಏನು ಬರೆಯಲಾಗಿದೆ ಎಂಬುದರ ಬಗ್ಗೆಯೂ ತಜ್ಞರ ನೆರವು ಪಡೆಯಲಾಗುವುದು" ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಹತ್ತು ದಿನಗಳ ಹಿಂದೆ ಕೊನಾರ್ಕ್‌ನಿಂದ 35 ಕಿಮೀ ದೂರದಲ್ಲಿ ದೋಣಿಯು ಲಂಗರು ಹಾಕಿದ್ದಾಗ ದೋಣಿಯ ಮೇಲೆ ಪಾರಿವಾಳ ಕಂಡು ಬಂದಿತ್ತು. ಅದು ಹತ್ತಿರಕ್ಕೆ ಬಂದಾಗ ಮೀನುಗಾರ ಪೀತಾಂಬರ ಬೆಹೆರಾ ಅದನ್ನು ಸೆರೆ ಹಿಡಿದಿದ್ದರು. "ಕಳೆದ ಹಲವಾರು ದಿನಗಳಿಂದ ಪಾರಿವಾಳಕ್ಕೆ ನುಚ್ಚಕ್ಕಿ ತಿನ್ನಿಸಿದ್ದೇನೆ" ಎಂದು ಬೆಹೆರಾ ತಿಳಿಸಿದ್ದಾರೆ.

ಇದನ್ನೂ ಓದಿ: ಜಯಲಲಿತಾಗೆ ಯಾರನ್ನೂ ಹೋಲಿಕೆ ಮಾಡಲು ಸಾಧ್ಯವಿಲ್ಲ: ಅಣ್ಣಾಮಲೈಗೆ ತಿರುಗೇಟು ನೀಡಿದ ಎಐಎಡಿಎಂಕೆ ನಾಯಕ

share
Next Story
X