ಮೊದಲ ದಿನ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರ: 23,771 ವಿದ್ಯಾರ್ಥಿಗಳು ಗೈರು, ಇಬ್ಬರು ಡಿಬಾರ್

ಬೆಂಗಳೂರು, ಮಾ.9: ದ್ವಿತೀಯ ಪಿಯುಸಿಯ ಪ್ರಥಮ ಭಾಷೆಯ ಪರೀಕ್ಷೆಯು ಗುರುವಾರದಂದು ನಡೆದಿದ್ದು, ಶೇ.95.55 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 5,33,797 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದು, 5,10,026 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. 23,771 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ.
ರಾಜ್ಯದಲ್ಲಿ ಎರಡು ಕಡೆ ಅಭ್ಯರ್ಥಿಗಳ ದುರಾಚಾರ ಕಂಡುಬಂದ ಹಿನ್ನೆಯಲ್ಲಿ ಅಭ್ಯರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಬೆಳಗಾವಿಯಲ್ಲಿ ಒಬ್ಬರನ್ನು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಒಬ್ಬರನ್ನು ಡಿಬಾರ್ ಮಾಡಲಾಗಿದೆ.
‘ಮಲ್ಲೇಶ್ವರಂನ ಸರಕಾರಿ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿನಿಯೊಬ್ಬರು ಹಿಜಾಬ್ ಧರಿಸಿ ಬಂದಿದ್ದರು. ಪ್ರಾಂಶುಪಾಲರು ಹಿಜಾಬ್ ತೆಗೆಯುವಂತೆ ತಿಳಿಸಿದ್ದಾರೆ. ಆದರೆ, ಕಡೆ ಕ್ಷಣದವರೆಗೂ ವಿದ್ಯಾರ್ಥಿನಿ ಹಿಜಾಬ್ ತೆಗೆಯಲು ನಿರಾಕರಿಸುತ್ತಲೇ ಇದ್ದರು. ಪರೀಕ್ಷೆ ಆರಂಭವಾಗುವ ಕೆಲ ನಿಮಿಷ ಮುನ್ನ ಆಕೆಯ ಮನವೊಲಿಸಿ ಹಿಜಾಬ್ ತೆಗೆಸಿ ಪರೀಕ್ಷೆ ಕೇಂದ್ರದೊಳಗೆ ಕಳುಹಿಸಿಕೊಡಲಾಯಿತು. ನಗರದ ಯಾವುದೇ ಭಾಗದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ನಿರಾಕರಣೆಗೆ ಒಳಗಾದ ಪ್ರಕರಣ ವರದಿಯಾಗಿಲ್ಲ.’
.jpg)





