Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬಂದಾಗ...

ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬಂದಾಗ ದೇಶದ ಅಭಿವೃದ್ಧಿ- ಎಸ್ ವರಲಕ್ಷ್ಮಿ

9 March 2023 10:13 PM IST
share
ಮಹಿಳೆಯರು ಸಮಾಜದ ಮುಖ್ಯ ವಾಹಿನಿಗೆ ಬಂದಾಗ ದೇಶದ ಅಭಿವೃದ್ಧಿ-  ಎಸ್ ವರಲಕ್ಷ್ಮಿ

ಮಂಗಳೂರು : ಮಹಿಳೆ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶಿಕ್ಷಣ, ಆರೋಗ್ಯ,ಉದ್ಯೋಗ ಸೇರಿದಂತೆ ಸಾಮಾಜಿಕ ಆರ್ಥಿಕ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿ ಇರಬೇಕು. ಮಹಿಳೆಯರು ಭಾಗವಹಿಸದೆ ದೇಶದ ಅಭಿವೃದ್ಧಿ ಖಂಡಿತಾ ಸಾಧ್ಯವಿಲ್ಲ ಎಂದು ಸಿಐಟಿಯು ಕರ್ನಾಟಕ ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿಯವರು ಅಭಿಪ್ರಾಯಪಟ್ಟರು.

ಅವರು ಬುಧವಾರ  ಮಲ್ಲಿಕಟ್ಟೆಯ ಸುಮಸದನದಲ್ಲಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ ಹಾಗೂ ಜನವಾದಿ ಮಹಿಳಾ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಎಸ್ ಎಫ್ ಐ, ಡಿವೈಎಫ್ಐ  ಸಹಕಾ ರದೊಂದಿಗೆ ಜರುಗಿದ ಅಂತಾರಾಷ್ಟ್ರೀಯ  ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಜನಸಂಖ್ಯೆಯಲ್ಲಿ ಅರ್ಧ ಭಾಗದಷ್ಟು ಮಹಿಳೆಯರಿದ್ದರೂ ಮಹಿಳಾ ಸಬಲೀಕರಣದ ಪ್ರಶ್ನೆ ಮುಂಚೂಣಿಗೆ ಬರುತ್ತಿಲ್ಲ. ಪುರುಷ ಪ್ರಧಾನ ವ್ಯವಸ್ಥೆ ಮಹಿಳೆಯರನ್ನು ಅತ್ಯಂತ ಕೀಳಾಗಿ ಕಾಣುತ್ತಾ,ಭೋಗದ ವಸ್ತುವನ್ನಾಗಿಸಿ, ನಾಲ್ಕು ಗೋಡೆಗಳ ಮದ್ಯೆ ಬಂಧಿಯನ್ನಾಗಿಸಿದೆ. ಸಮಾಜದಲ್ಲಿ ನಡೆಯುತ್ತಿರುವ ಎಲ್ಲಾ ಅನಿಷ್ಟಗಳಿಗೆ ಮಹಿಳೆ ಯರನ್ನೇ ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜನವಾದಿ ಮಹಿಳಾ  ಸಂಘಟನೆಯ ಜಿಲ್ಲಾಧ್ಯಕ್ಷರಾದ ಜಯಂತಿ ಶೆಟ್ಟಿಯವರು ಮಾತನಾಡುತ್ತಾ, ದುಡಿಯುವ ಮಹಿಳೆಯರ ಪ್ರಶ್ನೆಯಲ್ಲಿ ಹುಟ್ಟಿಕೊಂಡ ಚಳಭವಳಿ ಜಗತ್ತಿನಾದ್ಯಂತ ಹಬ್ಬಿಕೊಂಡು,ಮಹಿಳಾ ಸ್ವಾತಂತ್ರ್ಯ,ಸಮಾನತೆ, ಸಬಲೀಕರಣದ ವಿಚಾರ ಪ್ರಧಾನವಾಗಿ ಬೆಳಕಿಗೆ ಬಂದು ಬಳಿಕ ಅಂತಾರಾಷ್ಟ್ರೀಯ ಮಹಿಳಾ ದಿನವಾಗಿ ಆಚರಿಸಲ್ಪಟ್ಟಿತು.ಆದರೆ ಇಂದು ಮತ್ತೆ ಮಹಿಳೆಯರನ್ನು ಗುಲಾಮರನ್ನಾಗಿ ಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ಜಿಲ್ಲಾ ಸಂಚಾಲಕರಾದ ಪದ್ಮಾವತಿ ಶೆಟ್ಟಿಯವರು ಮಾತನಾಡಿ, ಒಂದು ಕಡೆ ಮಹಿಳೆಯರನ್ನು ಮಾತೆಯರೆಂದು ಕೊಂಡಾಡುತ್ತಾ ಮತ್ತೊಂದು ಕಡೆ ಮಹಿಳೆಯರ ಮೇಲಿನ ದೌರ್ಜನ್ಯ,ಕೊಲೆ,ಅತ್ಯಾಚಾರ ಪ್ರಕರಣಗಳು ಪ್ರತಿನಿತ್ಯ ಹೆಚ್ಚಾಗುತ್ತಿದೆ. ದೇಶವನ್ನಾಳುವ ಸರಕಾರಗಳು ದಿವ್ಯಮೌನ ವಹಿಸುವ ಮೂಲಕ ತಾನು ಮಹಿಳಾ ವಿರೋಧಿಯೆಂದು ಸಾಬೀತುಪಡಿಸಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಜನವಾದಿ ಮಹಿಳಾ ಸಂಘಟನೆಯ  ಜಿಲ್ಲಾ ನಾಯಕರಾದ ಭಾರತಿ ಬೋಳಾರ,ರಾಧಾ ಮೂಡಬಿದ್ರಿ, ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ನಾಯಕರಾದ ಗಿರಿಜಾ, ಜಯಲಕ್ಷ್ಮಿ,ಯುವತಿಯರ ಉಪಸಮಿತಿಯ ಸಂಚಾಲಕರಾದ ಆಶಾ ಬೋಳೂರು, ವಿದ್ಯಾರ್ಥಿನಿಯರ ಉಪಸಮಿತಿಯ ನಾಯಕಿ ಶಿವಾನಿ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಿಐಟಿಯು ಜಿಲ್ಲಾ ನಾಯಕರಾದ ಜೆ ಬಾಲಕೃಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ವಸಂತ ಆಚಾರಿ, ಯೋಗೀಶ್ ಜಪ್ಪಿನಮೊಗರು, ವಸಂತಿ ಕುಪ್ಪೆಪದವು,ಭವಾನಿ ವಾಮಂಜೂರು, ಪುಷ್ಪ,ಲಕ್ಷ್ಮಿ, ವಾರಿಜಾ,ಜನವಾದಿ ಸಂಘಟನೆ ಯ ಮುಖಂಡರಾದ ಲೋಲಾಕ್ಷಿ ಬಂಟ್ವಾಳ, ವಿಲಾಸಿನಿ ತೊಕ್ಕೊಟ್ಟು, ಪ್ರಮೀಳಾ ಶಕ್ತಿನಗರ,ಅಸುಂತ ಡಿಸೋಜ,ಸಾಮಾಜಿಕ ಚಿಂತಕರಾದ ಕ್ವೀನಿ ಪರ್ಸಿ ಆನಂದ್, ಫ್ಲೇವಿ ಕ್ರಾಸ್ತಾ, ಶಾಂತಿ ಡಯಾಸ್,ಆಶಾ ಸಂಜೀವನಾ ಮುಂತಾದವರು ಹಾಜರಿದ್ದರು

share
Next Story
X