Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.11ರಂದು ವಿಜಯ- ವಿಕ್ರಮ ಜೋಡುಕರೆ ಕಂಬಳ

ಮಾ.11ರಂದು ವಿಜಯ- ವಿಕ್ರಮ ಜೋಡುಕರೆ ಕಂಬಳ

9 March 2023 10:36 PM IST
share
ಮಾ.11ರಂದು ವಿಜಯ- ವಿಕ್ರಮ ಜೋಡುಕರೆ ಕಂಬಳ

ಉಪ್ಪಿನಂಗಡಿ: ಇಲ್ಲಿನ 37ನೇ ವರ್ಷದ ಹೊನಲು ಬೆಳಕಿನ ವಿಜಯ- ವಿಕ್ರಮ ಜೋಡುಕರೆ ಕಂಬಳವು  ಮಾ.11ರಂದು ಉಪ್ಪಿನಂಗಡಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ನಡೆಯಲಿದೆ.

ಬೆಳಗ್ಗೆ 8ರಿಂದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಿಂದ ಕಂಬಳಾಭಿಮಾನಿಗಳು, ಕಂಬಳ ಕೋಣಗಳ ವೈಭವದ ಮೆರವಣಿಗೆಯು ಕಂಬಳ ಕರೆಯವರೆಗೆ ನಡೆಯಲಿದ್ದು, ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9:31ಕ್ಕೆ ಉದ್ಯಮಿ ನಟೇಶ್ ಪೂಜಾರಿ ಕಂಬಳವನ್ನು ಉದ್ಘಾಟಿಸಲಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕರುಣಾಕರ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಉದ್ಯಮಿ ಧನ್ಯಕುಮಾರ್ ರೈ, ಕದಿಕ್ಕಾರು ಬೀಡಿನ ಪ್ರವೀಣ್ ಕುಮಾರ್, ನಿವೃತ ಸೈನಿಕ ವಿಶ್ವನಾಥ ಶೆಣೈ, ಉದ್ಯಮಿ ರಾಜೇಶ್ ರೈ, ಉಪ್ಪಿನಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಿ. ಜಗದೀಶ್ ನಾಯಕ್, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯದ ಧರ್ಮಗುರು ರೆ.ಫಾ. ಏಬೆಲ್ ಲೋಬೋ, ಉಪ್ಪಿನಂಗಡಿ ಮಾಲೀಕುದ್ದೀನಾರ್ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಾಫ ಕೆಂಪಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸಂಕಪ್ಪ ಶೆಟ್ಟಿ, ಉಪ್ಪಿನಂಗಡಿ ಕಟ್ಟಡ ಕಾರ್ಮಿಕ ಸಂಘದ ಕಾರ್ಯದರ್ಶಿ ಮಹಾಲಿಂಗ ಕಜೆಕ್ಕಾರು, ಉದ್ಯಮಿ ಸುರೇಶ್ ಭಾಗವಹಿಸಲಿದ್ದಾರೆ.

ಪೂರ್ವಾಹ್ನ 10:31ಕ್ಕೆ ನೇಗಿಲು ಕಿರಿಯ ವಿಭಾಗದ ಕೋಣಗಳು ಕರೆಗೆ ಇಳಿಯಲಿದ್ದು, 11:30ಕ್ಕೆ ಹಗ್ಗ ಹಿರಿಯ, ಮಧ್ಯಾಹ್ನ 12:30ಕ್ಕೆ ನೇಗಿಲು ಹಿರಿಯ, ಮಧ್ಯಾಹ್ನ 2ಕ್ಕೆ ಹಗ್ಗ ಹಿರಿಯ, ಅಡ್ಡ ಹಲಗೆ ಮತ್ತು ಕನೆಹಲಗೆ ವಿಭಾಗದ ಕೋಣಗಳು ಸಂಜೆ 4ಗಂಟೆಗೆ ಕರೆಗೆ ಇಳಿಯಲಿದೆ.

ಸಂಜೆ 6ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಾಜಿ ಸಚಿವರಾದ  ಬಿ. ರಮಾನಾಥ ರೈ, ವಿನಯಕುಮಾರ್ ಸೊರಕೆ, ಶಾಸಕ ಯು.ಟಿ. ಖಾದರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಉದ್ಯಮಿ ಸತ್ಯಶಂಕರ ಭಟ್, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುಗುತ್ತು, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಉದ್ಯಮಿ ಉಮೇಶ್ ನಾಡಾಜೆ, ಸಮಾಜ ಕಲ್ಯಾಣ ಇಲಾಖೆಯ ಮಾಜಿ ಅಧ್ಯಕ್ಷೆ ಶ್ರೀಮತಿ ದಿವ್ಯಪ್ರಭಾ ಚಿಲ್ತಡ್ಕ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಉದ್ಯಮಿ ಸಂತೋಷ್ ರೈ ನಳೀಲು, ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಲ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಆರ್.ಕೆ. ಟ್ರೇಡರ್ಸ್‍ನ ಕೆ. ಮೊಹಮ್ಮದ್ ಹನೀಫ್, ಉದ್ಯಮಿಗಳಾದ ಉಮ್ಮರ್ ಹಾಜಿ, ಎ.ಎಂ. ಹಸೈನಾರ್ ಹಾಜಿ ಹಾಗೂ ತುಳು ಮತ್ತು ಕನ್ನಡ ಚಿತ್ರರಂಗದ ನಟ- ನಟಿಯರು ಭಾಗವಹಿಸಲಿದ್ದಾರೆ. ಈ ಸಂದರ್ಭ ಕಂಬಳ ಕೋಣಗಳ ಯಜಮಾನ ಅಮ್ಟೂರು ಗ್ರಾಮದ ಕೃಷ್ಣಾಪುರ ನಡುಮನೆ ಪರಮೇಶ್ವರ ಸಾಲ್ಯಾನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಮಾ.12ರಂದು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ. 

share
Next Story
X