Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳ ಅಂಕಗಳಿಂದ ಬುದ್ಧಿವಂತಿಕೆ...

ವಿದ್ಯಾರ್ಥಿಗಳ ಅಂಕಗಳಿಂದ ಬುದ್ಧಿವಂತಿಕೆ ಅಳೆಯಲು ಸಾಧ್ಯವೇ?: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

9 March 2023 11:09 PM IST
share
ವಿದ್ಯಾರ್ಥಿಗಳ ಅಂಕಗಳಿಂದ ಬುದ್ಧಿವಂತಿಕೆ ಅಳೆಯಲು ಸಾಧ್ಯವೇ?: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು, ಮಾ.9: ವಿದ್ಯಾರ್ಥಿಗಳು ಪಡೆಯುವ ಅಂಕಗಳ ಆಧಾರದಲ್ಲಿ ಅವರ ಬುದ್ಧಿವಂತಿಕೆ ಅಳೆಯುವುದಕ್ಕೆ ಸಾಧ್ಯವೇ ಎಂದು ಹೈಕೋರ್ಟ್ ರಾಜ್ಯ ಸರಕಾರವನ್ನು ಪ್ರಶ್ನಿಸಿದೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8ನೆ ತರಗತಿಗಳ ವಿದ್ಯಾರ್ಥಿಗಳ ಮೌಲ್ಯಮಾಪನ ವಿಧಾನ ಬದಲಾಯಿಸುವ(ಬೋರ್ಡ್ ಪರೀಕ್ಷೆ) ಸಂಬಂಧ ರಾಜ್ಯ ಸರಕಾರದ ನಿರ್ಧಾರ ಪ್ರಶ್ನಿಸಿ ಕರ್ನಾಟಕ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಸಂಘ(ಕುಸ್ಮಾ), ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ, ಮಾನ್ಯತೆ ಪಡೆದ ಅನುದಾನ ರಹಿತ ಶಿಕ್ಷಣಗಳ ಸಂಘ(ಓಯುಆರ್‍ಎಸ್) ಅರ್ಜಿ ಸಲ್ಲಿಸಿದ್ದವು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ಸರಕಾರವನ್ನು ಪ್ರಶ್ನೆ ಮಾಡಿತು.

ಸರಕಾರದ ಪರ ವಾದಿಸಿದ ವಕೀಲರು, ಕೋವಿಡ್ ಸಂದರ್ಭದಲ್ಲಿ ಮಕ್ಕಳಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿದಿದೆ. ಇದನ್ನು ಹೆಚ್ಚಳ ಮಾಡುವುದಕ್ಕಾಗಿ 5 ಮತ್ತ 8ನೆ ತರಗತಿಗಳಿಗೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ, ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಅವರನ್ನು ಅದೇ ತರಗತಿಯಲ್ಲಿ ಮುಂದುವರೆಸುವುದಿಲ್ಲ. ಮಕ್ಕಳಲ್ಲಿನ ಬುದ್ಧಿವಂತಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಈ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಮಕ್ಕಳು ಪಡೆದ ಅಂಕಗಳ ಆಧಾರದಲ್ಲಿ ಬುದ್ಧಿವಂತಿಕೆ ಪರೀಕ್ಷೆ ನಡೆಸಲಾಗುತ್ತಿದೇಯೇ ಎಂದು ಪ್ರಶ್ನಿಸಿತು. ಜತೆಗೆ, ಮಕ್ಕಳ ಸಾಮಥ್ರ್ಯ, ವಿಶ್ವಾಸ ಮತ್ತು ಬುದ್ಧಿವಂತಿಕೆಯನ್ನು ಅವರ ಅಂಕಗಳ ಮೇಲೆ ಅಳೆಯುತ್ತಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಜತೆಗೆ, ಕೆಲವು ಅನುದಾನ ರಹಿತ ಖಾಸಗಿ ಶಾಲೆಗಳು ತಮ್ಮಲ್ಲಿ ಓದುತ್ತಿರುವ ಮಕ್ಕಳು ಶೇ.90ಕ್ಕೂ ಹೆಚ್ಚು ಅಂಕಗಳನ್ನು ಪಡೆಯದಿದ್ದಲ್ಲಿ ಬೇರೊಂದು ಶಾಲೆಗಳಿಗೆ ಕಳುಹಿಸಲಾಗುತ್ತಿದೆ ಎಂಬ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಮಕ್ಕಳ ಬುದ್ಧಿವಂತಿಕೆಯನ್ನು ಅಳೆಯಲು ಈ ವಿಧಾನ ಸರಿಯಿಲ್ಲ ಎಂದು ತಿಳಿಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಸರಕಾರ ಏಕಾಏಕಿ 5 ಮತ್ತು 8ನೆ ತರಗತಿಗಳ ಮಕ್ಕಳಿಗೆ ಬೋರ್ಡ್ ಮಟ್ಟದ ಪರೀಕ್ಷೆಯನ್ನು ಜಾರಿ ಮಾಡಿದೆ. ಇದರಿಂದ ಶಿಕ್ಷಣ ಸಂಸ್ಥೆಗಳು ಮತ್ತು ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಸರಕಾರ ಹೊರಡಿಸಿರುವ ಸುತ್ತೋಲೆ ರದ್ದು ಪಡಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅಂತಿಮ ಆದೇಶವನ್ನು ಕಾಯ್ದಿರಿಸಿ ವಿಚಾರಣೆ ಮುಂದೂಡಿದೆ.

share
Next Story
X