ಬಹುಮಹಡಿ ಕಟ್ಟಡದಿಂದ ಬಿದ್ದು 'ಓಯೋ' ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಮೃತ್ಯು
ಹೊಸದಿಲ್ಲಿ: ಓಯೋ ರೂಮ್ಸ್ (Oyo Rooms) ಸಂಸ್ಥಾಪಕ ರಿತೇಶ್ ಅಗರ್ವಾಲ್ (Ritesh Agarwal) ಅವರ ತಂದೆ ರಮೇಶ್ ಅಗರ್ವಾಲ್ ಇಂದು ಮಧ್ಯಾಹ್ನ ಹರಿಯಾಣದ ಗುರುಗ್ರಾಮ್ನಲ್ಲಿ ಬಹುಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಕ್ಟರ್ 54, ಗುರುಗ್ರಾಮ್ ನಲ್ಲಿರುವ ಡಿಎಲ್ಎಫ್ನ ದಿ ಕ್ರೆಸ್ಟ್ ಸೊಸೈಟಿಯ 20 ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಬಿದ್ದಿದ್ದಾರೆ ಎಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಎಲ್ಎಫ್ ಭದ್ರತಾ ಸಿಬ್ಬಂದಿಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿತು.
"ಬಿದ್ದ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಪಾರಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸ್ಥಳೀಯ ಠಾಣಾ ಸಿಬ್ಬಂದಿಗಳು ಘಟನೆಯ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಯ ಸ್ಥಳದ ಪರಿಶೀಲನೆಯ ಸಮಯದಲ್ಲಿ, ಬಿದ್ದ ವ್ಯಕ್ತಿಯನ್ನು ರಮೇಶ್ ಪರ್ಸಾದ್ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅವರನ್ನು ಪಾರಸ್ ಆಸ್ಪತ್ರೆಗೆ ಕರೆತರಲಾಯಿತು," ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
Next Story