ಸರಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’: ರಾಜ್ಯಪತ್ರ ಪ್ರಕಟ
ಬೆಂಗಳೂರು, ಮಾ. 10: ರಾಜ್ಯ ಸರಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ಅನುಷ್ಟಾನಗೊಳಿಸುವ ಸಂಬಂಧ ಮಾರ್ಗಸೂಚಿ ಪ್ರಕಟಿಸಿ ಕರ್ನಾಟಕ ರಾಜ್ಯಪತ್ರ ಪ್ರಕಟಿಸಿದೆ.
ಸರಕಾರಿ ನೌಕರನ ಪತಿ ಅಥವಾ ಪತ್ನಿ, ತಂದೆ-ತಾಯಿ, ಸರಕಾರಿ ನೌಕರನ ಮೇಲೆ ಸಂಪೂರ್ಣ ಅವಲಂಬಿತರಾಗಿರುವ ಮಕ್ಕಳು. ಹೈಕೋರ್ಟ್, ವಿಧಾನ ಮಂಡಲ, ಆರೋಗ್ಯ ಭಾಗ್ಯ ಯೋಜನೆ ಸೌಲಭ್ಯ ಪಡೆಯುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿ, ಸ್ಥಳೀಯ ಸಂಸ್ಥೆ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಯೋಜನೆಗೆ ಒಳಪಡಲಿದ್ದಾರೆಂದು ತಿಳಿಸಲಾಗಿದೆ.
Next Story