Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ಜಂಕ್ಷನ್-ಮಲ್ಪೆವರೆಗಿನ ಚತುಷ್ಪಥ...

ಕರಾವಳಿ ಜಂಕ್ಷನ್-ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

10 March 2023 7:52 PM IST
share
ಕರಾವಳಿ ಜಂಕ್ಷನ್-ಮಲ್ಪೆವರೆಗಿನ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಉಡುಪಿ, ಮಾ.10: ಉಡುಪಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಸ್ತೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ಕಲ್ಮಾಡಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವರು, ಈ ರಸ್ತೆ ಆಭಿವೃದ್ಧಿಯು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಇಲ್ಲಿ ಮೀನುಗಾರಿಕಾ ಬಂದರು ಮತ್ತು ಪ್ರವಾಸಿ ಕ್ಷೇತ್ರವಾದ ಮಲ್ಪೆಬೀಚ್ ಇರುವ ಕಾರಣ ಈ ರಸ್ತೆಯಲ್ಲಿ ವಾಹನ ದಟ್ಟಣೆ ಅತ್ಯಧಿಕವಾಗಿದೆ. ಈ ಕಿರಿದಾದ ರಸ್ತೆಯಿಂದ ಹಲವು ಅಪಘಾತಗಳಿಗೆ ಕೂಡ ಸಂಭವಿಸುತ್ತಿದೆ. ಈ ರಸ್ತೆ ವಿಸ್ತರಣೆಯ ಮೂಲಕ ಬಂದರುನಲ್ಲಿ ಹೆಚ್ಚಿನ ಅರ್ಥಿಕ ಚಟುವಟಿಕೆಗಳು ನಡೆಯಲು ಹಾಗೂ ಪ್ರವಾಸೋದ್ಯಮ ಚಟುವಟಿಕೆ ಗಳು ಇನ್ನಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ ಎಂದರು.

ಪ್ರಸ್ತುತ ಈ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸಿ ಶೀಘ್ರದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು.

ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿ ಮಾತನಾಡಿ, ಡಬಲ್ ಇಂಜಿನ್ ಸರಕಾರದಿಂದ ಜಿಲ್ಲೆಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಹೆಬ್ರಿಯಿಂದ ಮಲ್ಪೆವರೆಗೆ ಒಟ್ಟು 350 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ಕಾಮಗಾರಿಗೆ ಭೂಮಿ ನೀಡುವ ಮಾಲಕರಿಗೆ ಸೂಕ್ತ ಪರಿಹಾರ ದೊರೆಯಲಿದೆ ಎಂದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಕೊಡವೂರು, ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮಟ್ಟಾರು ರತ್ನಾಕರ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಸುಂದರ ಕಲ್ಮಾಡಿ ವಂದಿಸಿದರು.

‘ಈ ಹಿಂದೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ಇದರಿಂದಾಗಿ ಸಂತೆಕಟ್ಟೆ, ಅಂಬಲಪಾಡಿ ಮತ್ತು ಕಟಪಾಡಿಯಲ್ಲಿ ಸಮಸ್ಯೆಗಳಾಗಿವೆ. ಸರ್ವಿಸ್ ರಸ್ತೆಗಳು ಕೂಡ ಪೂರ್ಣ ಪ್ರಮಾಣದಲ್ಲಿ ನಿರ್ಮಾಣವಾಗಿಲ್ಲ. ಆದರೆ  ಪ್ರಸ್ತುತ  ಕೇಂದ್ರ ಸರಕಾರದ ನೆರವಿನಿಂದ ಸಂತೆಕಟ್ಟೆಯಲ್ಲಿ 27ಕೋಟಿ ರೂ. ವೆಚ್ಚದಲ್ಲಿ ಓವರ್‌ಪಾಸ್ ಕಾಮಗಾರಿ ನಡೆಯುತ್ತಿದೆ. ಅಂಬಲಪಾಡಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅಂಡರ್ ಪಾಸ್ ಕಾಮಗಾರಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ.
-ಶೋಭಾ ಕರಂದ್ಲಾಜೆ, ಕೇಂದ್ರ ಸಚಿವರು

share
Next Story
X