Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು-ಬೆಂಗಳೂರು ಹೈವೇ ನಿರ್ಮಾಣ...

ಮೈಸೂರು-ಬೆಂಗಳೂರು ಹೈವೇ ನಿರ್ಮಾಣ ಕಾಂಗ್ರೆಸ್ ಕೊಡುಗೆ: ಪ್ರತಾಪ್ ಸಿಂಹಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು

''ದಶಪಥ ರಸ್ತೆ ಅಪೂರ್ಣ ಅವೈಜ್ಞಾನಿಕವಾಗಿದ್ದರೂ ಪ್ರಧಾನಿಯಿಂದ ಉದ್ಘಾಟನೆ ''

10 March 2023 4:53 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೈಸೂರು-ಬೆಂಗಳೂರು ಹೈವೇ ನಿರ್ಮಾಣ ಕಾಂಗ್ರೆಸ್ ಕೊಡುಗೆ: ಪ್ರತಾಪ್ ಸಿಂಹಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ತಿರುಗೇಟು
''ದಶಪಥ ರಸ್ತೆ ಅಪೂರ್ಣ ಅವೈಜ್ಞಾನಿಕವಾಗಿದ್ದರೂ ಪ್ರಧಾನಿಯಿಂದ ಉದ್ಘಾಟನೆ ''

ಮೈಸೂರು,ಮಾ.10: ಮೈಸೂರು-ಬೆಂಗಳೂರು ದಶಪಥ ರಸ್ತೆ ನಿರ್ಮಾಣದ ಕುರಿತು  ಬಿಜೆಪಿ ಮುಖಂಡರ ಹೇಳಿಕೆ ವಿರುದ್ಧ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೈಸೂರು-ಬೆಂಗಳೂರು ದಶಪಥ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿದ ನಂತರ ಸಿದ್ದಲಿಂಗಪುರದ ಬಳಿ ಇರುವ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಬೆಂಗಳೂರು ದಶಪಥ ಯೋಜನೆಯ ಆಲೋಚನೆ ಬಂದಿದ್ದೆ ಅಂದಿನ ಸಿದ್ಧರಾಮಯ್ಯ ಸರ್ಕಾರದಿಂದ. ಅಂದು ನಾನು ಲೋಕೋಪಯೋಗಿ ಸಚಿವನಾಗಿ ಮೈಸೂರು-ಬೆಂಗಳೂರು ರಸ್ತೆಯ ಸಂಚಾರ ದಟ್ಟವಾಗಿರುವುದನ್ನು ಅರಿತು. ಈ ರಸ್ತೆಯನ್ನು ಮೇಲ್ದೆರ್ಜೆಗೇರಿಸಬೇಕು ಎಂದು ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದೆ ಅವರು ಸಂಪೂರ್ಣ ಸಹಕಾರ ನೀಡಿದ್ದರಿಂದ ಈ ರಸ್ತೆ ನಿರ್ಮಾಣವಾಗಿದೆ ಎಂದು ಹೇಳಿದರು.

ರಾಜ್ಯದ ರಸ್ತೆಗಳ ಅಭಿವೃದ್ಧಿಯಿಂದ ಸಂಪನ್ಮೂಲ ಹೆಚ್ಚಳದ ಹಿನ್ನಲೆಯಲ್ಲಿ 2013 ರಲ್ಲಿ ಸಂಪರ್ಕ ರಸ್ತೆ ನಿರ್ಮಾಣ ಮಾಡಲು ತೀರ್ಮಾನ ಕೈಗೊಂಡು 20 ಸಾವಿರ ರಾಜ್ಯ ಹೆದ್ದಾರಿ, 50 ಸಾವಿರ ಜಿಲ್ಲಾ ಹೆದ್ದಾರಿ ಮತ್ತು 4486 ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿ ಪಡಿಸಲಾಯಿತು. ಅದರಂತೆ ಮೈಸೂರು-ಬೆಂಗಳೂರು ಮಾರ್ಗದ ನಾಲ್ಕು ಪಥ ರಸ್ತೆಯನ್ನು ರಾಷ್ಟ್ರೀಯ ಹೆದ್ಧಾರಿ ಮಾಡಿ ದಶಪಥ ರಸ್ತೆ ನಿರ್ಮಾಣಕ್ಕೆ ಅಂದಿನ ಕೇಂದ್ರದ ಯುಪಿಎ-2 ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು. ಆಂದಿನ ಕೇಂದ್ರ ಭೂ ಸಾರಿಗೆ ಸಚಿವರಾದ ಆಸ್ಕರ್ ಫರ್ನಾಂಡೀಸ್ ಅವರು 2015 ರಲ್ಲಿ ರಾಜ್ಯದ ಒಟ್ಟು 1842 ಕೀ.ಮೀ. ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದರು ಇದರ ಸಂಪೂರ್ಣ ಕ್ರೆಡಿಟ್ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ, ಲೋಕಪಯೋಗಿ ಸಚಿವರಾಗಿದ್ದ ನನಗೆ ಮತ್ತು ಕೇಂದ್ರ ಭೂಸಾರಿಗೆ ಸಚಿವರಾಗಿದ್ದ ಆಸ್ಕರ್ ಫರ್ನಾಂಡೀಸ್ ಅವರಿಗೆ ಸಲ್ಲಬೇಕು ಎಂದು ಹೇಳಿದರು.

ಮೈಸೂರು-ಬೆಂಗಳೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದರಿಂದ ಈ ರಸ್ತೆಯನ್ನು ದಶಪಥ ರಸ್ತೆ ಮಾಡಬೇಕು ಎಂದು ಅಂದಿನ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದ ಅನುಮತಿ ಪಡೆದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. 2014 ರಲ್ಲಿ ಡಿಪಿಎಆರ್ ಸಲ್ಲಿಸಿ ಯೋಜನಾ ವೆಚ್ಚವನ್ನು ನೀಡಲಾಗಿತ್ತು. ಜೊತೆಗೆ ಬಿಡದಿ-ರಾಮನಗರ, ಬೆಂಗಳೂರು ಬಿಡದಿ, ಪ್ರದೇಶಗಳಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಮಾಡಲು ಯೋಜನೆ ಸಿದ್ಧಪಡಿಸಲಾಗಿತ್ತು ಎಂದು ಹೇಳಿದರು.

ಗೆಜೆಟ್ ಪಾಸ್ ಆದಾಗ ನಮ್ಮ ಮೈಸೂರಿನಲ್ಲಿ ಎಚ್ ವಿಶ್ವನಾಥ್ ಸಂಸದರಾಗಿದ್ದರು. ರಾಮನಗರದಲ್ಲಿ ಸುರೇಶ್ ಸಂಸದರಾಗಿದ್ದರು, ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಎಲ್ಲಾ ಸಂಸದರ ಜೊತೆ ಡೆಲ್ಲಿಯಲ್ಲಿ ಸಭೆ ಕರೆದಿದ್ದೆ. ಈ ಮೂಲಕ ರಾಜ್ಯದ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೆ. ಈ ವೇಳೆಗೆ ನಮ್ಮ ಸರ್ಕಾರ ಅಷ್ಟರಲ್ಲಿ ಬದಲಾವಣೆ ಆಯಿತು. ಆಗ ಬೊಗಳೆ ಬಿಡುವವರು ಯಾರೂ ಇರಲಿಲ್ಲ. ಯಾರು ನನ್ನ ಕೋಳಿಯಿಂದಲೇ ಬೆಳಗಾಯಿತು ಎನ್ನುವವರು ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳಬೇಕು ಎಂದು  ಪರೋಕ್ಷವಾಗಿ ಸಂಸದ ಪ್ರತಾಪ್ ಸಿಂಹ ಕುರಿತು ವ್ಯಂಗ್ಯವಾಡಿದರು.

ನಾವು ಈ ರಸ್ತೆಯ ಅಭಿವೃದ್ಧಿ ಮಾಡಿದ್ದರೂ ನಾವು ಎಲ್ಲಿಯೂ ಪ್ರಚಾರ ಮಾಡಿಕೊಂಡಿಲ್ಲ. ಇವರ ಸಂಸದರ ಕ್ಷೇತ್ರ ಕೇವಲ ಎರಡು ಕಿ.ಮಿ ವ್ಯಾಪಿಗೆ ಬರಲ್ಲ. ಎಲ್ಲವನ್ನ ನಾನೇ ಮಾಡಿದ್ದು ಅಂತ ಹೇಳಿಕೊಳ್ಳುತ್ತಿರುವುದು ಖಂಡನೀಯ ಎಂದು  ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಸಚಿವ ಎಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದರು.

ನೆರೆ ವೇಳೆ ಇವರು ಬಂದಿದ್ದರೆ ಜನರು, ಜಾನುವಾರುಗಳ ರಕ್ಷಣೆ ಮಾಡಬಹುದಿತ್ತು. ಈಗ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಗಿಮಿಕ್ ಮಾಡುತ್ತಿದೆ. 118 ಕಿ.ಮಿ ರಸ್ತೆಯಲ್ಲಿ ಇನ್ನೂ 22 ಕಿ.ಮೀ ಕಾಮಗಾರಿ ಪೂರ್ಣಗೊಂಡಿಲ್ಲ. ರಸ್ತೆಯನ್ನ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿದ್ದಾರೆ. ಅಂಡರ್ ಪಾಸ್,ಸರ್ವಿಸ್ ರಸ್ತೆಗಳು ಅವೈಜ್ಞಾನಿಕವಾಗಿವೆ. ಹೀಗಾಗಿ ನರಿ ಬುದ್ದಿ ಬಳಸಬೇಡಿ, ರಾಜಕೀಯ ಭಾಷೆ ಬಳಸಿ. ನೀವು ಮಾತನಾಡುವ ರೀತಿ ಸರಿಯಿಲ್ಲ  ನೀವು ಮಾತನಾಡುವ ದಾಟಿ ಏನು.? ಎಂದು ಸಂಸದ ಪ್ರತಾಪ್ ಸಿಂಹ ವಿರುದ್ದ ಹೆಚ್.ಸಿ ಮಹದೇವಪ್ಪ ಗುಡುಗಿದರು.

ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕೆಲಸಕ್ಕೆ ಸ್ವತಃ ವಿಪಕ್ಷದ ನಾಯಕರೇ ನನ್ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸ್ವತಃ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರೇ ನನ್ನ ಕೆಲಸ ನೋಡಿ ಸನ್ಮಾನ ಮಾಡಿ ಗೌರವಿಸಿದ್ದರು ಎಂದು ಎಚ್ ಸಿ ಮಹಾದೇವಪ್ಪ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕೆಪಸಿಸಿ ವಕ್ತಾರ ಎಂ.ಲಕ್ಷ್ಮಣ್, ಬೋವಿ ನಿಗಮದ ಮಾಜಿ ಅದ್ಯಕ್ಷ ಬಿ.ವಿ.ಸೀತಾರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X