Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚನ್ನಗಿರಿ ಕ್ಷೇತ್ರದಲ್ಲಿ ವಡ್ನಾಳ್...

ಚನ್ನಗಿರಿ ಕ್ಷೇತ್ರದಲ್ಲಿ ವಡ್ನಾಳ್ ರಾಜಣ್ಣ ಸ್ಪರ್ಧಿಸುವುದಾರೆ ಟಿಕೆಟ್ ನೀಡಲು ಕ್ರಮ: ಸಿದ್ದರಾಮಯ್ಯ

10 March 2023 11:15 PM IST
share
ಚನ್ನಗಿರಿ ಕ್ಷೇತ್ರದಲ್ಲಿ ವಡ್ನಾಳ್ ರಾಜಣ್ಣ ಸ್ಪರ್ಧಿಸುವುದಾರೆ ಟಿಕೆಟ್ ನೀಡಲು ಕ್ರಮ: ಸಿದ್ದರಾಮಯ್ಯ

ದಾವಣಗೆರೆ, ಮಾ.10: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಂತಹ ಭ್ರಷ್ಟ ರಾಜಕಾರಣಿಗೆ ಬುದ್ದಿ ಕಲಿಸಬೇಕಾದರೆ ವಡ್ನಾಳ್ ರಾಜಣ್ಣ ಅವರಂತಹ ಸಜ್ಜನರನ್ನು ಶಾಸನ ಸಭೆಗೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜು ಎದುರಿನ ಮೈದಾನದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಹೆಚ್ಚು ಆಕಾಂಕ್ಷಿ ಗಳಿದ್ದು, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸ್ಪರ್ಧೆ ಮಾಡುವುದಾದರೆ ಅವರಿಗೆ ಪಕ್ಷದ ಟಿಕೆಟ್ ಕೊಡಿಸಲಾಗುವುದು ಎನ್ನುವ ಮೂಲಕ ಕಾರ್ಯಕರ್ತರಲ್ಲಿದ್ದ ಗೊಂದಲ ದೂರ ಮಾಡಿದರು. ಬಿಜೆಪಿ ಶೇ.40ರಷ್ಟು ಕಮಿಷನ್ ಎಂದು ಹೇಳಿದಾಗ ಮುಖ್ಯಮಂತ್ರಿಯವರು ದಾಖಲೆ ಕೊಡಿ ಎಂದು ಕೇಳಿದ್ದರು. ಆದರೆ, ಈಗ ಸ್ಪಷ್ಟ ದಾಖಲೆ ದೊರೆತಿದೆ ಎಂದು ಬಿಜೆಪಿ ಸರಕಾರದ ವಿರುದ್ಧ ಹರಿಹಾಯ್ದರು.

ರಾಜ್ಯದ ಮತದಾರರಿಗೆ ಗೃಹಜ್ಯೋತಿ ಯೋಜನೆ ಮೂಲಕ 200 ಯೂನಿಟ್ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯ ಖಾತೆಗೆ 2 ಸಾವಿರ ರೂ. ಮತ್ತು ಪಡಿತರದಾರರಿಗೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಡಿ.ಕೆ. ಶಿವಕುಮಾರ್ ಮತ್ತು ನಾನು ಸಹಿ ಮಾಡಿದ ಗ್ಯಾರಂಟಿ ಕಾರ್ಡನ್ನು ನೀಡುತ್ತಿದ್ದೇವೆ. ನಾನು ಜನದ್ರೋಹ ಮಾಡಿಲ್ಲ. ಮುಂದೆ ಮಾಡುವುದೂ ಇಲ್ಲ. ಅಂತಹಕ್ಷ ಕ್ಷಣಗಳು ಬಂದರೆ, ಒಂದು ಕ್ಷಣವೂ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ವಾಗ್ದಾನ ಮಾಡಿದರು.

ಮಾಜಿ ಶಾಸಕ ವಡ್ನಾಳ್ ರಾಜಣ್ಣ ಮಾತನಾಡಿ, ಈ ಕಾರ್ಯಕ್ರಮವು ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಲು 8 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದರೆ ಪಕ್ಷವು ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಗಟ್ಟಿ ಇದೆ ಎನ್ನುವುದು ಮನಗಾಣಬೇಕಿದೆ. ಸಿದ್ದರಾಮಯ್ಯನವರು ಸಿಎಂ ಆಗಿ ದ್ದ ಸಂದರ್ಭದಲ್ಲಿ ಚನ್ನಗಿರಿಯ ಒಂದು ಕಡತ ಸಹ ವಾಪಾಸ್ ಕಳಿಸಿಲ್ಲ ಎಂದರು.

ಜಿಲ್ಲಾಧ್ಯಕ್ಷ ಎಚ್.ಮಂಜಪ್ಪ, ಮಾಧ್ಯಮ ವಕ್ತಾರ ಬಸಣ್ಣ, ಕಿಸಾನ್ ಸಂಘದ ಅಧ್ಯಕ್ಷ ಸಚಿನ್ ಮಿಗಾ, ದಾವಣಗೆರೆ ಜಿಲ್ಲಾ ಚುನಾವಣಾ ಉಸ್ತುವಾರಿ ಸಲೀಂ ಅಹಮದ್, ಟಿಕೆಟ್ ಆಕಾಂಕ್ಷಿಗಳಾದ ಲಿಂಗರಾಜು, ಎಚ್.ಎನ್. ನಿರಂಜನ್, ಪುನೀತ್‌ಕುಮಾರ್, ಹೊದಿಗೆರೆ ರಮೇಶ್, ಶಿವಗಂಗಾ ಬಸವರಾಜ್, ವಡ್ನಾಳ್ ಜಗದೀಶ್, ವಡ್ನಾಳ್ ಅಶೋಕ್, ತೇಜಸ್ವಿ ಪಟೇಲ್, ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ಸಿ.ನಾಗರಾಜ್ ಇತರರು ಹಾಜರಿದ್ದರು.

share
Next Story
X