Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಸನ್ಮುಖಿ ರಾಜಕಾರಣಿ ಧ್ರುವನಾರಾಯಣ

ಹಸನ್ಮುಖಿ ರಾಜಕಾರಣಿ ಧ್ರುವನಾರಾಯಣ

11 March 2023 11:14 AM IST
share
ಹಸನ್ಮುಖಿ ರಾಜಕಾರಣಿ ಧ್ರುವನಾರಾಯಣ

ಚಾಮರಾಜನಗರ, ಮಾ.11: ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ, ಎರಡು ಬಾರಿ ವಿಧಾನಸಭಾ ಸದಸ್ಯರಾಗಿ, ಪ್ರಸಕ್ತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರು.

ಮೂರು ಬಾರಿ ವಿಧಾನಸಭೆಗೆ, ಮೂರು ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದ ಅವರು ನಾಲ್ಕು ಬಾರಿ ಗೆದ್ದಿದ್ದರೆ, ಇನ್ನೆರಡು ಸಲ  ಸೋಲುಂಡಿದ್ದರು.

ಚಾಮರಾಜನಗರ ತಾಲೂಕಿನ ಹೆಗ್ಗವಾಡಿಯಲ್ಲಿ 1961ರ ಆಗಸ್ಟ್ 31ರಂದು ಜನಿಸಿದ ಆರ್. ಧ್ರುವನಾರಾಯಣ ಹಸನ್ಮುಖಿ ರಾಜಕಾರಣಿಯಾಗಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಹೊಂದಿದ್ದಾರೆ. ಎಂ.ರಾಜಶೇಖರಮೂರ್ತಿಯವರ ಶಿಷ್ಯರಾಗಿರುವ ಅವರು 1999ರಲ್ಲಿ ಸಂತೇಮರಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಬಂದಿದ್ದರು.

1999ರಲ್ಲಿ ಅವರು ಬಿಜೆಪಿಯುಂದ ಎ.ಆರ್.ಕೃಷ್ಣಮೂರ್ತಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು. ಆ ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಕೈ ಪಾಳಯಕ್ಕೆ ಬಂದ ನಂತರ ರಾಜಕೀಯವಾಗಿ ಉನ್ನತ ಸ್ಥಾನಕ್ಕೆ ಏರುತ್ತಾ ಹೋದರು.

2004ರ ವಿಧಾನಸಭಾ ಚುನಾವಣೆಯಲ್ಲಿ ಸಂತೇಮರಹಳ್ಳಿ ಮೀಸಲು ವಿಧಾನ ಕ್ಷೇತ್ರದಲ್ಲಿ ಎ.ಆರ್.ಕೃಷ್ಣಮೂರ್ತಿ ವಿರುದ್ಧ ಕೇವಲ ಒಂದು ಮತದಿಂದ ರೋಚಕವಾಗಿ ಗೆದ್ದು ದೇಶಾದ್ಯಂತ ಧ್ರುವನಾರಾಯಣ ಸುದ್ದಿಯಾಗಿದ್ದರು. ಚಾಮರಾಜನಗರ ಜಿಲ್ಲೆಯಲ್ಲಿ ರಾಜಕೀಯ ಜೀವನವನ್ನು ಈ ಗೆಲುವಿನೊಂದಿಗೆ ಭದ್ರಪಡಿಸಿದ್ದರು.

ವಿಧಾನ ಸಭಾ ಕ್ಷೇತ್ರ ಮರುವಿಂಗಡಣೆಯ ನಂತರ ಸಂತೇಮರಹಳ್ಳಿ ಕ್ಷೇತ್ರ ಮರೆಯಾಯಿತು. 2008ರ ಚುನಾವಣೆಯಲ್ಲಿ ಕೊಳ್ಳೇಗಾಲದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.

2009ರ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಆರ್.ಧ್ರುವನಾರಾಯಣರನ್ನು ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿತು. ಬಿಜೆಪಿಯ ಅಭ್ಯರ್ಥಿಯಾಗಿದ್ದ ಎ.ಆರ್.ಕೃಷ್ಣಮೂರ್ತಿ ವಿರುದ್ಧ 4,002 ಮತಗಳ ಅಂತರದಿಂದ ಗೆದ್ದು ರಾಷ್ಟ್ರರಾಜಕಾರಣ ಪ್ರವೇಶಿಸಿದರು. ಸಂಸದರಾಗಿ ಆಯ್ಕೆಯಾದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಮತ್ತೆ ಎ.ಆರ್.ಕೃಷ್ಣಮೂರ್ತಿ ವಿರುದ್ಧ 1,41,182 ಮತಗಳ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಕ್ಷೇತ್ರದಾದ್ಯಂತ ಉತ್ತಮ ಸಂಸದ ಎಂದು ಮನೆಮಾತಾಗಿದ್ದ ಅವರು, ಸಂಸದರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದರು. ಅವರ ಎರಡು ಅವಧಿಯಲ್ಲಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೆಲಸಗಳಾಗಿದ್ದವು.

2019ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಶ್ರೀನಿವಾಸ ಪ್ರಸಾದ್ ವಿರುದ್ಧ 1,817 ಮತಗಳ ಅಂತರದಲ್ಲಿ ಸೋಲನುಭವಿಸಿದರು.

ಫಲಿತಾಂಶದ ಬಳಿಕ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿದ್ದರು. ವರಿಷ್ಠರು ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡಿ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ಹೊರಿಸಿದ್ದರು. ಮತ್ತೆ ರಾಜ್ಯ ರಾಜಕಾರಣಕ್ಕೆ ಬರಲು ಇಚ್ಛಿಸಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದ್ದರು. ಅವರಿಗೆ ಟಿಕೆಟ್ ಲಭಿಸುವುದು ಬಹುತೇಕ ನಿಚ್ಚಳ ಎನ್ನಲಾಗಿತ್ತು.

ತಮ್ಮ ಸಾರ್ವಜನಿಕ ಜೀವನದಲ್ಲಿ ಎಲ್ಲೂ ಎಡವದ ಆರ್.ಧ್ರುವನಾರಾಯಣ ಯಾವುದೇ ಕಪ್ಪು ಚುಕ್ಕೆ ಹೊಂದಿರಲಿಲ್ಲ. ಕ್ಷೇತ್ರದ ಜನರ ಸಂಪರ್ಕಕ್ಕೆ ಸದಾ ಸಿಗುವ ಅವರು ಎದುರಾಳಿ ಪಕ್ಷಗಳ ಮುಖಂಡರೊಂದಿಗೂ ಉತ್ತಮ ಬಾಂಧವ್ಯ  ಹೊಂದಿದ್ದರು.

ಚಾಮರಾಜನಗರದರಲ್ಲಿ ಕೇಂದ್ರೀಯ ವಿದ್ಯಾಲಯದ ಹೊಸ ಕಟ್ಟಡದ ಉದ್ಘಾಟನೆಗೆ ಬಂದಿದ್ದ ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತ ಕುಮಾರ್, ‘ಧ್ರುವನಾರಾಯಣ ಅವರು ನನ್ನ ಮೆಚ್ಚಿನ ಸಂಸದರಲ್ಲಿ ಒಬ್ಬರು' ಎಂದು ಶ್ಲಾಘಿಸಿದ್ದರು.

ರಾಜಕಾರಣದ ಎಲ್ಲ ಪಟ್ಟುಗಳನ್ನು ಅರಿತಿದ್ದ ಅವರು, ಚಾಣಾಕ್ಷ ರಾಜಕಾರಣಿ ಎಂದೇ ರಾಜಕೀಯ ವಲಯದಲ್ಲಿ ಜನಜನಿತರಾಗಿದ್ದರು. ವಿ.ಶ್ರೀನಿವಾಸ ಪ್ರಸಾದ್ ನಂತರ ಮೈಸೂರು ಭಾಗದ ದಲಿತ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮುತ್ತಾ ಬಂದಿದ್ದರು. ಕಳೆದ ಲೋಕಸಭಾ ಚುನಾವಣೆ ಸೋಲು ಅವರಿಗೆ ಕೊಂಚ ಹಿನ್ನಡೆ ತಂದಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಮತ್ತೆ ಈ ಭಾಗದಲ್ಲಿ ತಮ್ಮ ಪ್ರಭಾವವನ್ನು ಬೆಳೆಸಿಕೊಂಡಿದ್ದರು.

share
Next Story
X