ಯಶ್ಪಾಲ್ ಸುವರ್ಣ ಬಂಧನಕ್ಕೆ ಎಸ್‌ಡಿಪಿಐ ಆಗ್ರಹ

ಉಡುಪಿ: ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮಲ್ಪೆ ಶಾಖೆಯ ವ್ಯವಸ್ಥಾಪಕರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ರನ್ನು ಬಂಧಿಸುವಂತೆ ಎಸ್‌ಡಿಪಿಐ ಉಡುಪಿ ಜಿಲ್ಲೆ ಆಗ್ರಹಿಸಿದೆ.
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಸುವರ್ಣ ದಶಕಗಳಿಂದ ಜಿಲ್ಲೆಯಲ್ಲಿ ಕೋಮು ವೈಷಮ್ಯವನ್ನು ಮೂಡಿಸುವ ಮೂಲಕ ಸಮಾಜದ ಶಾಂತಿ ಸೌಹಾರ್ದತೆಯನ್ನು ಕೆಡಿಸುವಲ್ಲಿ ನಿರತರಾಗಿದ್ದಾರೆ ಎಂದು ಅವರು ಆರೋಪಿಸಿದರು.
ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೂ ಸಹ ಅವರ ಬಂಧನವಾಗಿಲ್ಲ. ಆದ್ದರಿಂದ ಪೊಲೀಸ್ ಇಲಾಖೆ ಕೂಡಲೇ ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಹಾಗೂ ಇತರ ಆರೋಪಿಗಳನ್ನು ಬಂಧಿಸಬೇಕೆಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲಿ ಪ್ರಕಟಣೆ ಯಲ್ಲಿ ಒತ್ತಾಯಿಸಿದ್ದಾರೆ.
Next Story





