Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಸ್ಮತ್ ಪಜೀರ್‌ರ ‘ಪಾಲ’ ಬ್ಯಾರಿ ಕೃತಿ...

ಇಸ್ಮತ್ ಪಜೀರ್‌ರ ‘ಪಾಲ’ ಬ್ಯಾರಿ ಕೃತಿ ಬಿಡುಗಡೆ

11 March 2023 7:46 PM IST
share
ಇಸ್ಮತ್ ಪಜೀರ್‌ರ ‘ಪಾಲ’ ಬ್ಯಾರಿ ಕೃತಿ ಬಿಡುಗಡೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ಮಂಗಳೂರು ವಿವಿ ಪ್ರಸಾರಾಂಗ ಪ್ರಕಟಿಸಿದ ಲೇಖಕ ಇಸ್ಮತ್ ಪಜೀರ್ ರಚಿಸಿದ ಬ್ಯಾರಿ ವಿಮರ್ಶಾ ಲೇಖನಗಳ ಸಂಕಲನ ‘ಪಾಲ’ ಕೃತಿಯ ಬಿಡುಗಡೆ ಕಾರ್ಯಕ್ರಮವು ಶನಿವಾರ ನಗರದ ವಿವಿ ಕಾಲೇಜಿನ ಡಾ.ಶಿವರಾಮ ಕಾರಂತ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿವಿ ಪ್ರಸಾರಾಂಗದ ಉಪನಿರ್ದೇಶಕ ಡಾ. ಧನಂಜಯ ಕುಂಬ್ಳೆ ‘ಕರಾವಳಿ ತೀರದಲ್ಲಿ ವೈಚಾರಿಕ ಬರೆಹಗಾರರ ಸಂಖ್ಯೆ ತೀರಾ ಕಡಿಮೆಯಿದೆ. ಇತ್ತೀಚಿನ ದಿನಗಳಲ್ಲಿ ಬ್ಯಾರಿ ಮುಸ್ಲಿಂ ಸಮುದಾಯದ ಬರೆಹಗಾರರು ವೈಚಾರಿಕ ದೃಷ್ಟಿಕೋನದಿಂದ ಬರೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಭಾಷೆಯೊಂದರ ಪ್ರಕಟಿತ ಕೃತಿಗಳ ಬಗ್ಗೆ ವಿಮರ್ಶಾ ಸಂಕಲನ ಹೊರಬರುತ್ತಿರುವುದು ಆ ಭಾಷೆಯ ಪ್ರೌಢತೆಗೆ ಸಾಕ್ಷಿಯಾಗಿದೆ. ಇದೀಗ ‘ಪಾಲ’ದ ಮೂಲಕ ಬ್ಯಾರಿ ಭಾಷೆಯೂ ಪ್ರೌಢತೆಗೆ ಪ್ರಾಪ್ತವಾಗಿರುವುದು ಸಂತಸದ ವಿಚಾರ’ ಎಂದರು.

ಉಪನ್ಯಾಸ ನೀಡಿದ ಬ್ಯಾರಿ ವಾರ್ತೆ ಮಾಸಿಕದ ಉಪ ಸಂಪಾದಕ ಮುಹಮ್ಮದಲಿ ಕಮ್ಮರಡಿ ‘ಬ್ಯಾರಿ ಸಾಹಿತ್ಯ ಅಕಾಡಮಿಯಲ್ಲಿ ಈಗ ಯಾವ ಚಟುವಟಿಕೆಯೂ ನಡೆಯುತ್ತಿಲ್ಲ. ಹಾಗಾಗಿ ಬ್ಯಾರಿ ಅಧ್ಯಯನ ಪೀಠಕ್ಕೆ ಹೆಚ್ಚಿನ ಜವಾಬ್ದಾರಿ ಇದೆ. ‘ಬ್ಯಾರಿ’ ಕ್ಷೇತ್ರ ಕಾರ್ಯ ನಡೆಸುವ ಯುವ ಸಂಶೋಧಕರಿಗೆ ಮಾರ್ಗದರ್ಶನ ಮತ್ತು ಆಸಕ್ತಿಯಿಂದ ಬರೆಯುವ ಯುವ ಲೇಖಕ-ಲೇಖಕಿಯರಿಗೆ ಸಾಹಿತ್ಯ ಕಮ್ಮಟಗಳನ್ನು ಆಯೋಜಿಸಲು ಮುಂದಾಗಬೇಕು’ ಎಂದು ಹೇಳಿದರು.

ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ಸಾಹಿತಿ ಅಬ್ದುಲ್ ಖಾದರ್ ಕುತ್ತೆತ್ತೂರು ‘ಬ್ಯಾರಿ ಭಾಷೆಯಲ್ಲಿ ಪ್ರಕಟಗೊಂಡ ಕೃತಿಗಳ ಬಗ್ಗೆ ವಿಮರ್ಶಿಸಲ್ಪಟ್ಟ ಲೇಖನಗಳನ್ನು ಒಳಗೊಂಡ ಸಂಕಲನವು ಇದೇ ಮೊದಲ ಬಾರಿಗೆ ಪ್ರಕಟಗೊಳ್ಳುತ್ತಿವೆ. ಬ್ಯಾರಿಯಲ್ಲಿ ವಿಮರ್ಶಾ ಸಂಕಲನ ಪ್ರಕಟಗೊಂಡಿಲ್ಲ ಎಂಬ ಆ ಕೊರತೆಯನ್ನು ಈ ಮೂಲಕ ನೀಗಿಸಲಾಗಿದೆ’ ಎಂದರು.

ಮಂಗಳೂರು ವಿವಿ ಪ್ರಸಾರಾಂಗದ ನಿರ್ದೇಶಕ ಪ್ರೊ.ಸೋಮಣ್ಣ ಹೊಂಗಳ್ಳಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅತಿಥಿಯಾಗಿ ಭಾಗವಹಿಸಿದ್ದರು. ಲೇಖಕ ಇಸ್ಮತ್ ಪಜೀರ್ ಕೃತಿ ರಚನೆಗೆ ಸಂಬಂಧಿಸಿದಂತೆ ಅನುಭವ ಹಂಚಿಕೊಂಡರು. ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಸ್ವಾಗತಿಸಿದರು. ಬ್ಯಾರಿ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ ಅಹ್ಮದ್ ಬಾವಾ ಪಡೀಲ್ ವಂದಿಸಿದರು. ಉಪನ್ಯಾಸಕಿ ಶಹಲಾ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

share
Next Story
X