Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೈಸೂರು ದಶಪಥ ರಸ್ತೆ ಕ್ರೆಡಿಟ್ ಯಾರಿಗೆ...

ಮೈಸೂರು ದಶಪಥ ರಸ್ತೆ ಕ್ರೆಡಿಟ್ ಯಾರಿಗೆ ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ: ಸಿಎಂ ಬೊಮ್ಮಾಯಿ‌

11 March 2023 10:56 PM IST
share
ಮೈಸೂರು ದಶಪಥ ರಸ್ತೆ ಕ್ರೆಡಿಟ್ ಯಾರಿಗೆ ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ: ಸಿಎಂ ಬೊಮ್ಮಾಯಿ‌

ಬೆಂಗಳೂರು: ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ಯಾರಿಗೆ ಸಿಗಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. 

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು, ಮೈಸೂರು ಹೈವೆ ಮೊದಲು ನಾಲ್ಕು ಪಥದ ರಸ್ತೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭವಾಯಿತು.  2004/2007 ರಲ್ಲಿ ಪ್ರಾರಂಭ ಆದ ಬಳಿಕ ಭಾರತ ಸರ್ಕಾರ ಇದನ್ನು ಅಂತರಾಷ್ಟ್ರೀಯ ಹೆದ್ದಾರಿ ಎಂದು 2014 ರಲ್ಲಿ ಘೋಷಣೆ ಮಾಡಿತು. ಘೋಷಣೆ ಮಾಡಿ 10-15 ವರ್ಷವಾದರೂ ಯುಪಿಎ ಸರ್ಕಾರ ಅಂತರರಾಷ್ಟ್ರೀಯ ಹೆದ್ದಾರಿ ಕೆಲಸವನ್ನು ಪೂರ್ಣ ಮಾಡಲಿಲ್ಲ. ಕೇವಲ ಘೋಷಣೆ ಆಗಿತ್ತು. 2014 ರಲ್ಲಿ ಘೋಷಣೆ ಆಗಿ, ಡಿಪಿಆರ್ ಆದ ಬಳಿಕ ಅಲೈನ್ಮೆಂಟ್ ಆಗಿದ್ದು 2015 ರಲ್ಲಿ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

2015 ರಲ್ಲಿ ಎನ್ ಡಿಎ  ಸರ್ಕಾರವಿತ್ತು‌. ಬೆಂಗಳೂರು  ಮೈಸೂರು ಹೆದ್ದಾರಿ 2016 ರಲ್ಲಿ ಅಂತರಾಷ್ಟ್ರೀಯ ಹೆದ್ದಾರಿಯ ಅಥಾರಿಟಿ ಹ್ಯಾಂಡ್ ಓವರ್ ಆಯ್ತು‌. ಆಗ  ಎನ್‌ಡಿಎ ಸರ್ಕಾರವಿತ್ತು‌. ಬಳಿಕ ಟೆಂಡರ್ ಪ್ರೊಸೆಸ್ ಮಾಡಿ ಹಣ ಬಿಡುಗಡೆ ಮಾಡಲಾಗಿದ್ದು, 2023ರಲ್ಲಿ ಇದು ರಸ್ತೆ ಕೆಲಸ ಮುಗಿದಿದೆ. ಸಂಪೂರ್ಣ ಕೆಲಸ ಎನ್ ಡಿಎ ಸರ್ಕಾರದ ಅವಧಿಯಲ್ಲೇ ಈ ಯೋಜನೆ ಆಗಿದೆ. ಪ್ರಧಾನಮಂತ್ರಿ ಮೋದಿಯವರ ನೇತೃತ್ವದಲ್ಲಿ ಈ ಯೋಜನೆಯಾಗಿದೆ. ಜನರಿಗೆ ಈ ಮಾಹಿತಿ ಕೊಡಬೇಕು ಅಂತ ನಾನು ಕೊಟ್ಟಿದ್ದೇನೆ ಎಂದರು.

ಈ ಮಧ್ಯೆ ನೈಸ್ ರೋಡ್ ಮಾಡ್ತೀವಿ ಅಂತ ನಿಲ್ಲಿಸಿದರು. ನೈಸ್ ರೋಡ್ ಸಹ ಬರಲಿಲ್ಲ ಇದು ಆಗಲಿಲ್ಲ. ಆಗ ವಾಹನ ದಟ್ಟನೆ ಜಾಸ್ತಿ ಆಯ್ತು. ಸಮಸ್ಯೆ ಆಗುತ್ತದೆ ಎಂದಾಗ ನ್ಯಾಷನಲ್ ಹೈವೇ ನವರು ತಗೆದುಕೊಂಡು ಮೋದಿ ನೇತೃತ್ವದ ಸರ್ಕಾರ ಈ ಯೋಜನೆ ಮುಗಿಸಿದ್ದಾರೆ. ಯಾರಿಗೆ ಕ್ರೆಡಿಟ್ ಅನ್ನುವುದನ್ನು ಜನರ ತೀರ್ಮಾನ ಮಾಡಲಿ.

''ಮೋದಿ ನೇತೃತ್ವದ ಸರ್ಕಾರವೇ ಹಣ ಬಿಡುಗಡೆ ಮಾಡಿ ಯೋಜನೆ ಮುಗಿಸಿದೆ. ಮೋದಿ ಸರ್ಕಾರವೇ ಈ ಯೋಜನೆ ಮಾಡಿದ್ದು ಅಂತ ಜನರಿಗೂ ಗೊತ್ತಾಗಿದೆ ಅಂತ ನಾನು ಭಾವಿಸುತ್ತೇನೆ'' ಎಂದರು.

share
Next Story
X