ಬಿಎಸ್ ವೈ ಭೇಟಿಯಾದ ಸಂಸದೆ ಸುಮಲತಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಅವರು ಶನಿವಾರ ರಾತ್ರಿ ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಸುಮತಾ ಅವರು, ಮಂಡ್ಯ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಮಂಡ್ಯದ ರಾಜಕಾರಣ ಬಗ್ಗೆ ಚರ್ಚೆ ನಡೆಸಿದ್ದಾರೆನ್ನಲಾಗಿದೆ.
ಬಿಜೆಪಿಗೆ ಬೆಂಬಲ ಘೋಷಿಸಿದ ನಂತರ ಇದೇ ಮೊದಲ ಬಾರಿಗೆ ಸುಮಲತಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.
''ರಾಜ್ಯದ ಧೀಮಂತ ನಾಯಕರು ಹಾಗೂ ಭಾರತೀಯ ಜನತಾ ಪಕ್ಷದ ಮುಖಂಡರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರನ್ನು ಇಂದು ಭೇಟಿಯಾಗಿ ಕುಶಲೋಪರಿ ವಿಚಾರಿಸಿದೆ. ಜೊತೆಗೆ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಮಂಡ್ಯದ ರಾಜಕಾರಣ ಹಾಗೂ ಸ್ವಾಭಿಮಾನಿ ಮಂಡ್ಯದ ಜನತೆಯ ಆಶೋತ್ತರಗಳ ಬಗ್ಗೆ ಚರ್ಚಿಸಿದೆ'' ಎಂದು ಸಂಸದೆ ಸುಮಲತಾ ಅವರು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ನಾಗಮಂಗಲ: ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ರಂಗ ಮಂದಿರದಿಂದ ಸುಮಲತಾ ಫೋಟೋ ತೆರವು







