Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದರೋಡೆ ಪ್ರಕರಣ: 23 ನೇಪಾಳಿಗಳ ಬಂಧನ, 2...

ದರೋಡೆ ಪ್ರಕರಣ: 23 ನೇಪಾಳಿಗಳ ಬಂಧನ, 2 ಕೋಟಿ ರೂ.ಮೌಲ್ಯದ ವಸ್ತುಗಳ ವಶ

12 March 2023 11:19 AM IST
share
ದರೋಡೆ ಪ್ರಕರಣ: 23 ನೇಪಾಳಿಗಳ ಬಂಧನ, 2 ಕೋಟಿ ರೂ.ಮೌಲ್ಯದ ವಸ್ತುಗಳ ವಶ

ಬೆಂಗಳೂರು, ಮಾ.11: ಕೆಲಸಕ್ಕಿದ್ದ ಮನೆಯವರ ನಂಬಿಕೆಗಳಿಸಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗೆ ಕನ್ನ ಹಾಕಿದ್ದ 23 ನೇಪಾಳಿ ಖದೀಮರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿ ಅಪಾರ ನಗದು ಸೇರಿ 2 ಕೋಟಿ ಮೌಲ್ಯದ ಚಿನ್ನಾಭರಣ, ಪಿಸ್ತೂಲ್, ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ. 

ಜೆ.ಪಿ.ನಗರ ಪೊಲೀಸರು ಕಾರ್ಯಾಚರಣೆ ಕೈಗೊಂಡು ನೇಪಾಳ ಮೂಲದ ನೇತ್ರಾ ಶಾಹಿ(43), ಲಕ್ಷ್ಮೀ ಸೇಜುವಲ್(33), ಗೋರಕ್ ಬಹದ್ದೂರ್(50), ಭೀಮ್ ಬಹದ್ದೂರ್(45), ಅಂಜಲಿ(31) ಅಬೇಶ್ ಶಾಹಿ(21) ಪ್ರಶಾಂತ್ (21), ಪ್ರಕಾಶ್(31) ನನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದರು. 

ಜೆಪಿ ನಗರದ ಕಿರಣ್ ಅವರು ಕುಟುಂಬದ ಸಮೇತ ತಿರುಪತಿಗೆ ತೆರಳಿದ್ದಾಗ ಅವರ ಮನೆಯಲ್ಲಿ ಕೆಲಸಕ್ಕಿದ್ದ ಬಂಧಿತ ಆರೋಪಿಯಾದ ಲಕ್ಷ್ಮೀ ಸೆಜುವಲ್ ಇತರರ ಜೊತೆ ಗುಂಪು ಕಟ್ಟಿಕೊಂಡು ಮನೆಗೆ ನುಗ್ಗಿ ದರೋಡೆ ಮಾಡಿದ್ದರು. ಬಳಿಕ ಕಿರಣ್ ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.  

ಬಂಧಿತರಿಂದ 1 ಕೆ.ಜಿ 173 ಗ್ರಾಂ ಚಿನ್ನಾಭರಣ, 350 ಗ್ರಾಂ ಬೆಳ್ಳಿ, 77.69 ಲಕ್ಷ ನಗದು, ಪಿಸ್ತೂಲ್, 3 ಜೀವಂತ ಗುಂಡುಗಳು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ. 

ವೃದ್ಧೆ ಮನೆ ಕಳವು: ವಯೋವೃದ್ದ ಮಹಿಳೆಯಿದ್ದ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ದಕ್ಷಿಣ ವಿಭಾಗದ ಪೆÇಲೀಸರು ಬಂಧಿಸಿದ್ದಾರೆ. ಅರ್ಜುನ್ ಶಾಯಿ, ಪೂರನ್ ಶಾಯಿ, ಹರೀಶ್ ಶಾಯಿ ಹಾಗೂ ರಮಿತ ಠಾಕೂರ್, ವಿಮಲಾ ಬಂಧಿತ ಆರೋಪಿಗಳಾಗಿದ್ದಾರೆ. 

ಬ್ರಿಜ್ ಭೂಷಣ್ ಎಂಬುವವರ ಮನೆಯಲ್ಲಿ ಆರೋಪಿ ವಿಮಲಾ ಕೆಲಸಕ್ಕಿದ್ದಳು. ಬ್ರಿಜ್ ಭೂಷಣ್ ಅವರು ವಯೋವೃದ್ದ ತಾಯಿಯನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋದಾಗ ಆತನ ಮನೆಯಲ್ಲಿ ತನ್ನ ಗ್ಯಾಂಗ್ ನೊಂದಿಗೆ ವಿಮಲಾ ಕೃತ್ಯ ಎಸಗಿದ್ದಳು. ಪೆÇಲೀಸರು ಆರೋಪಿಗಳನ್ನು ಕಾರ್ಯಾಚರಣೆ ಕೈಗೊಂಡು ಬಂಧಿಸಿದ್ದು ಬಂಧಿತರಿಂದ 320 ಗ್ರಾಂ ಚಿನ್ನಾಭರಣ, 6.12 ಲಕ್ಷ ನಗದು, 197 ಗ್ರಾಂ ಬೆಳ್ಳಿ ವಸ್ತು ವಶಕ್ಕೆ ಪಡೆದಿದ್ದಾರೆ ಎಂದು ಅವರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದರು. 

ದಂಪತಿ ಸೇರಿ ಐವರ ಬಂಧನ: ಜಯನಗರ ಪೊಲೀಸರು, ಗುಂಪು ಕಟ್ಟಿಕೊಂಡು ಮನೆಗಳವು ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಕಾಸ್, ಹೇಮಂತ್, ಸುಷ್ಮಿತಾ, ರೋಷನ್ ಪದಂ ಹಾಗೂ ಪ್ರೇಮ್ ಬಂಧಿತ ಆರೋಪಿಗಳಾಗಿದ್ದಾರೆ. ಬಿಕಾಸ್ ಹಾಗೂ ಸುಷ್ಮಿತಾ ದಂಪತಿ ಒಬೇದುಲ್ಲಾ ಖಾನ್ ಎಂಬಾತನ ಮನೆಯಲ್ಲಿ ಕೆಲಸಕ್ಕಿದ್ದರು. 

ಸಮಯ ನೋಡಿಕೊಂಡು ತಮ್ಮ ಗ್ರೂಪ್‍ನೊಂದಿಗೆ ಕಳ್ಳತನ ಮಾಡಿದ್ದರು. ಬಂಧಿತರಿಂದ 292 ಗ್ರಾಂ ಚಿನ್ನಾಭರಣ, 15 ಸಾವಿರ ನಗದು, 168 ಗ್ರಾಂ ಬೆಳ್ಳಿ ವಸ್ತುಗಳು, 18 ವಾಚ್ ಗಳು ತಲಾ ಒಂದು ಟ್ಯಾಬ್ ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದರು. 

share
Next Story
X