ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಮಂಡ್ಯ, ಮಾ.12: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯದ ಪಿಇಎಸ್ ಕಾಲೇಜು ಹೆಲಿಪ್ಯಾಡ್ ಗೆ ರವಿವಾರ ಬಂದಿಳಿದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು.
ಇದಕ್ಕೂ ಮುನ್ನ ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಳಿಕ ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಮಂಡ್ಯ ನಗರದ ಪಿಇಎಸ್ ಕಾಲೇಜು ಹೆಲಿಪ್ಯಾಡ್ ಗೆ ಬಂದಿಳಿದರು.
ರೋಡ್‌ಶೋ: ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದ ಸರ್ಕಲ್‌ವರೆಗೆ ರೋಡ್‌ಶೋ ನಡೆಸಲಿದ್ದಾರೆ. 11.40ಕ್ಕೆ ಹನಕೆರೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ, ಮೈಸೂರು-ಕುಶಾಲನಗರ ನಡುವಿನ ನಾಲ್ಕು ಪಥಗಳ 92 ಕಿ.ಮೀ. ಉದ್ದದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಂಡ್ಯದಿಂದ ಹುಬ್ಬಳ್ಳಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 3.15ರ ಸುಮಾರಿಗೆ ಧಾರವಾಡದಲ್ಲಿ 850 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ ಐಐಟಿಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಆನಂತರ, ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ 20 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ 1507 ಮೀಟರ್ ಉದ್ದದ ದೇಶದ ಅತಿದೊಡ್ಡ ರೈಲ್ವೆ ಪ್ಲಾಟ್‍ಫಾರಂ ಅನ್ನು ಅವರು ಉದ್ಘಾಟಿಸಲಿದ್ದಾರೆ.
ಮಂಡ್ಯ ಪಿ.ಇ.ಎಸ್ ಹೆಲಿಪ್ಯಾಡ್ ಗೆ ಆಗಮಿಸಿದ ಪ್ರಧಾನಮಂತ್ರಿ @narendramodi ಅವರನ್ನು ಮುಖ್ಯಮಂತ್ರಿ @BSBommai ಅವರು ಸ್ವಾಗತಿಸಿದರು. pic.twitter.com/hNgGhyLLr7
— CM of Karnataka (@CMofKarnataka) March 12, 2023









