Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಲಿಕಾನ್ ವ್ಯಾಲಿ ಬ್ಯಾಂಕ್ ದಿವಾಳಿ: 116...

ಸಿಲಿಕಾನ್ ವ್ಯಾಲಿ ಬ್ಯಾಂಕ್ ದಿವಾಳಿ: 116 ವರ್ಷ ಇತಿಹಾಸವಿರುವ ಭಾರತೀಯ ಬ್ಯಾಂಕ್ ಮೇಲೆ ಪರಿಣಾಮ ಬೀರಿದ್ದು ಹೇಗೆ?

12 March 2023 11:56 AM IST
share
ಸಿಲಿಕಾನ್ ವ್ಯಾಲಿ ಬ್ಯಾಂಕ್ ದಿವಾಳಿ: 116 ವರ್ಷ ಇತಿಹಾಸವಿರುವ ಭಾರತೀಯ ಬ್ಯಾಂಕ್ ಮೇಲೆ ಪರಿಣಾಮ ಬೀರಿದ್ದು ಹೇಗೆ?

ಹೊಸದಿಲ್ಲಿ: ಜಾಗತಿಕ ಆರ್ಥಿಕ ಹಿಂಜರಿತದ ನಂತರದ ಬಹು ದೊಡ್ಡ ಚಿಲ್ಲರೆ ಬ್ಯಾಂಕಿಂಗ್ ವೈಫಲ್ಯವಾದ ಸಿಲಿಕಾನ್ ವ್ಯಾಲಿ ಬ್ಯಾಂಕ್ (Silicon Valley Bank) ಪತನವು ಪರಿಣಾಮಗಳ ತರಂಗವನ್ನೇ ಸೃಷ್ಟಿಸಿದ್ದು, ಅದರ ತೀವ್ರತೆಯನ್ನು ಇನ್ನಷ್ಟೇ ಮೌಲ್ಯಮಾಪನ ಮಾಡಬೇಕಿದೆ. ಆದರೆ, ಸಿಲಿಕಾನ್ ವ್ಯಾಲಿ ಬ್ಯಾಂಕ್‌ನ ಅನಿರೀಕ್ಷಿತ ಪತನದ ಪರಿಣಾಮ ಉಂಟಾಗಿರುವುದು ಅದರಿಂದ ಸುಮಾರು 13,000 ಕಿಮೀ ದೂರವಿರುವ ಮುಂಬೈನ ಸಹಕಾರ ಬ್ಯಾಂಕ್‌ನ ಮೇಲೆ ಎಂದು ndtv.com ವರದಿ ಮಾಡಿದೆ.

ನವೋದ್ಯಮಗಳಿಗೆ ಸಾಲ ಒದಗಿಸುವ ಪ್ರಮುಖ ಹಣಕಾಸು ಸಂಸ್ಥೆಯಾದ ಸಿಲಿಕಾನ್ ವ್ಯಾಲಿ ಬ್ಯಾಂಕ್‌ನಿಂದ ಅಂತರ ಕಾಯ್ದುಕೊಂಡಿರುವ ಮುಂಬೈನ SVC ಸಹಕಾರ ಬ್ಯಾಂಕ್, ಈ ಕುರಿತು ಸ್ಪಷ್ಟೀಕರಣದ ಟ್ವೀಟ್ ಮಾಡಿದ್ದು, "ಕ್ಯಾಲಿಫೋರ್ನಿಯಾ ಮೂಲದ ಸಿಲಿಕಾನ್ ವ್ಯಾಲಿ ಬ್ಯಾಂಕ್‌(SVB)ಗೂ, SVC ಬ್ಯಾಂಕ್‌ಗೂ ಸಂಪೂರ್ಣವಾಗಿ ಯಾವುದೇ ಸಂಬಂಧವಿಲ್ಲ. ಬ್ರ್ಯಾಂಡ್ ಹೆಸರುಗಳ ಸಾಮ್ಯತೆಯನ್ನು ಆಧರಿಸಿ ಆಧಾರರಹಿತ ವದಂತಿ ಹಾಗೂ ಕಿಡಿಗೇಡಿ ಸುದ್ದಿಗಳನ್ನು ಹರಡುತ್ತಿರುವ ದುಷ್ಕರ್ಮಿಗಳ ಮಾತಿಗೆ ಬ್ಯಾಂಕ್‌ನ ಸದಸ್ಯರು, ಗ್ರಾಹಕರು ಹಾಗೂ ಇತರ ಹೂಡಿಕೆದಾರರು ಯಾವುದೇ ಗಮನ ನೀಡಬಾರದು" ಎಂದು ಮನವಿ ಮಾಡಿದೆ.

ಬ್ಯಾಂಕ್‌ನ ವ್ಯಕ್ತಿತ್ವಹರಣಕ್ಕೆ ಯತ್ನಿಸುತ್ತಿರುವ ವದಂತಿಕೋರರ ವಿರುದ್ಧ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿ ಟ್ವೀಟ್ ಮಾಡಲಾಗಿದೆ.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ZyppElectric ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಕಾಶ್ ಗುಪ್ತ, "ವಿಷಯದ ಕುರಿತು ಸ್ಪಷ್ಟೀಕರಣ ನೀಡಬೇಕಾದ ಮುಂದಿನ ಸದರಿ ಸಂಜಯ್ ಲೀಲಾ ಬನ್ಸಾಲಿ (SLB) ಅವರದ್ದಾಗಬಹುದು. ಭಾರತ ನಿಜಕ್ಕೂ ವಿಸ್ಮಯಕಾರಿ" ಎಂದು ಹಾಸ್ಯ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, "ಭಾರತೀಯರು ಹಾಗೂ ವಾಟ್ಸ್ ಆ್ಯಪ್ ವಿಶ್ವವಿದ್ಯಾಲಯದ ಸದ್ಯದ ಪರಿಸ್ಥಿತಿಯಿದು. SVC ಬ್ಯಾಂಕ್ ಈ ಪ್ರಮುಖ ಸ್ಪಷ್ಟೀಕರಣ ನೀಡಿರುವುದು ನಿಜಕ್ಕೂ ಅದ್ಭುತ. ನಿಮಗೆ ಧನ್ಯವಾದಗಳು" ಎಂದು ವ್ಯಂಗ್ಯವಾಡಿದ್ದಾರೆ.

ಅಂದಹಾಗೆ, 1906ರಲ್ಲಿ ಸ್ಥಾಪನೆಯಾದ SVC ಬ್ಯಾಂಕ್‌ಗೂ ಶುಕ್ರವಾರ ಕ್ಯಾಲಿಫೋರ್ನಿಯಾ ಬ್ಯಾಂಕಿಂಗ್ ನಿಯಂತ್ರಕರಿಂದ ಸ್ಥಗಿತಗೊಂಡ ಸಿಲಿಕಾನ್ ವ್ಯಾಲಿ ಬ್ಯಾಂಕ್‌ಗೂ ಯಾವುದೇ ಸಂಬಂಧವಿಲ್ಲ.

ಇದನ್ನೂ ಓದಿ: ಸಿಲಿಕಾನ್ ವ್ಯಾಲಿ ಬ್ಯಾಂಕ್ ದಿವಾಳಿ: 2008 ರ ಬಳಿಕ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುದೊಡ್ಡ ಹಿಂಜರಿತ

share
Next Story
X