ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮಾವೇಶದ ವೇದಿಕೆಯಲ್ಲಿ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಇದೇ ವೇಳೆ ಮೈಸೂರು-ಕುಶಾಲನಗರ ಹೆದ್ದಾರಿ ಕಾಮಗಾರಿಗೆ ಮೋದಿ ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪ್ರಹ್ಲಾದ್ ಜೋಶಿ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ರವರು ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿದರು.
— Pratap Simha (@mepratap) March 12, 2023
PM @narendramodi ji dedicates the Bengaluru-Mysuru Expressway to the nation. #MysuruBengaluruExpressway#Bengaluru_Mysuru_Highway#PragatiKaHighway #GatiShakti pic.twitter.com/ra1ld5xT3m
Next Story