Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅರಣ್ಯ ಇಲಾಖೆಯ ಅತಿಕ್ರಮಣ ವಿರೋಧಿ...

ಅರಣ್ಯ ಇಲಾಖೆಯ ಅತಿಕ್ರಮಣ ವಿರೋಧಿ ಕಾರ್ಯಾಚರಣೆ ವೇಳೆ ಹಿಂಸಾತ್ಮಕ ಘರ್ಷಣೆ: 13 ಮಂದಿಗೆ ಗಾಯ

ತಂಡ ಆಗಮಿಸದಂತೆ ಬಿಲ್ಲು-ಬಾಣಗಳು, ದೇಶಿ ನಿರ್ಮಿತ ಬಂದೂಕು ಬಳಸಿದ ಅತಿಕ್ರಮಣಕಾರರು

12 March 2023 2:50 PM IST
share
ತಂಡ ಆಗಮಿಸದಂತೆ ಬಿಲ್ಲು-ಬಾಣಗಳು, ದೇಶಿ ನಿರ್ಮಿತ ಬಂದೂಕು ಬಳಸಿದ ಅತಿಕ್ರಮಣಕಾರರು

ಭೋಪಾಲ್: ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಅರಣ್ಯ ಇಲಾಖೆ ನಡೆಸಿದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯ ವೇಳೆ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ವಾಸವಾಗಿರುವವರೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ  13 ಮಂದಿ ಗಾಯಗೊಂಡಿದ್ದಾರೆ.

ಅತಿಕ್ರಮಣ ವಿರೋಧಿ ತಂಡ ಆಗಮಿಸದಂತೆ ತಡೆಯಲು ಅತಿಕ್ರಮಣಕಾರರು ಕಚ್ಚಾ ಬಾಂಬ್‌ಗಳು, ಬಿಲ್ಲುಗಳು ಹಾಗೂ  ಬಾಣಗಳು ಮತ್ತು ದೇಶಿ ನಿರ್ಮಿತ ಬಂದೂಕುಗಳನ್ನು ಬಳಸುತ್ತಿರುವ  ಆಘಾತಕಾರಿ ದೃಶ್ಯಗಳು ಕಂಡುಬಂದಿವೆ.

ಘಘ್ರಾಲಾ ಅರಣ್ಯ ಪ್ರದೇಶದಲ್ಲಿ ಅತಿಕ್ರಮಣ ನಡೆದಿದ್ದು,   ಅಕ್ರಮವಾಗಿ ಮರಗಳನ್ನು ಕಡಿಯುತ್ತಿರುವ ವರದಿ ಬಂದ  ನಂತರ ಅಧಿಕಾರಿಗಳು ಸ್ಥಳಕ್ಕೆ  ತಲುಪಿದಾಗ ಈ ಘಟನೆ ನಡೆದಿದೆ. ಬಿಲ್ಲು ಮತ್ತು ಬಾಣಗಳು, ಕಲ್ಲುಗಳು, ದೇಶ ನಿರ್ಮಿತ ಬಾಂಬ್‌ಗಳು ಮತ್ತು ಇತರ ಬಂದೂಕುಗಳಿಂದ ಶಸ್ತ್ರಸಜ್ಜಿತವಾದ ಕನಿಷ್ಠ 150 ಜನರು  ಅರಣ್ಯ ಸಿಬ್ಬಂದಿ  ಮೇಲೆ ದಾಳಿ ಮಾಡಿದರು.

"ಮೂರು ದಿನಗಳಿಂದ ಸುಮಾರು 200 ಅತಿಕ್ರಮಣದಾರರು ಅರಣ್ಯಕ್ಕೆ ಆಗಮಿಸಿದ್ದಾರೆ. ಅವರು ದೇಶೀ ನಿರ್ಮಿತ ಬಾಂಬ್‌ಗಳನ್ನು ಹೊತ್ತೊಯ್ದು ಗುಂಡಿನ ದಾಳಿ ನಡೆಸುತ್ತಿರುವ ಬಗ್ಗೆ ನಮಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಡಿಎಫ್‌ಒ ಅವರು ಎಸ್‌ಪಿ ಮತ್ತು ಜಿಲ್ಲಾಧಿಕಾರಿಗೆ ಲಿಖಿತವಾಗಿ ಮಾಹಿತಿ ನೀಡಿದ್ದಾರೆ''ಎಂದು ಅರಣ್ಯ ಇಲಾಖೆ ಅಧಿಕಾರಿ ಆರ್.ಪಿ. ರಾಯ್ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

On Camera, Encroachers Shoot Arrows, Lob Bombs To Foil Eviction Exercise https://t.co/yxdEfUGrFC pic.twitter.com/E0XNvlIdcV

— NDTV (@ndtv) March 12, 2023
share
Next Story
X