Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆಗಿಲ್ಲದ ಆಹ್ವಾನ; ಮೋದಿಗೆ ಧನ್ಯವಾದ ಹೇಳಿದ ಸಂಸದ ಡಿ.ಕೆ. ಸುರೇಶ್!

12 March 2023 7:04 PM IST
share
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆಗಿಲ್ಲದ ಆಹ್ವಾನ; ಮೋದಿಗೆ ಧನ್ಯವಾದ ಹೇಳಿದ ಸಂಸದ ಡಿ.ಕೆ. ಸುರೇಶ್!

ಬೆಂಗಳೂರು, ಮಾ.12: ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ  ತನ್ನನ್ನು ಆಹ್ವಾನ ಮಾಡದ್ದಕ್ಕೆ ಕಾಂಗ್ರೆಸ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಡಿ.ಕೆ. ಸುರೇಶ್, ''ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಅವರ ಫೇಸ್ ಬುಕ್ ಪೋಸ್ಟ್ ಹೀಗಿದೆ... 

ಮಾನ್ಯ ಪ್ರಧಾನ ಮಂತ್ರಿಗಳೇ, 

''ತಾವು (ಪ್ರಧಾನಿ ನರೇಂದ್ರ ಮೋದಿ) ಈ ದಿನ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟಿಸಿದ್ದೀರಿ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ನಾನು ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ''

''ಈ ರಾಷ್ಟ್ರೀಯ ಹೆದ್ದಾರಿಯ ಬಹುಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾದುಹೋಗಿದ್ದು, ಇಲ್ಲಿನ ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ''.

''ಈ ರಾಷ್ಟ್ರೀಯ ಹೆದ್ದಾರಿಯ ಸುಮಾರು 30 % ಕಾಮಗಾರಿಯು ಇನ್ನೂ ಬಾಕಿ ಇರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸಿದ್ದೇನೆ. ಆದರೂ ನೀವು ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್ ಗಾಗಿ  ಇಂದು ಉದ್ಘಾಟಿಸಿದ್ದೀರಿ''.

''2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಲು ಮೊದಲು ಪ್ರಸ್ತಾವನೆ ಸಲ್ಲಿಸಿದ್ದನ್ನು ತಮಗೆ ನೆನಪಿಸಬಯಸುತ್ತೇನೆ''.

''ಅಲ್ಲದೇ ರೈತರ ಭೂಮಿ ಸುಗಮ ಸ್ವಾಧೀನಕ್ಕೆ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತರದೇ ಹೋಗಿದ್ದರೆ ಈ ಯೋಜನೆ ಇಷ್ಟು ಸುಲಭವಾಗಿ ಕಾರ್ಯಸಾಧು ಆಗುತ್ತಿರಲಿಲ್ಲ ಎಂಬುದನ್ನು ನಾವು ಮರೆಯಬಾರದು. ಇದರ ಸಂಪೂರ್ಣ ಶ್ರೇಯಸ್ಸು ಶ್ರೀಯುತ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಲ್ಲಬೇಕು''.

''ಇನ್ನು ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ದೊಡ್ಡ ರಾಜ್ಯ ಕರ್ನಾಟಕದ ಸುಮಾರು 5,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯು ಪ್ರಧಾನಿ ಕಚೇರಿ ಹಾಗೂ ನೀತಿ ಆಯೋಗದ ಮುಂದೆ ಕಳೆದ 8 ವರ್ಷಗಳಿಂದ ಧೂಳು ಹಿಡಿಯುತ್ತಾ ಕೂತಿದೆ. ಈ ಕುರಿತು ನಿಮ್ಮ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕರ್ನಾಟಕ ಅಭಿವೃದ್ಧಿ ವಿರುದ್ದದ ನಿಮ್ಮ ನಿಲುವು ಹಾಗೂ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿ''.

''ಕರ್ನಾಟಕದ ಅಪೂರ್ಣ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ಕರ್ನಾಟಕದ ಜನತೆಯನ್ನು ಹೇಗಾದರೂ ವಂಚಿಸಿ ಚುನಾವಣಾ ಗೆಲುವು ಸಾಧಿಸಬಹುದು ಎನ್ನುವ ನಿಮ್ಮ ಹತಾಶ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ. ನಿಮ್ಮ ಈ ವಿಕೃತ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ'' ಎಂದು ಡಿ.ಕೆ. ಸುರೇಶ್ ಬರೆದುಕೊಂಡಿದ್ದಾರೆ. 

share
Next Story
X