ಮಾ.13ರಂದು ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ.13ರಂದು ಬೆಳಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ಆವರಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಸಚಿವ ಸುನಿಲ್ ಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸುವರು. ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story