Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆತಿಥ್ಯಕ್ಕಾಗಿ 167.92 ಕೋಟಿ ರೂ....

ಆತಿಥ್ಯಕ್ಕಾಗಿ 167.92 ಕೋಟಿ ರೂ. ಖರ್ಚು: ದಾಖಲೆಗಳಿಂದ ಬಹಿರಂಗ

ಜಿ. ಮಹಾಂತೇಶ್ಜಿ. ಮಹಾಂತೇಶ್13 March 2023 7:47 AM IST
share
ಆತಿಥ್ಯಕ್ಕಾಗಿ  167.92 ಕೋಟಿ ರೂ. ಖರ್ಚು: ದಾಖಲೆಗಳಿಂದ ಬಹಿರಂಗ

ಬೆಂಗಳೂರು, ಮಾ.12: ಇಂಧನ, ಆಹಾರ, ಹಾಲು, ಸಾರಿಗೆ, ಆತಿಥ್ಯ ಸೇರಿದಂತೆ ಇನ್ನಿತರ ಸಾಮಾನ್ಯ ವೆಚ್ಚಗಳಡಿಯಲ್ಲಿ  

ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಅವಧಿಯಲ್ಲಿ ಇದುವರೆಗೂ 83.88 ಕೋಟಿ ರೂ. ಮತ್ತು ಸಾರಿಗೆ ವೆಚ್ಚಗಳಡಿಯಲ್ಲಿ  84.04  ಕೋಟಿ ರೂ. ಸೇರಿದಂತೆ ಒಟ್ಟಾರೆ 167.92 ಕೋಟಿ ರೂ.  ಖರ್ಚು ಮಾಡಿರುವುದು ಇದೀಗ ಬಹಿರಂಗವಾಗಿದೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಇದೇ ಸಾಮಾನ್ಯ ವೆಚ್ಚಗಳಡಿ ಮಾಡಿದ್ದ ಖರ್ಚಿಗೆ ಹೋಲಿಸಿದರೆ ಬಿಜೆಪಿ ಸರಕಾರದ ಅವಧಿಯಲ್ಲಿ 31.05 ಕೋಟಿ ರೂ. ಮತ್ತು ಸಾರಿಗೆ ವೆಚ್ಚದ 20.88 ಕೋಟಿ ರೂ. ಸೇರಿದಂತೆ ಒಟ್ಟಾರೆ 51.93 ಕೋಟಿ ರೂ. ಹೆಚ್ಚಳವಾಗಿದೆ. ಈ ಸಂಬಂಧ ಸಮಗ್ರ ದಾಖಲೆಗಳು ‘ದಿ ಫೈಲ್’ಗೆ ಲಭ್ಯವಾಗಿವೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾಫಿ, ತಿಂಡಿ, ಬಿಸ್ಕೆಟ್‌ಗಳ ಹೆಸರಿನಲ್ಲಿ 200 ಕೋಟಿಗಿಂತಲೂ ಹೆಚ್ಚು ಹಣ ಲೂಟಿಯಾಗಿದೆ ಎಂದು ಬಿಜೆಪಿಯ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷ ಎನ್. ಆರ್. ರಮೇಶ್ ಅವರು ಆರೋಪಿಸಿದ್ದರ ಬೆನ್ನಲ್ಲೇ ಇದೀಗ ಬಿಜೆಪಿ ಸರಕಾರದ ಅವಧಿಯಲ್ಲಿ ಹಿಂದಿನ ಸರಕಾರವು ಮಾಡಿದ್ದ ವೆಚ್ಚಕ್ಕಿಂತಲೂ 51.93 ಕೋಟಿ ರೂ. ಹೆಚ್ಚು ವೆಚ್ಚ ಮಾಡಿರುವುದು ಮುನ್ನೆಲೆಗೆ ಬಂದಿದೆ.

 2019-20ರಲ್ಲಿ 17.90 ಕೋಟಿ ರೂ., 2020-21ರಲ್ಲಿ 16.53 ಕೋಟಿ ರೂ., 2021-22ರಲ್ಲಿ 14.45 ಕೋಟಿ ರೂ., 2022-23ರಲ್ಲಿ 15.00 ಕೋಟಿ ರೂ. ಖರ್ಚು ಮಾಡಲಾಗಿದೆ.  2023-24ರಲ್ಲಿ  ಸಾಮಾನ್ಯ ವೆಚ್ಚಗಳಿಗೆಂದು 20.00 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ನಿಗದಿಪಡಿಸಿರುವುದು ಆರ್ಥಿಕ ಇಲಾಖೆಯ ವೆಚ್ಚದ (2070-00-115-1-01-051)  ದಾಖಲೆಗಳಿಂದ ತಿಳಿದು ಬಂದಿದೆ.

2013-14ರಲ್ಲಿ 9.25 ಕೋಟಿ ರೂ., 2014-15ರಲ್ಲಿ 9.85 ಕೋಟಿ ರೂ., 2015-16ರಲ್ಲಿ 9.97 ಕೋಟಿ ರೂ., 2016-17ರಲ್ಲಿ 10.84 ಕೋಟಿ ರೂ., 2017-18ರಲ್ಲಿ 12.90 ಕೋಟಿ ರೂ. ಸೇರಿ ಒಟ್ಟಾರೆ 52.83 ಕೋಟಿ ರೂ. ಖರ್ಚಾಗಿದೆ.

ಅದೇ ರೀತಿ ಸಾರಿಗೆ ವೆಚ್ಚ (2070-00- 115-01-195) 2019-20ರಿಂದ 2023-24ರವರೆಗೆ ಒಟ್ಟು 84.04 ಕೋಟಿ ರೂ. ಖರ್ಚಾಗಿದೆ. 2019-20ರಲ್ಲಿ 18.09 ಕೋಟಿ ರೂ., 2020-21ರಲ್ಲಿ 12.00 ಕೋಟಿ ರೂ., 2020-21ರಲ್ಲಿ 9.46 ಕೋಟಿ ರೂ., 2021-22ರಲ್ಲಿ 8.49 ಕೋಟಿ ರೂ., 2022-23ರಲ್ಲಿ 12.00 ಕೋಟಿ ರೂ., 2023ರಲ್ಲಿ 12.00 ಕೋಟಿ ರೂ. ವೆಚ್ಚವಾಗಿದೆ.

ಇದೇ ಸಾರಿಗೆ ವೆಚ್ಚದ ಲೆಕ್ಕ ಶೀರ್ಷಿಕೆಯಡಿಯಲ್ಲಿ 2013-14ರಲ್ಲಿ 14.35 ಕೋಟಿ ರೂ., 2014-15ರಲ್ಲಿ 14.34 ಕೋಟಿ ರೂ., 2015-16ರಲ್ಲಿ 7.89 ಕೋಟಿ ರೂ., 2016-17ರಲ್ಲಿ 14.68 ಕೋಟಿ ರೂ., 2017-18ರಲ್ಲಿ 11.89 ಕೋಟಿ ರೂ. ಸೇರಿ ಒಟ್ಟಾರೆ 63.16 ಕೋಟಿ ರೂ. ವೆಚ್ಚವಾಗಿದೆ. ಸಾರಿಗೆ ವೆಚ್ಚಕ್ಕೆ ಸಂಬಂಧಿಸಿದಂತೆ ಮಾಡಿರುವ ವೆಚ್ಚವನ್ನು ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಗೆ ಹೋಲಿಸಿದರೆ ಬಿಜೆಪಿ ಸರಕಾರದ ಅವಧಿಗೆ ಹೋಲಿಸಿದರೆ ಸಾರಿಗೆ ವೆಚ್ಚದಲ್ಲಿ 20.88 ಕೋಟಿ ರೂ. ಹೆಚ್ಚಳವಾಗಿರುವುದು ಗೊತ್ತಾಗಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವಧಿಯಲ್ಲಿ ಕೇವಲ ಕಾಫಿ, ತಿಂಡಿ, ಬಿಸ್ಕೆಟ್‌ಗಳ ಹೆಸರಲ್ಲಿ 200 ಕೋಟಿ ರೂ.ಗಿಂತ ಹೆಚ್ಚು ಹಣ ಲೂಟಿ ಮಾಡಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ ಅಧ್ಯಕ್ಷ ಎನ್.ಆರ್.ರಮೇಶ್ ಆರೋಪಿಸಿದ್ದರು.
2013-14ರಿಂದ 2017-18ರವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ ಕಾಫಿ, ತಿಂಡಿ ಮತ್ತು ಊಟ ಇತ್ಯಾದಿ ಆತಿಥ್ಯದ ವೆಚ್ಚಕ್ಕೆ 3.26 ಕೋಟಿ ರೂ. ಖರ್ಚಾಗಿದೆ. ಆದರೆ, 200 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದೆ. ಇದು ಐಪಿಸಿ ಸೆಕ್ಷನ್ 420ಗೆ ಅರ್ಹವಾದ ಪ್ರಕರಣ. ಈ ಮೂಲಕ ಇಡೀ ಬಿಜೆಪಿಯೇ ಸುಳ್ಳಿನ ಕಾರ್ಖಾನೆ ಎಂಬುದು ಪದೇ ಪದೇ ಸಾಬೀತು ಆಗುತ್ತಿದೆ ಎಂದು ಸಿದ್ದರಾಮಯ್ಯ ಅವರು ದಾಖಲೆ ಸಹಿತ ಹೇಳಿಕೆ ಬಿಡುಗಡೆ ಮಾಡಿದ್ದನ್ನು ಸ್ಮರಿಸಬಹುದು.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X