ಫೆ.15ರಂದು ಮಂಗಳೂರು ವಿವಿ ಘಟಿಕೋತ್ಸವ

ಮಂಗಳೂರು, ಮಾ.13: ಮಂಗಳೂರು ವಿಶ್ವವಿದ್ಯಾನಿಲಯದ 41ನೇ ವಾರ್ಷಿಕ ಘಟಿಕೋತ್ಸವವು ಮಾ.15ರಂದು ಬೆಳಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಈ ವಿಷಯ ಪ್ರಕಟಿಸಿದರು.
ಕರ್ನಾಟಕದ ರಾಜ್ಯಪಾಲರು ಹಾಗೂವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್
ಘಟಿಕೋತ್ಸವದ ಅಧ್ಯಕ್ಷತೆಯಲ್ಲಿ ಈ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಪ್ರೊ. ಎಸ್. ಸಿ. ಶರ್ಮ, ಮುಖ್ಯ ಅತಿಥಿಯಾಗಿ ಫಟಿಕೋತ್ಸವ ಭಾಷಣವನ್ನು ಮಾಡಲಿರುವರು. ಉನ್ನತ ಶಿಕ್ಷಣ ಸಚಿವ ಹಾಗೂ ಸಹಕುಲಾಧಿಪತಿ ಡಾ. ಅಶ್ವಥ್ ನಾರಾಯಣ ಸಿ. ಎನ್ ಈ ಸಂದರ್ಭದಲ್ಲಿ ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.
115 ಮಂದಿಗೆ ಪಿಎಚ್‌ಡಿ: ಘಟಿಕೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಒಬ್ಬರಿಗೆ ಡಾಕ್ಟರ್ ಆಫ್ ಸಯನ್ಸ್ (ಪ್ರಾಣಿಶಾಸ್ತ್ರ), 115 ಮಂದಿಗೆ ಡಾಕ್ಟರ್ ಆಫ್ ಫಿಲಾಸಪಿ ಪದವಿ (ಪಿಎಚ್‌ಡಿ) ಈ ಪೈಕಿ ಕಲಾ ವಿಭಾಗದಲ್ಲಿ 29, ವಿಜ್ಞಾನ 61, ವಾಣಿಜ್ಯ-22, ಶಿಕ್ಷಣ ವಿಭಾಗದಲ್ಲಿ 3 ಮಂದಿ ಪಿಎಚ್‌ಡಿ ಪದವಿ ಪಡೆಯಲಿದ್ದಾರೆ. ಇವರಲ್ಲಿ 60ಮಂದಿ ಪುರುಷರು ಹಾಗೂ 55 ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರು ವಿವಿ ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ.ರಾಜು ಕೃಷ್ಣ ಚಲಣ್ಣವರ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಎಂ.ಪ.ಉಮೇಶ್ ಚಂದ್ರ ಉಪಸ್ಥಿತರಿದ್ದರು.