ಹಾವೇರಿ: ಮಸೀದಿ, ಶಾಲೆ, ಮನೆಗಳ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಕಲ್ಲು ತೂರಾಟ

ಹಾವೇರಿ, ಮಾ.14: ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಸಂಘಪರಿವಾರದ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಮಂಗಳವಾರ ವರದಿಯಾಗಿದೆ.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಹಿನ್ನೆಲೆ ಇಂದು ರಟ್ಟೀಹಳ್ಳಿಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಪ್ರಮುಖ ಬೀದಿಯಲ್ಲಿ ಬೈಕ್ ರ‍್ಯಾಲಿ ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರು ಮಸೀದಿ, ಮನೆಗಳು ಹಾಗೂ ಉರ್ದು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆನ್ನಲಾಗಿದೆ. ಅಲ್ಲದೇ, ಆಟೋ ಚಾಲಕರೊಬ್ಬರಿಗೆ ಥಳಿಸಿರುವ ಘಟನೆಯೂ ವರದಿಯಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು ಗಲಾಟೆ ಚದುರಿಸಿ ನಗರದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
#BREAKING 20 people taken into custody for violence in #Haveri #Karnataka. During bike rally carried out by #Hindu groups- stone pelting has been reported. On 9th,cops inform,some #Muslim youths had opposed rally on a particular stretch of road. They even threatened. (1/2) pic.twitter.com/kOVSoZ5IDa
— Imran Khan (@KeypadGuerilla) March 14, 2023







