ದ್ವಿತೀಯ ಪಿಯುಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 63 ವಿದ್ಯಾರ್ಥಿಗಳು ಗೈರು

ಮಂಗಳೂರು, ಮಾ.14: ದ.ಕ.ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 63 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ರಸಾಯನ ಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 13,981 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 13,947 ವಿದ್ಯಾರ್ಥಿಗಳು ಹಾಜರಾಗಿದ್ದರೆ, 34 ಮಂದಿ ಗೈರಾಗಿದ್ದಾರೆ. ರಸಾಯನ ಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 153 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 128 ವಿದ್ಯಾರ್ಥಿಗಳು ಹಾಜರಾಗಿದ್ದರೆ, 25 ಮಂದಿ ಗೈರಾಗಿದ್ದಾರೆ.
ಮೂಲಗಣಿತ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 618 ರೆಗ್ಯುಲರ್ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಮೂಲಗಣಿತ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 8 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 6 ವಿದ್ಯಾರ್ಥಿಗಳು ಹಾಜರಾಗಿದ್ದರೆ, 2 ಮಂದಿ ಗೈರಾಗಿದ್ದಾರೆ.
ಮನಶಾಸ್ತ್ರ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 224 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 222 ವಿದ್ಯಾರ್ಥಿಗಳು ಹಾಜರಾಗಿದ್ದರೆ, 2 ಮಂದಿ ಗೈರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದ್ದಾರೆ.
Next Story





