ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ಮಾ.14: ತಾಪಮಾನ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾ.16ರಿಂದ 22ರವರೆಗೂ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಯುಗಾದಿಗೂ ಮೊದಲೇ ಮಳೆಯಾಗುವ ಮುನ್ಸೂಚನೆಗಳು ಕಂಡುಬಂದಿವೆ.
ರಾಜ್ಯದಲ್ಲಿ 5 ಮಿ.ಮೀನಿಂದ 15 ಮಿ.ಮೀವರೆಗೆ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕರು ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.
ಆದರೆ, ಆಗ್ನೇಯ ಭಾಗದ ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಇನ್ನೆರಡು ವಾರ ಮಳೆಯಾಗುವ ಮುನ್ಸೂಚನೆಗಳಿವೆ. ಒಟ್ಟಾರೆ ಈ ಭಾಗದಲ್ಲಿ 30 ಮಿ.ಮೀವರೆಗೂ ಮಳೆ ನಿರೀಕ್ಷಿಸಬಹುದಾಗಿದೆ.
Next Story