ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕ್ರೈಸ್ತರಿಗೆ ಬಿಜೆಪಿ ಟಿಕೆಟ್ ನೀಡಲು ಆಗ್ರಹ; ಬಿಎಸ್ ವೈ ಭೇಟಿಯಾದ ಮುಖಂಡರು
ಬೆಂಗಳೂರು, ಮಾ.14: ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕ್ರೈಸ್ತ ಸಮುದಾಯದವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಆಲ್ ಇಂಡಿಯಾ ಕ್ರಿಶ್ಚಿಯನ್ ವಾಯ್ಸ್ ಮುಖಂಡರು ಆಗ್ರಹಿಸಿದ್ದಾರೆ.
ಮಂಗಳವಾರ ನಗರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕ್ರೈಸ್ತ ಮುಖಂಡರ ನಿಯೋಗವು, ಶಾಂತಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕ್ರೈಸ್ತ ಸಮುದಾಯದವರ ಹೆಚ್ಚಿನ ಮತಗಳು ಇರುವ ಹಿನ್ನೆಲೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡ ಸೆಬಾಸ್ಟಿಯನ್ ಅಂಥೋಣಿ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಲಾಯಿತು.
ಇದನ್ನೂ ಓದಿ: ಬೈಯ್ಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನೀರಿನ ಡ್ರಮ್‍ನಲ್ಲಿ ಮಹಿಳೆಯ ಮೃತದೇಹ ಪತ್ತೆ
Next Story