ವಿಜಯ ಸಂಕಲ್ಪ ಯಾತ್ರೆ: ಪೆರ್ಡೂರಿನಿಂದ ಬ್ರಹ್ಮಾವರದವರೆಗೆ ಬೈಕ್ ರ‍್ಯಾಲಿ

ಉಡುಪಿ, ಮಾ.೧೪: ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬೈಕ್ ರ‍್ಯಾಲಿಯು ಪೆರ್ಡೂರಿನಿಂದ ಬ್ರಹ್ಮಾವರದ ವರೆಗೆ ಮಂಗಳವಾರ ನಡೆಯಿತು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಪೂರ್ವಭಾವಿಯಾಗಿ ಮಣಿಪಾಲದ ಉಡುಪಿ ಜಿಲ್ಲಾಧಿಕಾರಿ ಕಛೇರಿ ರಜತಾದ್ರಿ ಬಳಿಯ ಕೀರ್ತಿಶೇಷ ಡಾ.ವಿ.ಎಸ್. ಆಚಾರ್ಯ ರವರ ಪ್ರತಿಮೆಗೆ ಮಾಲಾರ್ಪಣೆಗೈಯಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಒಬಿಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಎ.ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ವಿಜಯ ಸಂಕಲ್ಪಯಾತ್ರೆ ರಾಜ್ಯ ಸಹ ಸಂಚಾಲಕ ದತ್ತಾತ್ರಿ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.





