ಬ್ರಹ್ಮಾವರ: ಮಿನಿ ವಿಧಾನಸೌಧ ಮಾ.23ಕ್ಕೆ ಉದ್ಘಾಟನೆ

ಉಡುಪಿ, ಮಾ.14: ಬ್ರಹ್ಮಾವರ ತಾಲೂಕಿನ ಆಡಳಿತ ಸೌಧದ (ಮಿನಿ ವಿಧಾನಸೌಧ) ನೂತನ ಕಟ್ಟಡದ ಉದ್ಘಾಟನೆ ಮಾ.23ರ ಗುರುವಾರದಂದು ನಡೆಯಲಿದೆ ಎಂದು ಶಾಸಕ ಕ.ರಘುಪತಿ ಭಟ್ ತಿಳಿಸಿದ್ದಾರೆ.
ಬ್ರಹ್ಮಾವರದಲ್ಲಿ ನಿರ್ಮಿಸಿರುವ ನೂತನ ತಾಲೂಕು ಆಡಳಿತ ಸೌಧ (ಮಿನಿ ವಿಧಾನಸೌಧ)ವನ್ನು ಮಾ.23ರಂದು ಕಂದಾಯ ಸಚಿವ ಆರ್. ಅಶೋಕ್ ಉದ್ಘಾಟಿಸಲಿದ್ದಾರೆ ಎಂದು ಅವರು ಇದರ ಪೂರ್ವ ತಯಾರಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ ರಾಜಶೇಖರ್ ಮೂರ್ತಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾದ ಸಹನಾ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.
Next Story