Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.15-16: ನವಭಾರತ ರಾತ್ರಿ ಪ್ರೌಢಶಾಲೆಯ...

ಮಾ.15-16: ನವಭಾರತ ರಾತ್ರಿ ಪ್ರೌಢಶಾಲೆಯ ಸಂಸ್ಥಾಪಕ ಹಾಜಿ ಖಾಲಿದ್ ಮುಹಮ್ಮದ್ ಜನ್ಮ ಶತಾಬ್ಧಿ ಕಾರ್ಯಕ್ರಮ

14 March 2023 9:41 PM IST
share
ಮಾ.15-16: ನವಭಾರತ ರಾತ್ರಿ ಪ್ರೌಢಶಾಲೆಯ ಸಂಸ್ಥಾಪಕ ಹಾಜಿ ಖಾಲಿದ್ ಮುಹಮ್ಮದ್ ಜನ್ಮ ಶತಾಬ್ಧಿ ಕಾರ್ಯಕ್ರಮ

ಮಂಗಳೂರು, ಮಾ.14: ನಗರದ ರಥಬೀದಿಯ ನವಭಾರತ ಎಜುಕೇಶನ್ ಸೊಸೈಟಿ (ರಿ)-ನವಭಾರತ ರಾತ್ರಿ ಪ್ರೌಢಶಾಲೆಯ ಸಂಸ್ಥಾಪಕ ದಿ. ಹಾಜಿ ಖಾಲಿದ್ ಮುಹಮ್ಮದ್‌ರ ಜನ್ಮಶತಾಬ್ಧಿ ಹಾಗೂ ನವಭಾರತ ರಾತ್ರಿ ಪ್ರೌಢಶಾಲೆಯ 80ನೆ ವರ್ಧಂತ್ಯುತ್ಸವ ಕಾರ್ಯಕ್ರಮವು ಮಾ.15 ಮತ್ತು 16ರಂದು ನಗರದ ಪುರಭವನದಲ್ಲಿ ನಡೆಯಲಿದೆ.

ಬಡತನ ಮತ್ತು ಕೌಟುಂಬಿಕ ಸಮಸ್ಯೆಯಿಂದ ಅನೇಕ ಮಂದಿ ಶಾಲಾ ಶಿಕ್ಷಣದಿಂದ ವಂಚಿತರಾಗುವುದನ್ನು ಕಂಡ ಹಾಜಿ ಖಾಲಿದ್ ಮುಹಮ್ಮದ್ 1943ರ ಮಾರ್ಚ್ 15ರಂದು ಸ್ಥಾಪಿಸಿದ ರಾತ್ರಿ ಶಾಲೆಯು ಇಂದು ಕೂಡಾ ಮುನ್ನಡೆಯುತ್ತಿದೆ. ಆ ಮೂಲಕ ದಿ. ಹಾಜಿ ಖಾಲಿದ್ ಮುಹಮ್ಮದ್ ‘ವಯಸ್ಕರ ಶಿಕ್ಷಣದ ಐಕಾನ್’ ಎಂಬ ಮನ್ನಣೆಗೆ ಪಾತ್ರರಾಗಿದ್ದಾರೆ.

ಬ್ರಿಟಿಷರ ದಬ್ಬಾಳಿಕೆಯ ಕಾಲವದು. ಖಾಲಿದ್ ಮುಹಮ್ಮದ್ ಎಂಬ ಹೈಸ್ಕೂಲ್ ಬಾಲಕ ಬಡ ಕಾರ್ಮಿಕರು ಶಿಕ್ಷಣದಿಂದ ವಂಚಿತರಾಗುವುದನ್ನು ಮನಗಂಡು ಐದು ಮಂದಿ ವಯಸ್ಕರನ್ನು ಸೇರಿಸಿಕೊಂಡು ರಾತ್ರಿ ಶಾಲೆಯನ್ನು ಸ್ಥಾಪಿಸಿದರು. ಆರಂಭದಲ್ಲಿ ಈ ಶಾಲೆಗೆ ‘ನವ ಬಹರ್’ ಬಳಿಕ ‘ನವಭಾರತ್’ ಎಂಬ ಹೆಸರನ್ನು ನಮೂದಿಸಿದರು.

ಈ ಮಧ್ಯೆ ಮುಚ್ಚುವ ಅಂಚಿನಲ್ಲಿದ್ದ ಮಂಗಳೂರಿನ ಬದ್ರಿಯಾ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿಯೂ ಖಾಲಿದ್ ಮುಹಮ್ಮದ್ ಸುಮಾರು 10 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಮುಖ್ಯಶಿಕ್ಷಕರಾಗಿ ಜವಾಬ್ದಾರಿ ವಹಿಸಿಕೊಂಡಾಗ ಬದ್ರಿಯಾ ಶಾಲೆಯ ವಿದ್ಯಾರ್ಥಿಗಳ ಸಂಖ್ಯೆ 46 ಮತ್ತು ಎಸೆಸೆಲ್ಸಿ ಫಲಿತಾಂಶವು ಶೇ.5 ಆಗಿತ್ತು. ಹತ್ತೇ ವರ್ಷದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 250ಕ್ಕೆ ಮತ್ತು ಎಸೆಸೆಲ್ಸಿ ಫಲಿತಾಂಶವು ಶೇ.80ಕ್ಕೇರಿತ್ತು. ಹಗಲು ಬದ್ರಿಯಾ ಪ್ರೌಢಶಾಲೆ ಮತ್ತು ರಾತ್ರಿ ನವಭಾರತ ಪ್ರೌಢಶಾಲೆಯ ಉನ್ನತಿಗೆ ಶ್ರಮಿಸಿ  60ಕ್ಕೂ ಅಧಿಕ ವರ್ಷಗಳ ಕಾಲ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಖಾಲಿದ್ ಮುಹಮ್ಮದ್ ನಿವೃತ್ತಿಯ ಬಳಿಕ ಸರಕಾರದಿಂದ ಯಾವುದೇ ಪಿಂಚಣಿ ಪಡೆಯದಿರುವುದು ಗಮನಾರ್ಹ.

ನವಭಾರತ ರಾತ್ರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ ಡಿ.ಆರ್.ಕಾಮತ್ ಅಧ್ಯಕ್ಷತೆಯ ಸಮಿತಿಯು 1997ರಲ್ಲಿ ಖಾಲಿದ್ ಮುಹಮ್ಮದ್ ಅವರನ್ನು ಮಂಗಳೂರಿನ ಪುರಭವನದಲ್ಲಿ ಸನ್ಮಾನಿಸಲಾಗಿತ್ತು. ಇದೀಗ ಅವರ ಜನ್ಮಶತಾಬ್ಧಿ ಕಾರ್ಯಕ್ರಮಕ್ಕೆ ಪುರಭವನ ಸಜ್ಜಾಗಿವೆ.

80 ವರ್ಷದಲ್ಲಿ ಸುಮಾರು 16 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ಕಲಿತಿರುವುದು ಗಮನಾರ್ಹ. ಈ ಪ್ರೌಢಶಾಲೆಯನ್ನು ರಾತ್ರಿ ಕಾಲೇಜು ಮಟ್ಟಕ್ಕೆ ಏರಿಸಬೇಕು ಮತ್ತು ಸರಕಾರದಿಂದ ಅನುದಾನ ದೊರಕಿಸಿ ಕೊಡಬೇಕು ಎಂಬ ಕನಸನ್ನು ಹಾಜಿ ಖಾಲಿದ್ ಮುಹಮ್ಮದ್ ಕಂಡಿದ್ದರು. ಆದರೆ ಅದಿನ್ನೂ ಈಡೇರಿಲ್ಲ. ಜನ್ಮಶತಾಬ್ಧಿ ಕಾರ್ಯಕ್ರಮದ ಸಂದರ್ಭದಲ್ಲಾದರೂ ಸರಿ, ಸರಕಾರ ಈ ಬೇಡಿಕೆಗೆ ಸ್ಪಂದಿಸುವ ಮೂಲಕ ವಯಸ್ಕರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂಬುದು ಕಾರ್ಯಕ್ರಮ ಸಂಘಟಕರ ಆಗ್ರಹವಾಗಿದೆ.

share
Next Story
X