Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.17: ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ...

ಮಾ.17: ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

14 March 2023 9:55 PM IST
share
ಮಾ.17: ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮುಡಿಪು: ಮಾ.17ರಂದು ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಮಂಗಳೂರು ವಿಶ್ವವಿದ್ಯಾನಿಲ ಯದ ಸಹಯೋಗದೊಂದಿಗೆ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಸಮ್ಮೇಳನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ, ಅನುವಾದಕಿ ಶ್ಯಾಮಲಾ ಮಾಧವ್‌ ಅವರು ವಹಿಸಲಿದ್ದು ಉದ್ಘಾಟನೆಯನ್ನು ಡಾ. ಮೋಹನ ಆಳ್ವ ಅವರು ನೆರವೇರಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ  ಶಾಸಕರಾದ ಯುಟಿ ಖಾದರ್‌ ವಿಶ್ವವಿದ್ಯಾನಿಲಯದ ಕುಲಪತಿಗಳಾಗಿರುವ ಪ್ರೊ. ಪಿ ಯಸ್‌ ಯಡಪಡಿತ್ತಾಯ ಅವರು ಪುಸ್ತಕ ಮತ್ತು ಇತರ ಮಳಿಗೆಗಳ ಉದ್ಗಾಟನೆಯನ್ನು ನೆರವೇರಿಸಲಿದ್ದಾರೆ. ಮಾಜಿ ಶಾಸಕರಾಗಿರುವ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಹಾಗೂ ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳಿದ್ದು ʼಕರಾವಳಿ ಸಾಹಿತ್ಯದಲ್ಲಿ ಸಾಮರಸ್ಯʼ ಎಂಬ ವಿಚಾರಗೋಷ್ಠಿಯಲ್ಲಿ ಎಸ್‌ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ  ಅಧ್ಯಕ್ಷತೆಯನ್ನು ವಹಿಸಲಿದ್ದು ಡಾ. ಇಸ್ಮಾಯಿಲ್‌ ಎನ್‌ ಮತ್ತು ಡಾ. ರಾಜಶ್ರೀ ಅವರು ವಿಚಾರಮಂಡನೆಯನ್ನು ಮಾಡಲಿದ್ದಾರೆ. ಬಳಿಕ ನಡೆಯಲಿರುವ ʼಪ್ರಜಾಪ್ರಭುತ್ವದ ಭವಿಷ್ಯʼ ಎಂಬ ಯುವ ಚಿಂತನಾ ಗೋಷ್ಠಿಯಲ್ಲಿ ಡಾ ಯಶು ಕುಮಾರ್.‌ ಶಬೀನಾ ಎಂ ಮುಡಿಪು, ಲತೇಶ್‌ ಬಾಕ್ರಬೈಲ್‌ ಅವರು ವಿಚಾರ ಮಂಡನೆಯನ್ನು ಮಾಡಲಿದ್ದಾರೆ.

ʼಗ್ರಾಮೀಣ ಪತ್ರಿಕೋದ್ಯಮ – ಸವಾಲು ಮತ್ತು ಸಾಧ್ಯತೆಗಳುʼ ಎಂಬ ವಿಷಯದ ಮೇಲೆ ಸಂವಾದ ಗೋಷ್ಠಿಯೂ ನಡೆಯಲಿದ್ದು ಪತ್ರಕರ್ತ ವಿದ್ಯಾಧರ್‌ ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಉಳ್ಳಾಲ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್‌ ಕೊಣಾಜೆ ಅವರು ಆಶಯ ಭಾಷಣ ಮಾಡಲಿದ್ದಾರೆ.

ಶಶಿಧರ್‌ ಪೊಯತ್ತಬೈಲ್‌, ಸತೀಶ್‌ ಪುಂಡಿಕಾಯಿ, ಹಂಝ ಮಲಾರ್‌, ಸತೀಶ್‌ ಕೊಣಾಜೆ, ಅನ್ಸಾರ್‌ ಇನೋಳಿ, ಮೋಹನ್‌ ಕುತ್ತಾರ್‌, ವಜ್ರ ಗುಜರನ್‌ ಇವರು ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ಅವರಿಂದ ʼಉಳ್ಳಾಲದ ಸದ್ದಿಲ್ಲದ ಸಾಧಕರುʼ ಎಂಬ ವಿಷಯದ ಮೇಲೆ ವಿಶೇಷೋಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ವಿವಿಧ ಗಣ್ಯರಿಗೆ ಸನ್ಮಾನ

ಸಂಜೆ 5 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಒಂಬತ್ತು ಮಹನೀಯರಿಗೆ ಸನ್ಮಾನ ನಡೆಯಲಿದೆ.  ಉದ್ಯಮ ಮತ್ತು ಗಡಿನಾಡ ಕನ್ನಡಿಗ ಕ್ಷೇತ್ರದಲ್ಲಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಸಾಹಿತ್ಯದಲ್ಲಿ ಇರಾ ನೇಮು ಪೂಜಾರಿ, ಸಮಾಜ ಸೇವೆಯಲ್ಲಿ ಇಬ್ರಾಹಿಂ ಕೋಡಿಜಾಲು, ಶಿಕ್ಷಣ ಕ್ಷೇತ್ರದಲ್ಲಿ ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂಶೋಧನೆಯಲ್ಲಿ ಡಾ. ಸಾಯಿಗೀತಾ, ಲಲಿತಕಲೆಯಲ್ಲಿ ಕರ್ನಾಟಕ ಕಲಾಶ್ರೀ ವಿದುಷಿ ರಾಜಶ್ರೀ ಉಳ್ಳಾಲ, ಯಕ್ಷಗಾನದಲ್ಲಿ ಕಲಾಗಂಗೋತ್ರಿ ಯಕ್ಷಗಾನ ಕೇಂದ್ರ, ಸೋಮೇಶ್ವರ ಉಚ್ಚಿಲ, ಮಾಧ್ಯಮ ಕ್ಷೇತ್ರದಲ್ಲಿ ಪುಷ್ಪರಾಜ್‌ ಬಿ ಎನ್‌ ಮತ್ತು ಭೂತಾರಾಧನೆಗಾಗಿ ಮಾಯಿಲ ಕುತ್ತಾರ್‌ ಇವರು ಸನ್ಮಾನಗೊಳ್ಳಲಿದ್ದಾರೆ.

ಶಾರದಾ ಗಣಪತಿ ವಿದ್ಯಾಕೇಂದ್ರದ ಸಂಚಾಲಕರಾಗಿರುವ ಟಿ ಜಿ ರಾಜಾರಾಂ ಭಟ್‌ ಅವರು ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ, ಹಾವೇರಿ ಇಲ್ಲಿನ ನಿವೃತ್ತ ಕುಲಪತಿಗಳಾಗಿರುವ ಪ್ರೊ ಚಿನ್ನಪ್ಪ ಗೌಡ ಅವರು ಸಮಾರೋಪ ಭಾಷಣವನ್ನು ಮಾಡಲಿದ್ದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾಗಿರುವ ಪ್ರೊ. ಕಿಶೋರ್‌ ಕುಮಾರ್‌ ಸಿ ಕೆ ಮತ್ತು ಕಾರ್ಪೋರೇಟ್‌ ಅಫ್ಫೇರ್ಸ್‌ ಇನ್ಫೋಸಿಸ್‌ ಲಿ. ಬೆಂಗಳೂರು ಇದರ ಮುಖ್ಯಸ್ಥರಾಗಿರುವ ಸಂತೋಷ್‌ ಅನಂತಪುರ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮ್ಮೇಳನದಲ್ಲಿ ಕರ್ನಾಟಕ ಕಲಾಶ್ರೀ ವಿದುಷಿ ರಾಜಶ್ರೀ ಉಳ್ಳಾಲ ಅವರ ನಾಟ್ಯನಿಕೇತನ ಕೊಲ್ಯ ಮಂಗಳೂರು, ವಿದುಷಿ ರೇಷ್ಮಾ ನಿರ್ಮಲ್‌ ಭಟ್‌ ಅವರ ನೃತ್ಯ ಲಹರಿ ನಾಟ್ಯಾಲಯ (ರಿ) ಫಜೀರು, ಕುಸುಮ ಪ್ರಶಾಂತ ಉಡುಪ ಮತ್ತು ಬಳಗ, ಮಂಜುಳಾ ಜಿ ರಾವ್‌ ಇರಾ ಇವರ ಕೊಳಲು ಸಂಗೀತ ವಿದ್ಯಾಲಯ, ಇರಾ , ದೇರಳಕಟ್ಟೆಯ ದಕಜಿಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಇಲ್ಲಿನ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳು ಜರಗಲಿವೆ. ಸಮ್ಮೇಳನದಲ್ಲಿಪುಸ್ತಕ ಪ್ರದರ್ಶನ, ಜಾನಪದ ವಸ್ತುಗಳ ಪ್ರದರ್ಶನ, ವಿವಿಧ ಮಳಿಗೆ ಗಳು ಹೀಗೆ ಸಾಹಿತ್ಯಾಸಕ್ತರಿಗೆ, ಸಾರ್ವಜನಿಕರಿಗೆ ಉಪಯುಕ್ತವಾಗುವ ಅನೇಕ ವಿಷಯಗಳನ್ನು ಜೋಡಿಸಿಕೊಳ್ಳಲಾಗಿದೆ ಎಂದು ತಾಲೂಕಿನ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
Next Story
X