ಮಾ.23ರಿಂದ 30ರವರೆಗೆ 14ನೆ ಬೆಂಗಳೂರು ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವ: 50 ದೇಶಗಳ 200 ಚಿತ್ರಗಳ ಪ್ರದರ್ಶನ
ಬೆಂಗಳೂರು, ಮಾ.14: ಈ ಬಾರಿ ಮಾರ್ಚ್ 23 ರಿಂದ 30ರವರೆಗೆ 14ನೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಮಾ.23ರ ಸಂಜೆ ವಿಧಾನಸೌಧ ಮುಂಭಾಗದಲ್ಲಿ ಚಿತ್ರೋತ್ಸವಕ್ಕೆ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಲಿದ್ದು, ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಅವರು, ಮಾ.30ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಮುಕ್ತಾಯ ಸಮಾರಂಭ ನಡೆಯಲಿದೆ.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂದು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದರು.
ಚಿತ್ರೋತ್ಸವದಲ್ಲಿ 50 ದೇಶಗಳ 200 ಅತ್ಯುತ್ತಮ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಈ ವೇಳೆ ಪ್ರದೀಪ್, ಪಿ.ಶೇಷಾದ್ರಿ, ರಿಜಿಸ್ಟ್ರಾರ್ ಹಿಮಂತ್ ರಾಜು ಉಪಸ್ಥಿತರಿದ್ದರು.
Next Story





