ಕಿನ್ನಿಮೂಲ್ಕಿ | ಗುಜರಿ ಅಂಗಡಿಗೆ ಬೆಂಕಿ: ಅಪಾರ ನಷ್ಟ

ಉಡುಪಿ, ಮಾ.15: ಗುಜರಿ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ನಷ್ಟ ಉಂಟಾದ ಘಟನೆ ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಮುಸ್ಲಿಮ್ ವ್ಯಾಪಾರಿಯೋರ್ವರಿಗೆ ಸಂಬಂಧಿಸಿ ಗುಜರಿ ಅಂಗಡಿಯಲ್ಲಿ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ಗುಜರಿ ಅಂಗಡಿಯಲ್ಲಿ ದಾಸ್ತಾನು ಇರಿಸಲಾಗಿತ್ತು. ಮಂಗಳವಾರ ಮಧ್ಯರಾತ್ರಿ ಸುಮಾರಿಗೆ ಆಕಸ್ಮಿಕವಾಗಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಹಾಗೂ ಮಲ್ಪೆ ಅಗ್ನಿಶಾಮಕದಳದ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅನಾಹುತಕ್ಕೆ ಕಾರಣವಾಗಿರುವ ಬಗ್ಗೆ ಶಂಕಿಸಲಾಗಿದೆ.
Next Story