ಕಾರ್ಕಳ: ಮಾ.17ರಂದು ಕಾಂಗ್ರೆಸ್ ಕರಾವಳಿ ಧ್ವನಿ ಯಾತ್ರೆ
ಕಾರ್ಕಳ, ಮಾ.15: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರಜಾಧ್ವನಿ ಕಾರ್ಯಕ್ರಮದ ಅಂಗವಾಗಿ ಕರಾವಳಿ ಧ್ವನಿ ಯಾತ್ರೆ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ಚ್ 17ರಂದು 3 ಜಿಲ್ಲಾ ಪಂಚಾಯತ್ ಹಾಗೂ 1 ನಗರ ಪ್ರದೇಶದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಕೆದಿಂಜೆ ಪೇಟೆ, 12 ಗಂಟೆಗೆ ಬಜಗೋಳಿಯ ಹೋಟೆಲ್ ಚಿರಾಗ್, ಅಪರಾಹ್ನ 3 ಗಂಟೆಗೆ ಕಾರ್ಕಳ ಬಂಡಿಮಠ ಬಸ್ ನಿಲ್ದಾಣ ಹಾಗೂ ಸಂಜೆ 5 ಗಂಟೆಗೆ ಹೆಬ್ರಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಆರ್.ಬಿ. ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹಾಗೂ ಪಕ್ಷದ ಇತರ ಹಿರಿಯ ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಪೂಜಾರಿ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.







