Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ...

ರಾಜ್ಯದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆ ಜಾರಿ: ಡಿಕೆಶಿ ಆಕ್ರೋಶ, ಸಿಎಂ ರಾಜೀನಾಮೆಗೆ ಆಗ್ರಹ

15 March 2023 2:15 PM IST
share
ರಾಜ್ಯದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಯೋಜನೆ ಜಾರಿ: ಡಿಕೆಶಿ ಆಕ್ರೋಶ, ಸಿಎಂ ರಾಜೀನಾಮೆಗೆ ಆಗ್ರಹ

ಬೆಂಗಳೂರು: 'ಮಹಾರಾಷ್ಟ್ರ ಬಿಜೆಪಿ ಸರ್ಕಾರ ಗಡಿಭಾಗದ ಕರ್ನಾಟಕದ 865 ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೆ ಮುಂದಾಗಿದ್ದು, ಆಮೂಲಕ ಕರ್ನಾಟಕ ರಾಜ್ಯಕ್ಕೆ ಅವಮಾನ ಮಾಡಿದೆ. ನಮ್ಮ ಪ್ರಾಣ ಹೋದರೂ ಸರಿ ನಮ್ಮ ನೆಲ, ಜಲ, ಭಾಷೆ ರಕ್ಷಣೆ ಮಾಡಿಕೊಳ್ಳುತ್ತೇವೆ. ನಾವು ಗಡಿ ಭಾಗದ ಒಂದೇ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ಬಿಟ್ಟು ಕೊಡುವುದಿಲ್ಲ. ಅವರ ಯೋಜನೆ ನಮ್ಮ ನೆಲದಲ್ಲಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ನಮ್ಮ ನೆಲದಲ್ಲಿ, ನಮ್ಮ ಜನರ ಆರೋಗ್ಯ ರಕ್ಷಿಸಲು ನಮಗೆ ತಾಕತ್ತು ಇಲ್ಲವೇ? ನಮ್ಮ ನೆಲದಲ್ಲಿ ಯೋಜನೆ ಜಾರಿ ಮಾಡಲು ಮಹಾರಾಷ್ಟ್ರ ಸರಕಾರಕ್ಕೆ ಅನುಮತಿ ಕೊಟ್ಟವರು ಯಾರು? ನಮಗೇಕೆ ಬೇಕು ಅವರ ಭಿಕ್ಷೆ. ನಮ್ಮ ಜನರ ಅರೋಗ್ಯ ರಕ್ಷಣೆ ಮಾಡಲು ರಾಜ್ಯ ಬಿಜೆಪಿ ಸರಕಾರದ ಬಳಿ ಹಣ ಇಲ್ಲವೇ? ಈ ಸರಕಾರವೇನಾದರೂ ದಿವಾಳಿ ಆಗಿದೆಯೇ? ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರ ರಾಜಕೀಯ ಕಾರಣಗಳಿಗೆ ಕನ್ನಡಿಗರ ಹಿತಾಸಕ್ತಿ ಬಲಿ ಕೊಡಲು ಮುಂದಾಗಿದೆ. ಕನ್ನಡಿಗರ ಸ್ವಾಭಿಮಾನ, ಮರ್ಯಾದೆ ಹರಾಜು ಹಾಕುತ್ತಿದೆ. ಇದರ ವಿರುದ್ಧ ಕನ್ನಡ ಪರ ಸಂಘಟನೆಗಳು, ಸಾಹಿತಿಗಳು, ಚಿತ್ರರಂಗದವರು, ಕಲಾವಿದರು, ಬುದ್ಧಿಜೀವಿಗಳು ಧ್ವನಿ ಎತ್ತಬೇಕು ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.

''ಇಂತಹ ಅನೇಕ ಸನ್ನಿವೇಶಗಳಲ್ಲಿ ನೀವು ಧ್ವನಿ ಎತ್ತಿದ್ದರಿಂದಲೇ ಕನ್ನಡಿಗರ ಸ್ವಾಭಿಮಾನ ಉಳಿದುಕೊಂಡು ಬಂದಿದೆ. ಕನ್ನಡ ನೆಲ, ಜಲ, ಭಾಷೆ ರಕ್ಷಣೆ ಆಗಿದೆ. ಈಗಲೂ ಕೂಡ ಅಂತಹುದೆ ಹೋರಾಟಕ್ಕೆ ನಾವು-ನೀವೆಲ್ಲರೂ ಕೈ ಜೋಡಿಸೋಣ. ಕನ್ನಡ ತಾಯಿಯ ಗೌರವ ರಕ್ಷಿಸೋಣ.''

''ನಮ್ಮ ನೆಲದಲ್ಲಿ ಮಹಾರಾಷ್ಟ್ರ ಸರ್ಕಾರ ಯೋಜನೆ ಜಾರಿಗೆ ಮುಂದಾಗಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಣ್ಣುಮುಚ್ಚಿ ಕುಳಿತಿರುವುದು ಈ ಬಿಜೆಪಿ ಸರ್ಕಾರದ ದೌರ್ಬಲ್ಯಕ್ಕೆ ಸಾಕ್ಷಿ. ಮೊದಲಿಂದಲೂ ಬಿಜೆಪಿ ಸರಕಾರ ಇಂತಹ ಮರ್ಯಾದೆಗೇಡಿ ನಡೆಯನ್ನೇ ಮುಂದುವರಿಸಿಕೊಂಡು ಬಂದಿದೆ. ಕನ್ನಡಿಗರನ್ನು ಅವಮಾನಿಸುತ್ತಿದೆ.''

''ಬೊಮ್ಮಾಯಿ ಅವರಿಗೆ ಅಧಿಕಾರದಲ್ಲಿ ಮುಂದುವರಿಯಲು ಯೋಗ್ಯತೆಯಾಗಲಿ, ನೈತಿಕ ಹಕ್ಕಾಗಲಿ ಇಲ್ಲವಾಗಿದೆ. ಇದೊಂದು ನಾಲಾಯಕ್ ಸರ್ಕಾರ. ರಾಜ್ಯ ಹಾಗೂ ಕನ್ನಡಿಗರ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಈ ಸರ್ಕಾರ ವಿಸರ್ಜನೆ ಮಾಡಬೇಕು. ಇಷ್ಟೆಲ್ಲಾ ಆಗುತ್ತಿದ್ದರೂ ಕೇಂದ್ರ ಗೃಹ ಸಚಿವರು ಏನು ಮಾಡುತ್ತಿದ್ದಾರೆ? ಬೇರೆ ರಾಜ್ಯದವರು ನಮ್ಮ ರಾಜ್ಯದಲ್ಲಿ ಅವರ ಯೋಜನೆ ಜಾರಿ ಮಾಡಲು ಹೇಗೆ ಸಾಧ್ಯ? ನಮ್ಮ ಹಿಂದಿನ ಸರ್ಕಾರಗಳು ನಮ್ಮ ಜನರನ್ನು ಹಲವು ದಶಕಗಳಿಂದ ಕಾಪಾಡಿಕೊಂಡು ಬಂದಿವೆ. ಮಹಾರಾಷ್ಟ್ರದ ಈ ನಡೆಯನ್ನು ನಾವು ಖಂಡಿಸುತ್ತೇವೆ.''

'ನಾನು ನಾಳೆಯೇ ಬೆಳಗಾವಿಗೆ ಹೋಗಿ, ಅಲ್ಲಿನ ನಾಯಕರ ಜತೆ ಚರ್ಚೆ ಮಾಡಿ ನಮ್ಮ ನೆಲ ರಕ್ಷಣೆ ಮಾಡಿಕೊಳ್ಳಲು ಹೋರಾಟ ಮಾಡುತ್ತೇವೆ ' ಎಂದು ಶಿವಕುಮಾರ್ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳೇ ಕನ್ನಡಿಗರ ಸ್ವಾಭಿಮಾನವನ್ನು ಮಹಾರಾಷ್ಟ್ರಕ್ಕೆ ಅಡವಿಡ್ತಿದ್ದೀರಾ? ಈಗಲೇ ರಾಜೀನಾಮೆ ನೀಡಿ ಮನೆ ಕಡೆ ನಡೆಯಿರಿ. pic.twitter.com/tjtn9gc3aK

— DK Shivakumar (@DKShivakumar) March 15, 2023
share
Next Story
X