ಫಲಾನುಭವಿಗಳ ಸಮಾವೇಶಕ್ಕೆ ಬೀದಿಬದಿ ವ್ಯಾಪಾರಿಗಳಿಗೆ ಆಹ್ವಾನ: ಸಂಘ ತೀವ್ರ ಆಕ್ರೋಶ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯು ಬೀದಿಬದಿ ವ್ಯಾಪಾರಿಗಳಿಗೆ ಪ್ರಮಾಣ ಪತ್ರ, ಗುರುತಿನ ಚೀಟಿ ವಿತರಣೆ ಮಾಡದೆ ಪಟ್ಟಣ ವ್ಯಾಪಾರ ಸಮಿತಿ ಸಭೆಯನ್ನೂ ನಡೆಸದೆ ಮೇಲಿಂದ ಮೇಲೆ ದಾಳಿಗಳನ್ನು ನಡೆಸಿ ದೌರ್ಜನ್ಯ ಎಸಗುತ್ತಿದೆ. ಆದಾಗ್ಯೂ ಮಾ.16ರಂದು ನಗರದಲ್ಲಿ ನಡೆಯುವ ಫಲಾನುಭವಿಗಳ ಸಮಾವೇಶಕ್ಕೆ ಬೀದಿ ವ್ಯಾಪಾರಿಗಳಿಗೆ ಆಹ್ವಾನ ನೀಡಿರುವುದಕ್ಕೆ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿ ಬೀದಿ ವ್ಯಾಪಾರಿಗಳ ಅಹವಾಲು ಆಲಿಸಲು ಅವಕಾಶ ನೀಡಬೇಕು ಎಂದು ಬೀದಿಬದಿ ವ್ಯಾಪಾರಿಗಳ ಸಂಘದ ನಿಯೋಗವು ಬುಧವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ಒಂದು ವೇಳೆ ಮುಖ್ಯಮಂತ್ರಿಯ ಭೇಟಿಗೆ ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಎಚ್ಚರಿಕೆ ನೀಡಿದ್ದಾರೆ.
Next Story





