ಬೈಂದೂರಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಉಡುಪಿ : ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿ ಯಿಂದ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ.ಸಿ.ಪ್ರಕಾಶ್, ಪೊಲೀಸ್ ನಿರೀಕ್ಷಕ ರಫೀಕ್ ಎಂ., ಬೈಂದೂರು ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಭೂಮಾಪಕಿ ಶೈಲಜಾ, ಶಿರೂರು ಗ್ರಾಪಂ ಪಿಡಿಓ ರಾಜೇಂದ್ರ ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಾರ್ವಜನಿಕರಿಂದ ಒಟ್ಟು 3 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1 ಅರ್ಜಿಯನ್ನು ಸ್ಥಳದಲ್ಲಿ ಇತ್ಯರ್ಥ ಪಡಿಸಿ, 2 ಅರ್ಜಿಗಳಿಗೆ ಪ್ರಪತ್ರ 1 ಮತ್ತು 2ನ್ನು ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಯಿತು.
Next Story





