ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

ಮಂಗಳೂರು : ನಗರದ ಬಂದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಬಂದರ್ ಟೌನ್ ಕಾಂಪೌಂಡ್ ನಿವಾಸಿ ಅಬ್ದುರ‌್ರಶೀದ್ ಎಂಬಾತನನ್ನು ಬಂದರ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗಿ ಬಳಿಕ ಆರೋಪಿಯು ತಲೆಮರೆಸಿಕೊಂಡಿದ್ದ. ಆ ಹಿನ್ನೆಲೆಯಲ್ಲಿ ಬಂಧನಕ್ಕಾಗಿ ಜಾರಿಗೊಳಿಸಲಾಗಿತ್ತು. ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರ ಆರೋಪಿಯಾಗಿದ್ದ, ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಕಣ್ಣೂರು ಕೊಡಕ್ಕಲ್ ಶಿವನಗರ ನಿವಾಸಿ ಪ್ರಕಾಶ್ ಶೆಟ್ಟಿ (25) ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ನ್ಯಾಯಾಲಯದಿಂದ ಸಮ್ಮನ್ಸ್ ವಾರಂಟ್ ಬಂದರೂ ಕೂಡ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 2 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. ಮಾ.14ರಂದು ಆತನನ್ನು ಮನೆಯಿಂದ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.







