ಮಂಗಳೂರು: ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ

ಮಂಗಳೂರು : ವಾಮಂಜೂರಿನಿಂದ ಗುರುಪುರ ಕಡೆಗೆ ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಗುರುಪುರ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಪರಾರಿ ಎಂಬಲ್ಲಿ ಢಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಆರೋಪಿ ಚಾಲಕ ಬಸ್ಸನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಸ್ಕೂಟರ್ ಸವಾರ ಪ್ರಕಾಶ್ ಕುಮಾರ್ (43) ಗಾಯಗೊಂಡಿದ್ದಾರೆ. ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಇನ್ನೊಂದು ವಾಹನವನ್ನು ಓವರ್‌ಟೇಕ್ ಮಾಡಿಕೊಂಡು ಬಂದ ಬಸ್ ಚಾಲಕನು ಸ್ಕೂಟರ್‌ನ ಬಲಬದಿಗೆ ಬಸ್ಸನ್ನು ಢಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಸ್ಕೂಟರ್ ಸಮೇತ ಸವಾರ ರಸ್ತೆಗೆ ಬಿದ್ದಿದ್ದು, ಎಡಗಾಲಿಗೆ ಮೂಳೆ ಮುರಿತವಾಗಿದೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story