Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾವಿನಕಟ್ಟೆ: ಬಂಟ್ವಾಳ ಪ್ರಜಾಧ್ವನಿ...

ಮಾವಿನಕಟ್ಟೆ: ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ

15 March 2023 10:50 PM IST
share
ಮಾವಿನಕಟ್ಟೆ: ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ

ಬಂಟ್ವಾಳ : ದೇಶದ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾಮರಸ್ಯದ ಬದುಕಿಗಾಗಿ ದರಿದ್ರ ಬಿಜೆಪಿಯನ್ನು ತೊಲಗಿಸಲು ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ವಿಧಾನ ಸಭಾ ಸದಸ್ಯ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕಾದ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಅವರು ಹೇಳಿದರು.

ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯುತ್ತಿರುವ “ಬಂಟ್ವಾಳ ಪ್ರಜಾಧ್ವನಿ” ಯಾತ್ರೆಯ 4ನೇ ದಿನ  ಮಾವಿನಕಟ್ಟೆ ಜಂಕ್ಷನ್ನಿನಲ್ಲಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕಳೆದ 70 ವರ್ಷಗಳಲ್ಲಿ ದೇಶದ ಅಭಿವೃದ್ಧಿಯಲ್ಲಿ ಮಹತ್ತರವಾದ ಕೊಡುಗೆಯನ್ನು ನೀಡಿದ ಕಾಂಗ್ರೆಸನ್ನು ಪ್ರಶ್ನಿಸುವ  ಬಿಜೆಪಿಯವರು ಕಳೆದ ಎರಡು ಅವಧಿಯಲ್ಲಿ ಎಲ್ಲವನ್ನೂ ಮಾರಿ ಇದೀಗ ಎಲ್ಲೈಸಿಯನ್ನು ಖಾಸಗೀಕರಣಗೊಳಿಸಲು ಮುಂದಾಗಿರುವುದು ಬಿಜೆಪಿಯ ಸಾಧನೆಯೇ ಎಂದು ಪ್ರಶ್ನಿಸಿದರು.

15 ಲಕ್ಷ ಖಾತೆಗೆ, ಕಪ್ಪು ಹಣ ವಾಪಸ್, ಯುವಕರಿಗೆ ಎರಡು ಕೋಟಿ ಉದ್ಯೋಗದಂತಹ ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಇದುವರೆಗೂ ಅದನ್ನು ನಿಭಾಯಿಸಿಲ್ಲ.  ಕಾಂಗ್ರೆಸ್ ಎಂದೂ ಪೊಳ್ಳು ಭರವಸೆ ನೀಡುವುದಿಲ್ಲ. ನುಡಿದಂತೆ ನಡೆಯಲು ಸಾಧ್ಯ ಇರುವ ಭರವಸೆಗಳನ್ನು ಮಾತ್ರ ನೀಡುತ್ತದೆ ಮತ್ತು ಅದನ್ನು ಕಾರ್ಯಗತ ಗೊಳಿಸುತ್ತದೆ ಎಂದರು.

ಮಾಜಿ ಸಚಿವ ಪ್ರಜಾಧ್ವನಿ ಯಾತ್ರೆಯ ಮುಂದಾಳು ಬಿ.ರಮಾನಾಥ ರೈ ಅವರು ಮಾತನಾಡಿ ಬಂಟ್ವಾಳ ಕ್ಷೇತ್ರದ ಜನ ಆರು ಬಾರಿ ನನ್ನನ್ನು ಗೆಲ್ಲಿಸಿದ್ದೀರಿ. ಮೂರು ಬಾರಿ ಮಂತ್ರಿಯಾಗಲು ಸಹಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಸಾಧ್ಯ ಆಗದಿದ್ದರೂ ಕ್ಷೇತ್ರದ ಜನ ತಲೆ ತಗ್ಗಿಸುವ ಕೆಲಸವಂತೂ ನಾನು ಮಾಡಿಲ್ಲ ಎಂಬ ತೃಪ್ತಿ ಇದೆ. ಸಿದ್ಧಾಂತದಲ್ಲಿ ರಾಜಿ ಮಾಡುವ ಕೀಳುಮಟ್ಟದ ರಾಜಕೀಯ ಯಾವತ್ತೂ ರಮಾನಾಥ ರೈ ಮಾಡಿಲ್ಲ. ಆಸೆ-ಆಕಾಂಕ್ಷೆ, ಆಮಿಷ, ಕಮಿಷನ್ ಇದ್ಯಾವುದಕ್ಕೂ ಬಗ್ಗದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನ್ನ ಅವಧಿಯಲ್ಲಿ ಮನಸ್ಸಿಗೆ ಸಮಾಧಾನ ತರುವ ಮಟ್ಟಿಗೆ ಅಭಿವೃದ್ಧಿ ಮಾಡಿದ್ದೇನೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮೂಲಕ ಮನೆ ಬಾಗಿಲಿಗೆ ಕುಡಿಯುವ ನೀರು ಒದಗಿಸಿದ ತೃಪ್ತಿ ಇದೆ ಎಂದ ರಮಾನಾಥ ರೈ ಎಂಎಲ್ಸಿ ಆಗುವ ಅವಕಾಶವನ್ನು ಪಕ್ಷದ ನಾಯಕರು ನೀಡಿದ್ದು, ಅವಕಾಶ ನನ್ನನ್ನು ಅರಸಿ ಬಂದಿದ್ದರೂ ಕ್ಷೇತ್ರದ ಜನರನ್ನು ನಂಬಿ ಅದನ್ನು ತಿರಸ್ಕರಿಸಿ ಜನರಿಂದ ನೇರವಾಗಿ ಆಯ್ಕೆಯಾಗುವ ಅವಕಾಶಕ್ಕಾಗಿ ಮತ್ತೆ ಚುನಾವಣಾ ಕಣಕ್ಕೆ ಬಂದಿದ್ದೇನೆ. ಜನ ಮತ್ತೆ ಕೈ ಹಿಡಿಯುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾನು ಕೊನೆಯ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ, ನನ್ನ ಅವಧಿಯಲ್ಲಿ ಮಂಜೂರಾತಿ ಪಡೆದು ಬಾಕಿಯಾದ ಸೌಹಾರ್ದ ಸೇತುವೆ, ಬೆಂಜನಪದವು ಕ್ರೀಡಾಂಗಣ, ಪಂಜೆ ಮಂಗೇಶ್ವರಾಯರ ಸಮುದಾಯ ಭವನ, ಅಂಬೇಡ್ಕರ್ ಭವನ ಮೊದಲಾದ ಕಾಮಗಾರಿಗಳನ್ನು ಪೂರ್ಣಮಾಡಬೇಕು ಎಂಬ ಕನಸು ನನ್ನದು, ಅದಕ್ಕಾಗಿ ನಾನು ಮತ್ತೊಮ್ಮೆ ಶಾಸಕನಾಗಿ ಆಯ್ಕೆಯಾಗಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಜಾಧ್ವನಿ ಯಾತ್ರೆಯ ಪ್ರಮುಖ ಪಿಯೂಸ್ ಎಲ್ .ರೋಡ್ರಿಗಸ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಮುದಬ್ಬಿರ್ ಅಹಮದ್ ಖಾನ್, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸುದೀಪ್ ಶೆಟ್ಟಿ, ಪ್ರಮುಖರಾದ ಸುದರ್ಶನ ಜೈನ್, ಅಬ್ಬಾಸ್ ಆಲಿ, ವಾಸುಪೂಜಾರಿ, ರಾಜೀವ ಶೆಟ್ಟಿ ಎಡ್ತೂರು, ಕೆ.ಕೆ. ಶಾಹುಲ್ ಹಮೀದ್, ಜಗದೀಶ್ ಕೊಯಿಲ, ಸುರೇಶ್ ಕುಮಾರ್ ನಾವೂರು, ರಝಾಕ್ ಕುಕ್ಕಾಜೆ,  ಶಿವಪ್ಪ ಪೂಜಾರಿ,ಲೋಲಾಕ್ಷ ಶೆಟ್ಟಿ, ಲವೀನಾ ವಿಲ್ಮಾ ಮೋರಸ್, ಸದಾಶಿವ ಬಂಗೇರ, ಖಾದರ್ ಇಖ್ರಾ, ಅರ್ಶದ್ ಸರವು, ಪ್ರವೀಣ್ ರೋಡ್ರಿಗಸ್, ಸಿದ್ದೀಕ್ ಸರವು, ಸಿರಾಜ್ ಮದಕ,  ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಆದಂ ಕುಂಞಿ ಸ್ವಾಗತಿಸಿ, ಸಂಪತ್ ಕುಮಾರ್ ಶೆಟ್ಟಿ ವಂದಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕಾರ್ಯಕ್ರಮ ನಿರೂಪಿಸಿದರು.

share
Next Story
X