Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣೆಗೆರೆ: ರೌಡಿ ಶೀಟರ್ ಹಂದಿ ಅಣ್ಣಿ...

ದಾವಣೆಗೆರೆ: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಯ ಹತ್ಯೆ

15 March 2023 10:53 PM IST
share
ದಾವಣೆಗೆರೆ: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆರೋಪಿಯ ಹತ್ಯೆ

ದಾವಣೆಗೆರೆ: ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಇಬ್ಬರ ಮೇಲೆ, ಗುಂಪೊಂದು ಬುಧವಾರ ದಾಳಿ ನಡೆಸಿದೆ.

ಈ ವೇಳೆ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲೆ ನ್ಯಾಮತಿ ತಾಲೂಕು ಚೀಲೂರು ಸಮೀಪದ ಗೋವಿನಕೋವಿ ಗ್ರಾಮದ ಹಳ್ಳದ ಬಳಿ ಬುಧವಾರ  ಮಧ್ಯಾಹ್ನ ನಡೆದಿದೆ.

ಆಂಜನೇಯ (28) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಮಧು (27) ಗಂಭೀರವಾಗಿ ಗಾಯಗೊಂಡಿದ್ದು, ಈತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರಿಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ಆಗಮಿಸಿದ ಗುಂಪು ಬೈಕ್ ಗೆ ಡಿಕ್ಕಿ ಹೊಡೆಸಿ ಕೆಳಕ್ಕೆ ಬೀಳಿಸಿದೆ. ನಂತರ ಇವರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಕಾರು ರಸ್ತೆ ಬದಿಯ ತೋಟದಲ್ಲಿ ಸಿಲುಕಿ ಬಿದ್ದಿದೆ. ಇದರಿಂದ ಕಾರನ್ನು ಅಲ್ಲಿಯೇ ಬಿಟ್ಟು, ಆರೋಪಿಗಳೆಲ್ಲರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

‘ಆಂಜನೇಯ ಹಾಗೂ ಮಧು ಹರಿಹರ ತಾಲೂಕು ಭಾನುವಳ್ಳಿಯವರಾಗಿದ್ದಾರೆ. ಚಾಲಕ ವೃತ್ತಿ ಕೆಲಸ ಮಾಡುತ್ತಿದ್ದರು. ಇವರಿಬ್ಬರ ವಿರುದ್ದ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಪಟ್ಟಿ ತೆರೆಯಲಾಗಿದೆ. ಇವರ ಮೇಲೆ ದಾಳಿ ನಡೆಸಿದ ಆರೋಪಿಗಳ ವಿವರ ಕಲೆ ಹಾಕಲಾಗುತ್ತಿದೆ’ ಎಂದು ನ್ಯಾಮತಿ ಪೊಲೀಸ್ ಮೂಲಗಳು ಮಾಹಿತಿ ನೀಡುತ್ತವೆ.

ಘಟನಾ ಸ್ಥಳಕ್ಕೆ ಇನ್ಸ್’ಪೆಕ್ಟರ್ ರಾಘವೇಂದ್ರ ಕಾಂಡಿಕೆ ಸೇರಿದಂತೆ, ನ್ಯಾಮತಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು.ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋರ್ಟ್ ನಿಂದ ಹಿಂದಿರುಗುತ್ತಿದ್ದರು:

ಶಿವಮೊಗ್ಗದ ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದ 8 ಜನ ಆರೋಪಿಗಳಲ್ಲಿ, ಆಂಜನೇಯ ಹಾಗೂ ಮಧು ಕೂಡ ಆಪಾದಿತರಾಗಿದ್ದರು. ಇತರೆ ಆರೋಪಿಗಳ ಜೊತೆ ಜೈಲು ಸೇರಿದ್ದ ಇವರಿಬ್ಬರು, ಜಾಮೀನಿನ ಮೇಲೆ ಹೊರಬಂದಿದ್ದರು. ಇದೇ ಪ್ರಕರಣದ ವಿಚಾರಣೆಗಾಗಿ ಬುಧವಾರ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕೋರ್ಟ್ ಗೆ ಆಗಮಿಸಿ ಬೈಕ್ ನಲ್ಲಿ ಹಿಂದಿರುಗುತ್ತಿದ್ದ ವೇಳೆ, ಸ್ಕಾರ್ಪಿಯೋ ಕಾರಿನಲ್ಲಿ ಆಗಮಿಸಿದ ಗುಂಪು ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಇವರಿಬ್ಬರ ಮೇಲೆ ದಾಳಿಗೆ ಸ್ಪಷ್ಟ ಕಾರಣಗಳು ಇ ತಿಳಿದುಬಂದಿಲ್ಲ. ಹಂದಿ ಅಣ್ಣಿ ಹತ್ಯೆಗೆ ಪ್ರತೀಕಾರವಾಗಿ ದಾಳಿ ನಡೆದಿದೆಯೇ? ಅಥವಾ ಬೇರೆ ಕಾರಣಗಳಿವೆಯೇ? ಎಂಬುವುದು ಪೊಲೀಸರ ತನಿಖೆಯ ನಂತರವಷ್ಟೆ ಸ್ಪಷ್ಟವಾಗಬೇಕಾಗಿದೆ.

ಈ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅರೋಪಿತರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
 

share
Next Story
X