Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ...

ಮಂಗಳೂರು: ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಮೊಬೈಲ್ ಹಸ್ತಾಂತರ

16 March 2023 8:41 PM IST
share
ಮಂಗಳೂರು: ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾದ ಮೊಬೈಲ್ ಹಸ್ತಾಂತರ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಳೆದುಹೋದ ಅಥವಾ ಕಳವಾದ 39 ಮೊಬೈಲ್‌ಗಳನ್ನು ಈಗಾಗಲೆ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದ್ದು,  ಅದನ್ನು ಗುರುವಾರ ಪೊಲೀಸ್ ಆಯುಕ್ತರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಮಾತನಾಡಿದ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಕಳೆದ 5 ತಿಂಗಳಲ್ಲಿ ಕಮಿಷನರೆಟ್ ವ್ಯಾಪ್ತಿಯಲ್ಲಿ 402 ಮಂದಿ ಮೊಬೈಲ್ ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಆ ಪೈಕಿ 124 ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ. 39 ಮೊಬೈಲ್‌ನ್ನು ವಶಪಡಿಸಿಕೊಂಡು ವಾರಸುದಾರರಿಗೆ ಹಸ್ತಾಂತರಿಸಲಾಗುತ್ತಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 7 ಲ.ರೂ.ಗಳಾಗಿವೆ. ಉಳಿದ ಮೊಬೈಲ್‌ಗಳನ್ನು ಕೂಡ ಶೀಘ್ರದಲ್ಲೇ ವಶಪಡೆಯಲಾಗುವುದು ಎಂದರು.

ಸಿಇಐಆರ್ ಪೋರ್ಟಲ್‌ನ್ನು ಪೊಲೀಸರು ಅಥವಾ ಮೊಬೈಲ್ ಕಳೆದುಕೊಂಡವರು ನೇರವಾಗಿ ಬಳಕೆ ಮಾಡಬಹುದು. ಇದರಿಂದ ಮೊಬೈಲ್ ಪೋನ್ ಪತ್ತೆಗೆ ಹಾಗೂ ಅದರ ಮಾಲಕರಿಗೆ ಮರಳಿಸಲು ಅನುಕೂಲ ವಾಗುತ್ತದೆ ಎಂದು ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು.

ಈ ಸಂದರ್ಭ ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್, ಎಸಿಪಿ ಪಿ.ಎ. ಹೆಗಡೆ ಉಪಸ್ಥಿತರಿದ್ದರು.   
*ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್ ಫೋನ್ ಕಳೆದುಕೊಂಡರೆ ಅದನ್ನು ಬ್ಲಾಕ್ ಮಾಡಲು ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್ ಪೋರ್ಟಲ್ (CEIR- Central Equipment Identity Registration Portal). ಮೊಬೈಲ್ ಫೋನ್ ಕಳೆದುಹೋದ ಕೂಡಲೇ  ಹತ್ತಿರದ ಪೊಲೀಸ್ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆ್ಯಪ್‌ನಲ್ಲಿ ದೂರು ಸಲ್ಲಿಸಿ ಸ್ವೀಕೃತಿ/ ಡಿಜಿಟಲ್ ಇ-ಸ್ವೀಕೃತಿ ಪಡೆದುಕೊಳ್ಳಬೇಕು. ಕಳೆದುಕೊಂಡಿರುವ ಮೊಬೈಲ್ ನಂಬರ್‌ನ ನಕಲಿ ಸಿಮ್ ಕಾರ್ಡ್‌ನ್ನು ಈ ಹಿಂದೆ ಸೇವೆ ಪಡೆಯುತ್ತಿದ್ದ ಸರ್ವಿಸ್ ಪ್ರೊವೈಡರ್‌ನಿಂದ (ಉದಾ: ಏರ್‌ಟೆಲ್, ಜಿಯೋ, ಬಿಎಸ್‌ಎನ್‌ಎಲ್ ಇತ್ಯಾದಿ) ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಓಟಿಪಿ ಪಡೆಯಲು ಅದನ್ನು ಚಾಲನೆ ಮಾಡಿಟ್ಟುಕೊಳ್ಳಬೇಕು. ಅನಂತರ www.ceir.gov.in ವೆಬ್‌ಸೈಟ್‌ನಲ್ಲಿ ಕಳೆದುಕೊಂಡ ಮೊಬೈಲ್ ಫೋನ್‌ನ ಮಾಹಿತಿ ನಮೂದಿಸಬೇಕು. ಮಾಹಿತಿ ನಮೂದಿಸಿದ 24 ಗಂಟೆಗಳೊಳಗೆ ಮೊಬೈಲ್‌ಫೋನ್ ಬ್ಲಾಕ್ ಆಗುತ್ತದೆ. ಒಂದು ವೇಳೆ ಮೊಬೈಲ್ ಫೋನ್ ಪತ್ತೆಯಾದರೆ CEIR ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅನ್‌ಬ್ಲಾಕ್ ಮಾಡಿ ಉಪಯೋಗಿಸಬಹುದು ಎಂದು ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮಾಹಿತಿ ನೀಡಿದರು.

share
Next Story
X