ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಮುಲ್ಕಿ ಪಟ್ಟಣ ಪಂಚಾಯತ್ ಜೆಇಗೆ ಜೈಲು ಶಿಕ್ಷೆ, ದಂಡ

ಮಂಗಳೂರು, ಮಾ.16: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿಗಳಿಸಿದ ಆರೋಪ ಎದುರಿಸುತ್ತಿದ್ದ ಮುಲ್ಕಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎನ್.ಕೆ. ಪದ್ಮನಾಭಗೆ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಗುರುವಾರ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆರೋಪಿಯು 4 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕು. 26.50 ಲಕ್ಷ ರೂ. ದಂಡ ಪಾವತಿಸಬೇಕು. ದಂಡ ತೆರಲು ತಪ್ಪಿದರೆ ಮತ್ತೆ 6 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ. ಜಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಜೂನಿಯರ್ ಇಂಜಿನಿಯರ್ ಪದ್ಮನಾಭ ತನ್ನ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ಕಾನೂನು ಕ್ರಮ ಜರಗಿಸಿದ್ದರು.
ಈ ಬಗ್ಗೆ ಅಂದಿನ ಇನ್‌ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ತನಿಖೆ ನಡೆಸಿದ್ದರೆ, ಇನ್‌ಸ್ಪೆಕ್ಟರ್ ಭಾರತಿ ಜಿ. ಚಾರ್ಜ್ ಶೀಟ್ ಸಲ್ಲಿಸಿದ್ದರು. ಸರಕಾರದ ಪರವಾಗಿ ರವೀಂದ್ರ ಮನ್ನಿಪ್ಪಾಡಿ ವಾದಿಸಿದ್ದರು ಎಂದು ಲೋಕಾಯುಕ್ತ ಎಸ್ಪಿ ಸೈಮನ್ ತಿಳಿಸಿದ್ದಾರೆ.
Next Story